ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ವಿಜಯ ಕೋಟ್ಯಾನ್ ನೇಮಕ.

99.7K Views 26 Sep 2025

ಮಂಗಳೂರು-ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನ್ನಡ ಜಾಗೃತಿ ಸಮಿತಿಗೆ ವಿಜಯ ಕರ್ನಾಟಕದ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಸಹಿತ 6 ಮಂದಿ ಸದಸ್ಯರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ನೇರ ನಡೆ ನುಡಿಯ ಪ್ರತಿಭಾವಂತ ಪತ್ರಕರ್ತರಾಗಿರುವ ವಿಜಯ ಕೋಟ್ಯಾನ್ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ಮಾಧ್ಯಮ ಪ್ರಶಸ್ತಿ ಪುರಸ್ಕೃತರು. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿಯಾಗಿ,ಮಂಗಳೂರು ಪ್ರೆಸ್ ಕ್ಲಬ್ ನ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಅವರಿಗೆ mpmlasnews ಅಭಿನಂದನೆಗಳನ್ನು ಸಲ್ಲಿಸುತ್ತದೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top