ಪರಿಸರದ ಸ್ವಚ್ಛತೆ ಜನತೆಯ ಜವಾಬ್ದಾರಿ-ರವೀಂದ್ರ ಶೆಟ್ಟಿ ಉಳಿದೊಟ್ಟು

116.2K Views 4 Oct 2025

ಮಂಗಳೂರು : ಪರಿಸರ ಸ್ವಚ್ಛವಾಗಿದ್ದರೆ ಊರಿನ ಸುಂದರತೆ ಜತೆಗೆ ಸಾಂಕ್ರಾಮಿಕ‌ ರೋಗಗಳು ದೂರವಾಗಿ ಆರೋಗ್ಯಕರ ಸಮಾಜ ನಿರ್ಮಾಣವಾಗುತ್ತದೆ. ಹಾಗಾಗಿ ಸ್ವಚ್ಛತೆ ಕಾಪಾಡಲು ಸಹಕರಿಸುವುದು ನಾಗರಿಕರ ಜವಾಬ್ದಾರಿಯಾಗಿದೆ ಎಂದು ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು.
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್, ರೋಶನಿ ನಿಲಯ ಕಾಲೇಜಿನ ಎನ್ ಎಸ್ ಎಸ್ ಘಟಕ ಮತ್ತು ಗ್ಲೋಬಲ್ ಇ ಕೋ ಗ್ರೀನ್ ಫೌಂಡೇಶನ್ ಹಭಾಗಿತ್ವದಲ್ಲಿ ಮಂಗಳವಾರ ನಗರದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.


ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಅಧ್ಯಕ್ಷ ಭಾಸ್ಕರ ರೈ ಕಟ್ಟ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ,ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಕರ್ತರ ಸಂಘದ ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್, ರೋಟರಿ ಪದಾಧಿಕಾರಿ ಜಾಕ್ಸನ್ ಅತಿಥಿಗಳಾಗಿ ಭಾಗವಹಿಸಿದ್ದರು.
ನಗರದ ತಾಲೂಕು ಪಂಚಾಯತ್ ಕಚೇರಿಯಿಂದ ರೈಲು ನಿಲ್ದಾಣದವರೆಗಿನ ರಸ್ತೆ ಬದಿಯನ್ನು
ರೋಶನಿ ನಿಲಯ ಕಾಲೇಜಿನ ಎನ್ ಎಸ್ ಎಸ್ ಘಟಕದ ವಿದ್ಯಾರ್ಥಿ ಗಳು ಸ್ವಚ್ಛಗೊಳಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top