ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ನಾಳೆ ಅಂಚೆ ಚೀಟಿ ಬಿಡುಗಡೆ

103.4K Views 5 Oct 2025

ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 6 ರಂದು ಬೆಳಿಗ್ಗೆ 10.45 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಭಾರತೀಯ ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಸುಧಾಕರ್ ಮಲ್ಯ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು ಗೌರವ ಉಪಸ್ಥಿರಿರುವರೆಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇ0ದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top