ಎನ್ ನಾಗೇಂದ್ರ ಅವರಿಗೆ ವಿಶ್ವೇಶ್ವರಯ್ಯ ಇಂಟರ್ನ್ಯಾಷನಲ್ ಪ್ರಶಸ್ತಿ

90.3K Views 18 Oct 2025

ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್,ಅಖಿಲ ಭಾರತ ಕನ್ನಡ ಕವಿಗಳ ಕಾವ್ಯ ಪರಿಷತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು,ಇವರ ಸಹ ಯೋಗದೊಂದಿಗೆ ದಿ. 16.10.2025 ರಂದು ನಡೆದ ಅಖಿಲ ಭಾರತ ಕನ್ನಡ ಕವಿಗಳ ಪ್ರಥಮ ಸಮ್ಮೇಳನ ಕಾರ್ಯಕ್ರಮದಲ್ಲಿ ಶ್ರೀ ಎನ್. ನಾಗೇಂದ್ರ ರವರ ಗಾಯನ ಕ್ಷೇತ್ರ ಹಾಗೂ ಬಹುಮುಖ ಪ್ರತಿಭೆ ಸಾಧನೆ ಇವುಗಳನ್ನ ಪರಿಗಣಿಸಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿಶ್ವೇಶ್ವರಯ್ಯ ಅಂತರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿರುತ್ತಾರೆ.


ಮಾಜಿ ಲೋಕಾಯುಕ್ತರು ಹಾಗೂ ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯ ನ್ಯಾಯಮೂರ್ತಿಗಳು ಆದ ಡಾ. ಏನ್ ಸಂತೋಷ್ ಹೆಗ್ಡೆ ರವರು ಈ ಪ್ರಶಸ್ತಿಯನ್ನು ಪ್ರಧಾನ ಮಾಡಿರುತ್ತಾರೆ.
ಈ ಸಂದರ್ಭದಲ್ಲಿ ಸಮ್ಮೇಳನ ಅಧ್ಯಕ್ಷರಾದ ಡಾ. ಸಿ ಸೋಮಶೇಖರ್,ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷರು,ಡಾ. ಎಮ್ ಎಸ್ ಮುತ್ತುರಾಜ್, ಕರ್ನಾಟಕ ಸವಿತಾ ಸಮಾಜ ಅಧ್ಯಕ್ಷರು, ಶ್ರೀ ಶ್ರೀ ಶ್ರೀ ಪ್ರಭು ಚನ್ನಬಸವ ಮಹಾಸ್ವಾಮಿಗಳು ಅಥಣಿ, ಶ್ರೀ ಶ್ರೀ ರಮಾನಂದ ಗುರೂಜಿ, ದೊಡ್ಡನಗುಡ್ಡೆ ಉಡುಪಿ ಹಾಗೂ ಎಸ್ ಜಿ ನಂಜಯ್ಯನಮಠ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷರು ಕರ್ನಾಟಕ ಸರ್ಕಾರ,ಇವರು ಹಾಜರಿರುತ್ತಾರೆ.


ಈ ಕಾರ್ಯಕ್ರಮ ಅಕ್ಟೋಬರ್ 15 ರಂದು ನವ ದೆಹಲಿಯ ನೆಹರು ಭವನದಲ್ಲಿ ಜರುಗಬೇಕಾಗಿತ್ತು ಸರ್ಕಾರಿ ಕಾರ್ಯಕ್ರಮಗಳ ನಿಮಿತ್ತ ಕಾರಣದಿಂದಾಗಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ಮುಂದೂಡಲಾಗಿತ್ತು

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top