ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆ ಗೊಂಡ ಐಕಳ ಹರೀಶ್ ಶೆಟ್ಟಿ. ಒಕ್ಕೂಟದ 29ನೇ ವಾರ್ಷಿಕ ಮಹಾಸಭೆ ಮತ್ತು ಬಹಿರಂಗ ಅಧಿವೇಶನದಲ್ಲಿ ಸಾಧಕರಿಗೆ ಸನ್ಮಾನ. ಸಂಭ್ರಮ ಸಡಗರದ ಕಾರ್ಯಕ್ರಮಕ್ಕೆ ಸಾಕ್ಷಿಯಾದ ಗಣ್ಯಾತಿಗಣ್ಯರು ಮತ್ತು ಬಂಟ ಸಮಾಜ ಬಾಂಧವರು.

103.3K Views 26 Nov 2025

ಮಂಗಳೂರು-ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇದರ 29ನೇ ವಾರ್ಷಿಕ ಮಹಾಸಭೆ, ಬಹಿರಂಗ ಅಧಿವೇಶನ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಬಂಟ್ಸ್ ಹಾಸ್ಟೆಲ್ ಬಳಿಯ ಬಂಟರ ಯಾನೆ ನಾಡವರ ಮಾತೃ ಸಂಘದ ಮೈದಾನದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಪುನರಾಯ್ಕೆ ಗೊಂಡರು.ಅವರು ಅಧ್ಯಕ್ಷ ಅವಧಿಯಲ್ಲಿ ತೋರಿದ ಉತ್ತಮ ನಿರ್ವಹಣೆಯೇ ಇದಕ್ಕೆ ಕಾರಣ.ಜೊತೆಗೆ,ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು, “ಸುಸಂಸ್ಕೃತ ಸಮಾಜಕ್ಕೆ ಇನ್ನೊಂದು ಹೆಸರೇ ನಮ್ಮ ಬಂಟ ಸಮಾಜ. ಲಕ್ಷ್ಮಿ, ಜ್ಞಾನ ಶಕ್ತಿ, ಕ್ರಿಯಾ ಶಕ್ತಿ ಎಲ್ಲವೂ ಒಗ್ಗೂಡಿದಾಗ ಸಮಾಜದ ಶ್ರೇಯಸ್ಸು ಸಾಧ್ಯ. ಬಂಟ ಸಮಾಜಕ್ಕೆ ರಾಜ್ಯವನ್ನು ಆಳುವ ಸಾಮರ್ಥ್ಯವಿದೆ. ನಮ್ಮ ಬಂಟರು ವಿಶ್ವದೆಲ್ಲೆಡೆ ಇದ್ದಾರೆ. ಅವರೆಲ್ಲಾ ಒಗ್ಗೂಡಿದರೆ ರಾಷ್ಟ್ರ ಸುಭದ್ರವಾಗುತ್ತದೆ“ ಎಂದರು. ವಿಧಾನಸಭಾ ಸ್ಪೀಕರ್ ಯು.ಟಿ ಖಾದರ್ ಮಾತಾಡಿ, “ಜಿಲ್ಲೆಯ ಬೇರೆಲ್ಲಾ ಸಂಘಗಳಿಗೆ ಮಾದರಿಯಾಗಿ ನಮ್ಮ ಜಿಲ್ಲೆಗೆ ಗೌರವ ತಂದ ಸಂಘ ಏನಾದರೂ ಇದ್ದರೆ ಅದು ಬಂಟರ ಸಂಘ. ಬಂಟ ಸಮಾಜದ ಜೊತೆಗೆ ಎಲ್ಲಾ ಸಮಾಜವನ್ನು ಜೊತೆಗೆ ಕೊಂಡೊಯ್ಯುವ ತಾಕತ್ತು ಈ ಸಂಘಕ್ಕಿದೆ. ಭಿನ್ನಾಭಿಪ್ರಾಯ ಇದ್ದಾಗ ಎಲ್ಲಾ ವರ್ಗದ ಜನರನ್ನು ಪ್ರೀತಿ ವಿಶ್ವಾಸದಿಂದ ಗೆಲ್ಲುವ ಮೂಲಕ ಸಾಮರಸ್ಯವನ್ನು ಸ್ಥಾಪಿಸುವ ಮಹತ್ತರ ಜವಾಬ್ದಾರಿ ಸಾಮಾಜಿಕ ಸಂಘಟನೆಗಳಿವೆ. ಅದನ್ನು ಎಲ್ಲ ಸಂಘ ಸಂಸ್ಥೆಗಳು ಪಾಲಿಸಬೇಕು” ಎಂದರು.


ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮಾತನಾಡಿ, “ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರಂತರವಾಗಿ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಮಾಡುತ್ತಿದೆ. ಸಂಘ ಏನೇ ಸಾಧನೆ ಮಾಡಬೇಕಿದ್ರೂ ಅದಕ್ಕೆ ದಾನಿಗಳ ನೆರವು ಮತ್ತು ನಿರಂತರ ಪ್ರೋತ್ಸಾಹ ಅಗತ್ಯ. ನಮ್ಮ ಬೆನ್ನುತಟ್ಟುವ ದಾನಿಗಳು ಸದಾ ಜೊತೆಗಿರುವುದು ನಮ್ಮ ಯಶಸ್ಸಿನ ಸೂತ್ರಧಾರಿಗಳು“ ಎಂದರು. ಯುಎಇ ಅಧ್ಯಕ್ಷರಾದ ವಕ್ವಾಡಿ ಪ್ರವೀಣ್ ಶೆಟ್ಟಿ ಮಾತನಾಡಿ, “ನಾನು ಬಂಟರ ಸಂಘಕ್ಕೆ ಬರಲು ಐಕಳ ಹರೀಶ್ ಶೆಟ್ಟಿ ಅವರೇ ಕಾರಣ. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನೂತನ ಪದಾಧಿಕಾರಿಗಳಿಗೆ ಅಭಿನಂದನೆಗಳು. ಹೊಸ ತಂಡ ಉತ್ಸಾಹದಿಂದ ಕಾರ್ಯ ನಿರ್ವಹಿಸುವ ಮೂಲಕ ನಿರ್ಮಾಣ ಆಗಬೇಕಿರುವ ನೂತನ ಕಟ್ಟಡಕ್ಕೆ ಎಲ್ಲರೂ ಧನಸಹಾಯ ನೀಡಬೇಕು” ಎಂದರು.
ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡಿ, “ವಿಶ್ವದ ಎಲ್ಲಾ ಬಂಟರು ಬೇಧಭಾವ ಮರೆತು ಒಂದಾಗಬೇಕು. ಬಂಟ ಸಂಘಟನೆ ಮಾಡುವ ಸಾಮಾಜಿಕ ಕಾರ್ಯ ಚಟುವಟಿಕೆಗಳಲ್ಲಿ ಎಲ್ಲರೂ ಮುಕ್ತ ಮನಸ್ಸಿನಿಂದ ತೊಡಗಿಕೊಳ್ಳಬೇಕು” ಎಂದರು. ಸಮಾರಂಭದಲ್ಲಿ ಕರ್ನಾಟಕ ರಾಜ್ಯೋತ್ಸವ, ಜಿಲ್ಲಾ ರಾಜ್ಯೋತ್ಸವ, ಪತ್ರಕರ್ತರಿಗೆ ಹಾಗೂ ಸಾಧಕರಿಗೆ ಸನ್ಮಾನ ಮಾಡಲಾಯಿತು. ವೇದಿಕೆಯಲ್ಲಿ ಬಂಟರ ಯಾನೆ ನಾಡವರ ಮಾತೃಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಅಶೋಕ್ ಶೆಟ್ಟಿ ಬಿಲ್ಲಾಡಿ, ಉಮಾ ಕೃಷ್ಣ ಶೆಟ್ಟಿ, ಶಶಿಧರ್ ಶೆಟ್ಟಿ ಇನ್ನಂಜೆ, ಅಜಿತ್ ಶೆಟ್ಟಿ, ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಜಯಕರ ಶೆಟ್ಟಿ ಇಂದ್ರಾಳಿ, ಕೋಶಾಧಿಕಾರಿ ಮೋಹನ್ ದಾಸ್ ಶೆಟ್ಟಿ, ಜೊತೆ ಕಾರ್ಯದರ್ಶಿ ಚಂದ್ರಹಾಸ್ ಶೆಟ್ಟಿ ರಂಗೋಲಿ, ಅಜಿತ್ ಹೆಗ್ಡೆ ಪುಣೆ, ಮುನಿಯಾಲು ಉದಯ ಕುಮಾರ್ ಶೆಟ್ಟಿ, ಗಿರೀಶ್ ಶೆಟ್ಟಿ ತೆಳ್ಳಾರ್, ಪೃಥ್ವಿರಾಜ್ ರೈ, ಎಸಿ ಭಂಡಾರಿ, ಸುಧಾಕರ್ ಎಸ್ ಪೂಂಜಾ, ಮಂಜುನಾಥ್ ಶೆಟ್ಟಿ ಕೊಡ್ಲಾಡಿ, ಆನಂದ್ ಶೆಟ್ಟಿ ಎಕ್ಕಾರ್, ನಾಗೇಶ್ ಶೆಟ್ಟಿ, ಅನಿಲ್ ಶೆಟ್ಟಿ, ರಾಜೀವ್ ಭಂಡಾರಿ, ಒಕ್ಕೂಟದ ಸಂಚಾಲಕ ಬಾಲಕೃಷ್ಣ ರೈ ಕೊಲ್ಲಾಡಿ ಮತ್ತಿತರರು ಉಪಸ್ಥಿತರಿದ್ದರು.


ಒಕ್ಕೂಟದ ಉಪಾಧ್ಯಕ್ಷ ಕರ್ನಿರೆ ವಿಶ್ವನಾಥ ಶೆಟ್ಟಿ ಪ್ರಾಸ್ತಾವಿಕ ಮಾತನ್ನಾಡಿದರು. ನಿತೇಶ್ ಶೆಟ್ಟಿ ಎಕ್ಕಾರ್, ಪ್ರಿಯಾ ಹರೀಶ್ ಶೆಟ್ಟಿ, ರಾಜೇಶ್ವರಿ ಡಿ ಶೆಟ್ಟಿ ಸುರತ್ಕಲ್ ಕಾರ್ಯಕ್ರಮ ನಿರೂಪಿಸಿದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top