ಕಾ.ಕ.ನಿ. ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿ.ಎಂ. ಹನೀಫ್ ರಿಗೆ ದ.ಕ ಜಿಲ್ಲಾ ಪತ್ರಕರ್ತರ ಸಂಘದಿಂದ ಗೌರವಾರ್ಪಣೆ

104.5K Views 30 Nov 2025

ಮಂಗಳೂರು,ನ.30;ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ,ನೂತನ ಅಧ್ಯಕ್ಷರಾಗಿ ಮರುಆಯ್ಕೆ ಯಾಗಿರುವ ಶಿವಾನಂದ ತಗಡೂರು ಅವರು ನವೆಂಬರ್ ಶನಿವಾರ ಕಾಸರಗೋಡು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಂಜೆ ದಕ್ಷಿಣ ಕನ್ನಡ ಜಿಲ್ಲೆಯ ಪತ್ರಿಕಾ ಭವನಕ್ಕೆ ಆಗಮಿಸಿ,ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.ನೂತನ ಪದಾಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿ ರಾಜ್ಯ ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ಅವರು ಪತ್ರಕರ್ತ ನಾಗಿ ತಮ್ಮ ಹುಟ್ಟೂರಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಡ್ಡರ್ಸೆ ರಘುರಾಮ ಶೆಟ್ಟಿಯವರ ಸಂಪಾದಕರಾಗಿದ್ದ ಸಂದರ್ಭದಲ್ಲಿ ಮುಂಗಾರು ಪತ್ರಿಕೆ ಬಳಿಕ ಪ್ರಜಾವಾಣಿ ಪತ್ರಿಕೆಯಲ್ಲಿ ತಾವು ಕಾರ್ಯ ನಿರ್ವಹಿಸಿದ ತಮ್ಮ ಅನುಭವವನ್ನು ಹಂಚಿಕೊಂಡರು.

ಈ ಸಂದರ್ಭದಲ್ಲಿ ರಾಜ್ಯೋತ್ಸವ ಪುರಸ್ಕೃತ ಬಿ.ಎಂ.ಹನೀಫ್ ಹಾಗೂ ರಾಜ್ಯ ಸಂಘದ ಅಧ್ಯಕ್ಷರಾಗಿ ಪುನರಾಯ್ಕೆಯಾದ ಶಿವಾನಂದ ತಗಡೂರು ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಕಾರ್ಯ ನಿರತ ಪತ್ರಕರ್ತರ ಸಂಘದ ವತಿ ಯಿಂದ ಅಭಿನಂದಿಸಿ ಗೌರವಿಸಲಾಯಿ ತು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಪುಷ್ಪರಾಜ್ ಬಿ.ಎನ್ ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಹಾಗೂ ನಿಕಟ ಪೂರ್ವ ಜಿಲ್ಲಾಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಪೂರ್ವಾ ಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ,ಕಾರ್ಯದರ್ಶಿ ವಿಲ್ಪ್ರೆಡ್ ಡಿ ಸೋಜ, ಸಿದ್ಧಿಕ್ ನೀರಾಜೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಅಶೋಕ್ ಶೆಟ್ಟಿ ಬಿ.ಎನ್, ಭುವನೇಶ್, ಸಂದೀಪ್ ವಾಗ್ಲೆ,ಎಂ. ಲಕ್ಷ್ಮೀನಾರಾಯಣ ರಾವ್,ಸಂದೀಪ್ ಕುಮಾರ್, ಅಭಿಷೇಕ್, ಹರೀಶ್ ಆದೂರ್ ಹಾಗೂ ಸುಳ್ಯ ತಾಲೂಕು ಘಟಕದ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಮೂಡಬಿದ್ರೆ ತಾಲೂಕು ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಉಪಾಧ್ಯಕ್ಷ ಆರಿಫ್ ಪಡುಬಿದ್ರೆ ವಂದಿಸಿದರು. ಕೋಶಾಧಿಕಾರಿ ವಿಜಯ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top