ಡಾ. ಮೂಡಂಬೈಲ್ ರವಿ ಶೆಟ್ಟಿ ಅವರಿಗೆ ಪ್ರತಿಷ್ಠಿತ ‘ಕಲಾದರ್ಪಣ ಕನ್ನಡ ಕಣ್ಮಣಿ’ ರಾಷ್ಟ್ರೀಯ ಪ್ರಶಸ್ತಿ ಗೌರವ!

102.2K Views 2 Dec 2025

ಮಂಗಳೂರು: ಜಾಗತಿಕವಾಗಿ ಕರ್ನಾಟಕ ಸಂಸ್ಕೃತಿ ಮತ್ತು ಭಾಷೆಯನ್ನು ಪಸರಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ, ಕರ್ನಾಟಕ ಸಂಘ ಕತಾರ್‌ನ ಅಧ್ಯಕ್ಷರು ಹಾಗೂ ಎಟಿಎಸ್ ಗ್ರೂಪ್‌ನ ವ್ಯವಸ್ಥಾಪಕ ನಿರ್ದೇಶಕರಾದ ದೋಣಿಂಜೆಗುತ್ತು ಡಾ. ಮೂಡಂಬೈಲ್ ರವಿ ಶೆಟ್ಟಿ ಅವರಿಗೆ ಪ್ರತಿಷ್ಠಿತ ಕಲಾದರ್ಪಣ ಕನ್ನಡ ಕಣ್ಮಣಿ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ‘ಕಲಾದರ್ಪಣ ಕನ್ನಡ ಹಬ್ಬ’ ಹಾಗೂ ರಾಜ್ಯೋತ್ಸವ ಸಂಭ್ರಮದ ವೇದಿಕೆಯಲ್ಲಿ ಈ ಸನ್ಮಾನ ನೆರವೇರಿತು.
ಸಾಧನೆಯ ಹಾದಿ ಮತ್ತು ಸೇವೆ
ಡಾ. ರವಿ ಶೆಟ್ಟಿ ಮೂಡಂಬೈಲ್ ಅವರ ನಾಯಕತ್ವದಲ್ಲಿ ಕರ್ನಾಟಕ ಸಂಘ ಕತಾರ್ (KSQ) ತನ್ನ ರಜತ ವರ್ಷೋತ್ಸವ ಸಾಂಸ್ಕೃತಿಕ, ಸಾಮಾಜಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ 25 ವೈವಿಧ್ಯಮಯ ಮೈಲಿಗಲ್ಲು ಕಾರ್ಯಕ್ರಮಗಳ ಆಯೋಜನೆ ಮಾಡುವ ಮೂಲಕ ಯಶಸ್ವಿಯಾಗಿ ಪೂರೈಸಿದೆ.
ನೂರಾರು ಜನರಿಗೆ ವಿದೇಶದಲ್ಲಿ ಉದ್ಯೋಗವನ್ನು ಕೊಡಿಸುವಲ್ಲಿ ಪ್ರಮುಖ ಪಾತ್ರವಹಿಸಿ ಅನೇಕರ ಮನೆಯನ್ನು ಬೆಳಗಿಸುವುದರ ಜೊತೆಗೆ ವಿದೇಶದಲ್ಲಿದ್ದರೂ ಸದಾ ಸ್ವದೇಶದಲ್ಲಿ ತಾನು ಬೆಳೆದ ಊರಿನ ಸರ್ವರಲ್ಲೂ ಉತ್ತಮ ಬಾಂಧವ್ಯ ಇರಿಸಿಕೊಂಡು ಸರ್ವರ ಮೆಚ್ಚುಗೆಗೆ ಪಾತ್ರರಾದ ಪುತ್ತೂರಿನ ಕಣ್ಮಣಿ ರವಿ ಶೆಟ್ಟಿಯವರು ಕತಾರ್‌ನಲ್ಲಿ ಸಾಂಪ್ರದಾಯಿಕ ಕಲೆ ಯಕ್ಷಗಾನ ಮತ್ತು ದೇಸಿ ಕ್ರೀಡೆ ಕಬಡ್ಡಿಯನ್ನು ಇವರ ನಾಯಕತ್ವದಲ್ಲಿ ಪರಿಚಯಿಸಿರುವುದು ಉಲ್ಲೇಖನೀಯ.
ತುಳುಕೂಟ ಕತಾರ್ (ಮೂರು ಬಾರಿ ಅಧ್ಯಕ್ಷರು), ಬಂಟ್ಸ್ ಕತಾರ್ (ಸ್ಥಾಪಕ ಅಧ್ಯಕ್ಷರು) ಸೇರಿದಂತೆ ಹಲವು ಸಂಘಟನೆಗಳಲ್ಲಿ ನಾಯಕತ್ವ ವಹಿಸಿ ತಮ್ಮ ತಂಡದ ಜೊತೆ ಉತ್ತಮ ಸಂಘಟನೆಯ ಮೂಲಕ ನಾಡಿನ ಆಚಾರ ವಿಚಾರ ಸಂಸ್ಕೃತಿ ಸಂಸ್ಕಾರವನ್ನು ಹಲವಾರು ಕಲಾವಿದರಿಗೆ ವೇದಿಕೆ ಕಲ್ಪಿಸುವ ಮೂಲಕ ಕತಾರ್ ನಲ್ಲಿ ಪಸರಿಸಿ ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಾಮಾಜಿಕ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.
ಕೃತಜ್ಞತಾ ನುಡಿ
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ರವಿ ಶೆಟ್ಟಿ ಮೂಡಂಬೈಲ್, ಮಕ್ಕಳಿಗೆ ವೇದಿಕೆ ಒದಗಿಸಿ ಸಂಸ್ಕೃತಿಯನ್ನು ಉಳಿಸುತ್ತಿರುವ ಕಲಾದರ್ಪಣದ ಕಾರ್ಯ ಶ್ಲಾಘನೀಯ. ಈ ಗೌರವವು ರಜತ ಮಹೋತ್ಸವದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಕರ್ನಾಟಕ ಸಂಘ ಕತಾರ್‌ನ ನನ್ನ ಸಮರ್ಪಿತ ತಂಡಕ್ಕೆ ಸಲ್ಲುತ್ತದೆ ಎಂದು ಪ್ರಶಸ್ತಿಯನ್ನು ತಮ್ಮ ತಂಡಕ್ಕೆ ಅರ್ಪಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top