ಪುಣೆ: ಬಂಟ್ಸ್ ಅಸೋಸಿಯೇಸನ್ ಪುಣೆ 13ನೇ ವಾರ್ಷಿಕ ಕ್ರೀಡೋತ್ಸವವು ಡಿ. 7ರಂದು ಪುಣೆಯ ಸಾಳುಂಕೆ ವಿಹಾರ್ ರೋಡ್‍ನ ಬ್ಯಾಂಕ್ ಆಫ್ ಮಹಾ ರಾಷ್ಟ್ರಲೇನ್, ವಾನ್ವೋರಿಯರೇಸ್ ಸ್ಪೋಟ್ಸ್ ಕ್ರೀಡಾ ಸಂಕುಲದಲ್ಲಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳೊಂದಿಗೆ ಜರಗಲಿದೆ.
ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 8ರಿಂದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಮುಖ್ಯ ಅತಿಥಿಯಾಗಿ ಹಡಪ್ಪರ್ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಮಹಾದೇವ ಅಣ್ಣಾ ಬಾಬರ್, ಗೌರವ ಅತಿಥಿಯಾಗಿ ಪುಣೆ ಬಂಟರ ಸಂಘದ ಮ್ಯಾರೇಜ್ ಬ್ಯುರೋ ಸಮಿತಿಯ ಕಾರ್ಯಾಧ್ಯಕ್ಷ ಪುಣೆ ತುಳುಕೂಟದ ಉಪಾಧ್ಯಕ್ಷ ಸಮಾಜಸೇವಕ ಮಾಧವ ಆರ್. ಶೆಟ್ಟಿ ಭಾಗವಹಿಸಲಿದ್ದಾರೆ.

ಅಸೋಸಿಯೇಶನ್‍ನ ಕ್ರೀಡಾ ಕಾರ್ಯಾಧ್ಯಕ್ಷ ರಕ್ಷಿತ್ ಶೆಟ್ಟಿ ನೇತೃತ್ವದಲ್ಲಿ ನಡೆಯಲಿರುವ ಕ್ರೀಡಾಕೂಟದಲ್ಲಿ ಅಸೋಸಿಯೇಶನ್ ಮಹಿಳಾ ವಿಭಾಗ, ಯುವ ವಿಭಾಗ ಮತ್ತು ಸರ್ವಸಮಿತಿ ಪದಾಧಿಕಾರಿಗಳ ಸಹಕಾರದೊಂದಿಗೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಈ ಸಂದರ್ಭ ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್‍ನಲ್ಲಿ ಚಿನ್ನದ ಪದಕ ವಿಜೇತ ಪುಣೆಯ ವೈಷ್ಣವಿ ವಸಂತ್ ಶೆಟ್ಟಿ ಅವರನ್ನು ಸಮ್ಮಾನಿಸಲಾಗುವುದು. ಬಂಟ ಸಮಾಜದ ಮಕ್ಕಳು, ಮಹಿಳೆಯರು, ಪುರುಷರು ಸಹಿತ ವಯೋಮಿತಿಗೆ ಅನುಗುಣವಾಗಿ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ವಿಶೇಷ ಆಕರ್ಷಣೆಯಾಗಿ ಪುರುಷರು ಮತ್ತು ಮಹಿಳೆಯರಿಗೆ ಹಗ್ಗಜಗ್ಗಾಟ ಸ್ಪರ್ಧೆಯು ನಡೆಯಲಿದೆ. ಕ್ರೀಡಾ ಸ್ಪರ್ಧಿಗಳು ಹಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು, ನಿಕಟಪೂರ್ವ ಅಧ್ಯಕ್ಷ ಗಣೇಶ್ ಹೆಗ್ಡೆ ಪುಣ್ಚೂರು, ಉಪಾಧ್ಯಕ್ಷರಾದ ಡಾ| ಸುಧಾಕರ್ ಶೆಟ್ಟಿ, ಸತೀಶ್ ರೈ ಕಲ್ಲಂಗಳಗುತ್ತು, ಪ್ರಧಾನ ಕಾರ್ಯದರ್ಶಿ ದಿನೇಶ್ ಶೆಟ್ಟಿ ಪೆಲತ್ತೂರು ಮೇಲ್ಮನೆ, ಕೋಶಾಧಿಕಾರಿ ಸಿಎ ಮನೋಹರ್ ಶೆಟ್ಟಿ, ಕ್ರೀಡಾ ಕಾರ್ಯಾಧ್ಯಕ್ಷ ರಕ್ಷಿತ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೇಷ್ಮಾ ಆರ್. ಶೆಟ್ಟಿ ಮತ್ತು ಯುವವಿಭಾಗದ ಕಾರ್ಯಾಧ್ಯಕ್ಷ ಅದೀಪ್ ಶೆಟ್ಟಿ, ಮಹಿಳಾ ವಿಭಾಗದ ಕ್ರೀಡಾ ಕಾರ್ಯಾಧ್ಯಕ್ಷೆ ಪೂರ್ಣಿಮಾ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




























































































































