ಹೈಕೋರ್ಟ್ ಪೀಠ ಸ್ಥಾಪನೆ ಮುಖ್ಯ ನ್ಯಾಯಮೂರ್ತಿಗಳ ಭೇಟಿ: ಪೂರಕವಾಗಿ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿಗಳು

114.1K Views 6d ago

ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ ಹಾಗೂ ಮಂಗಳೂರಿನಲ್ಲಿ ಸಂಚಾರ ಹೈಕೋರ್ಟ್ ಪೀಠ ಸ್ಥಾಪನೆ ಉದ್ದೇಶಕ್ಕಾಗಿ ಹೈಕೋರ್ಟ್ ಪೀಠ ಹೋರಾಟ ಸಮಿತಿಯ ನಿಯೋಗ ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಮೂರ್ತಿಗಳಾದ ಗೌರವಾನ್ವಿತ ವಿಭು ಬಖ್ರು ರವರನ್ನು ಉಡುಪಿ ಸರ್ಕ್ಯೂಟ್ ಹೌಸ್ ನಲ್ಲಿ ಭೇಟಿಯಾಗಿ ಯಾಗಿ ಮನವಿಯನ್ನು ಸಲ್ಲಿಸಲಾಯಿತು

ಹೋರಾಟ ಸಮಿತಿಯ ಸಂಚಾಲಕರು ವಿಧಾನ ಪರಿಷತ್ ನ ಸದಸ್ಯರಾದ ಶ್ರೀ ಐವನ್ ಡಿಸೋಜ ರವರು ಮನವಿಯನ್ನು ಸಲ್ಲಿಸಿ ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಬಹಳ ಮುಖ್ಯವಾಗಿದ್ದು ಇದರಿಂದ ಸಾಮಾನ್ಯ ಜನರು ದೂರದ ಬೆಂಗಳೂರಿಗೆ ಹೋಗಿ ಕಾನೂನು ಹೋರಾಟದಲ್ಲಿ ತೊಡಗಿಸಿಕೊಳ್ಳಲು ಬಹಳ ಕಷ್ಟವಾಗಿದ್ದು, ಹಾಗೂ ಮಳೆಗಾಲದ ಸಂದರ್ಭದಲ್ಲಿ ದೂರದ ಬೆಂಗಳೂರಿನ ಸಂಪರ್ಕ ಆಗಾಗ ಕಡಿತಗೊಳ್ಳುವುದರಿಂದ ಜನರು ಹೈಕೋರ್ಟಿಗೆ ಸಂಚರಿಸಲು ಕಷ್ಟವನ್ನು ಅನುಭವಿಸಬೇಕಾಗಿದ್ದು ಅಲ್ಲದೆ ಕರಾವಳಿ ಭಾಗ ಉಡುಪಿ ಚಿಕ್ಕಮಂಗಳೂರು ಕೊಡಗು ಜಿಲ್ಲೆಗಳ ದಾವೆಗಳ ವಿಲೇವಾರಿಯಲ್ಲಿ ವಿಳಂಬವಾಗುತ್ತಿದ್ದು ಇದರಿಂದ ಈ ಭಾಗದ ಜನರಿಗೆ ಬಹಳ ತೊಂದರೆಯಾಗುತ್ತಿರುವುದರಿಂದ, ಅಲ್ಲದೆ ಕರ್ನಾಟಕ ರಾಜ್ಯ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳು ಕರಾವಳಿ ಭಾಗದಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಒಲವನ್ನು ತೋರಿಸಿರುವುದರಿಂದ, ಮೊದಲಿಗೆ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪಸುಲು ಒಪ್ಪಿಗೆ ನೀಡಬೇಕೆಂದು ವಿನಂತಿಸಿದರು. ಈ ಮನವಿಗೆ ಪೂರಕವಾಗಿ ಸ್ಪಂದಿಸಿದ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ತಮ್ಮ ಮಾನವೀಯ ಬಗ್ಗೆ ಆದಷ್ಟು ಬೇಗ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಸಮಿತಿಯ ನಿಯೋಗದಲ್ಲಿ ಂಗಳೂರು ವಕೀಲ ಸಂಘದ ಅಧ್ಯಕ್ಷರಾದ ಶ್ರೀ ರಾಘವೇಂದ್ರ ಹೆಚ್‍. ವಿ. ಮಂಗಳೂರಿನ ಪ್ರಧಾನ ಜಿಲ್ಲಾ ಸರಕಾರಿ ವಕೀಲರಾದ ಶ್ರೀ ಎಂ ಪಿ ನರೋನ್ಹ, ಪ್ರಧಾನ ಕಾರ್ಯದರ್ಶಿ ಶ್ರೀಧರ್ ಎಚ್, ಉಡುಪಿ ವಕೀಲರ ಸಂಘದ ಅಧ್ಯಕ್ಷರಾದ ಶ್ರೀ ರೊನಾಲ್ಡ್ ಪ್ರಧಾನ ಕಾರ್ಯದರ್ಶಿ ಶ್ರೀ, ಉಪಾಧ್ಯಕ್ಷ….. ಬ್ರಹ್ಮಾವರ ಅಧ್ಯಕ್ಷರಾದ…. ಉಪಸ್ಥಿತರಿದ್ದರು

Read More News

Scroll to Top