ಡಿಸೆಂಬರ್ 27 ಶ್ರೀ ಲಂಕಾ ಪತ್ರಕರ್ತರ ನಿಯೋಗ ಮಂಗಳೂರು ಭೇಟಿ

113K Views 26 Dec 2025

ಮಂಗಳೂರು,ಶ್ರೀ ಲಂಕಾ ಪತ್ರಕರ್ತರ ನಿಯೋಗ ಡಿಸೆಂಬರ್ 27 ಹಾಗೂ ಡಿಸೆಂಬರ್ 28 ರಂದು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕೈಗೊಂಡಿದೆ.
ಡಿಸೆಂಬರ್ 27 ರಂದು ಮಂಗಳೂರಿಗೆ ನಿಯೋಗ ಆಗಮಿಸಲಿದೆ. ಮಂಗಳೂರು ಪ್ರೆಸ್ ಕ್ಲಬ್ ನಲ್ಲಿ ಪತ್ರಕರ್ತರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಕುಲಶೇಖರದಲ್ಲಿರುವ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ, ಪಿಲಿಕುಳ ನಿಸರ್ಗಧಾಮ, ಕರಾವಳಿ ಉತ್ಸವ, ಮಂಗಳೂರು ಕಂಬಳ, ಯಕ್ಷಗಾನ ಕೂಡಾ ವೀಕ್ಷಿಸಲಿದೆ.
ಡಿಸೆಂಬರ್ 28 ರಂದು ಕರ್ನಾಟಕ ವಿಧಾನ ಸಭೆ ಸಭಾಪತಿ ಯು ಟಿ ಖಾದರ್ ಅವರನ್ನು ನಿಯೋಗ ಭೇಟಿ ಮಾಡಲಿದೆ. ಸ್ವಸಹಾಯ ಗುಂಪುಗಳ ಸದಸ್ಯರು ಹಾಗೂ ಗೊಂಡಂಬಿ ಕಾರ್ಖಾನೆಗೂ ಭೇಟಿ ನೀಡಲಿದ್ದಾರೆ. ಅಲ್ಲದೆ ಮಂಗಳೂರಿನ ಪ್ರೇಕ್ಷಣಿಯ ಸ್ಥಳಗಳನ್ನು ವೀಕ್ಷಿಸಲಿದೆ.
ಶ್ರೀ ಲಂಕಾ ಆರ್ಥಿಕ ಸಚಿವಾಲಯದ ಮಾಜಿ ಮಾಧ್ಯಮ ಕಾರ್ಯದರ್ಶಿ ಹಾಗೂ ಏಶಿಯನ್ ಮೀಡಿಯಾ ಅಸೋಸಿಯೇಷನ್ ನ ಅಧ್ಯಕ್ಷ ಪ್ಯಾಟಮ್ ಪ್ಯಾಸ್ತ್ಯಯುಲ್ ನೇತೃತ್ವದ ನಿಯೋಗದಲ್ಲಿ 6 ಮಂದಿ ಹಿರಿಯ ಪತ್ರಕರ್ತರು ಭಾಗವಹಿಸಲಿದ್ದಾರೆ ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ನಿರ್ದೇಶಕ ಶ್ರೀನಿವಾಸ್ ನಾಯಕ್ ಇಂದಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top