ಶ್ರೀಲಂಕಾ ಪತ್ರಕರ್ತರ ನಿಯೋಗದಿಂದ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ, ಶ್ರೀಲಂಕಾಕ್ಕೆ ಅಹ್ವಾನ

112.5K Views 29 Dec 2025

ಮಂಗಳೂರು, ಮಂಗಳೂರಿಗೆ ಆಗಮಿಸಿದ ಶ್ರೀಲಂಕಾ ಪತ್ರಕರ್ತರ ನಿಯೋಗ ಕರ್ನಾಟಕ ವಿಧಾನ ಸಭೆಯ ಸಭಾಪತಿ ಯು ಟಿ ಖಾದರ್ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿತು. ಅಲ್ಲದೆ ಶ್ರೀಲಂಕಾಕ್ಕೆ ಭೇಟಿ ನೀಡುವಂತೆ ಆಹ್ವಾನಿಸಿದರು.
ಈ ವೇಳೆ ಮಾತನಾಡಿದ ಸ್ಪೀಕರ್ ಯು ಟಿ ಖಾದರ್ ಭಾರತ ಹಾಗೂ ಶ್ರೀ ಲಂಕಾ ಹಿಂದಿನಿಂದಲೂ ಬಹಳಷ್ಟು ಉತ್ತಮ ಸಂಬಂಧ ಹೊಂದಿದೆ. ಮುಂದಿನ ದಿನಗಳಲ್ಲಿ ಶಾಸಕರೊಂದಿಗೆ ಶ್ರೀ ಲಂಕಾಕ್ಕೆ ಭೇಟಿ ನೀಡುವುದಾಗಿ ನಿಯೋಗಕ್ಕೆ ತಿಳಿಸಿದರು. ಕರ್ನಾಟಕ ಪ್ರವಾಸದಲ್ಲಿರುವ ಶ್ರೀ ಲಂಕಾ ಪತ್ರಕರ್ತರ ನಿಯೋಗವನ್ನು ವಿಧಾನ ಸೌಧಕ್ಕೆ ಭೇಟಿ ನೀಡುವಂತೆ ಸ್ಪೀಕರ್ ಅಹ್ವಾನ ನೀಡಿದರು.
ನಿಯೋಗದಲ್ಲಿ ಏಷ್ಯಾನ್ ಮೀಡಿಯಾ ಮತ್ತು ಕಲ್ಚರಲ್ ಅಸೋಸಿಯೇಷನ್ ಅಧ್ಯಕ್ಷ ಪ್ಯಾಟ ಮ್ ಪ್ಯಾಸ್ತುಲ್,ಶ್ರೀ ಲಂಕಾ ಪ್ರಧಾನಿ ಕಚೇರಿ ಮಾಜಿ ಮಾಧ್ಯಮ ಕಾರ್ಯದರ್ಶಿ ನಿಶಾಂತ್ ಅಲ್ವಿಸ್,ಶ್ರೀಲಂಕಾ ಹಿರಿಯ ಪತ್ರಕರ್ತರಾದ ಸಂಜೀವ ತಿಸೆರಾ,ಹೇಮಂತ್ ಕುಮಾರ್ ಸಿಂಘೆ,ದಾಮಿಸಿರಿ ಅಜಿತ್,ತುಷಾರ ಹೆಟ್ಟಿರಾಚಿ , ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ ಉಪಸ್ಥಿತರಿದ್ದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top