ಸುಸ್ಲಾನ್ ಕಾಲೋನಿಯಲ್ಲಿ ಉಚಿತ ವೈದ್ಯಕೀಯ ಶಿಬಿರ

93K Views 31 Dec 2025

ಪಡುಬಿದ್ರಿ: ಬೆಂಗಳೂರಿನ ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರಿನ ಕಣಚೂರು ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ಇವರ ಸಹಭಾಗಿತ್ವ ದಲ್ಲಿ ಶನಿವಾರ ಇಲ್ಲಿನ ಸುಸ್ಲಾನ್ ಕಾಲೋನಿಯಲ್ಲಿ “ಆರೋಗ್ಯವೇ ಭಾಗ್ಯ” ಉಚಿತ ವೈದ್ಯಕೀಯ ಶಿಬಿರ ನಡೆಯಿತು.
ವೈದ್ಯಕೀಯ ಶಿಬಿರವನ್ನು ಉದ್ಘಾಟಿಸಿದ ಮಾಜಿ ಜಿಲ್ಲಾ ಪಂಚಾಯತ ಸದಸ್ಯ ಶಶಿಕಾಂತ್ ಪಡುಬಿದ್ರಿ ಮಾತನಾಡಿ ಇಂತಹ ವೈದ್ಯಕೀಯ ಶಿಬಿರಗಳಿಂದ ಕಾಯಿಲೆಗಳ ಪತ್ತೆ ಆಗುವುದರಿಂದ ಸಕಾಲದಲ್ಲಿ ಚಿಕಿತ್ಸೆ ನೀಡಲು ಸಹಾಯಕ ಆಗುತ್ತದೆ. ಸಂಘಟನೆಯ ಕಾರ್ಯ ಶ್ಲಾಘನೀಯ ಎಂದು ಅವರು ಹೇಳಿದರು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ಎಸ್ ಸಿಡಿಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ವಹಿಸಿದ್ದರು.
ಕಣಚೂರು ಆಯುರ್ವೇದ ಕಾಲೇಜು ವೈದ್ಯಕೀಯಸಲಹೆಗಾರ ಡಾ. ಸುರೇಶ್ ನೆಗಳಗುಳಿ. ಕಣಚೂರು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಕಾರ್ತಿಕೇಯ ಪ್ರಸಾದ್, ಸಹಾಯಕ ಪ್ರಾಧ್ಯಾಪಕ ಡಾ. ಶ್ರೀರಾಮ್,ಕಣಚೂರು ಆಸ್ಪತ್ರೆ, ಸಮಾಜ ಸೇವಕ ರಂಜನ್ ಕುಮಾರ್,ಸುಸ್ಲೋನ್ ಕಾಲೊನಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜಮಾಲ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷೆ ಸೌಮ್ಯ ಶೆಟ್ಟಿ, ಸ್ವಾಗತಿಸಿ, ಪ್ರಸ್ತಾವಿಕವಾಗಿ ಮಾತನಾಡಿದರು.


ಅಖಿಲ ಕರ್ನಾಟಕ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಅನುಪಮಾ ರಾವ್, ನಿರ್ದೇಶಕಿ ಶಿಲ್ಪಾ ಜೋಸೆಫ್ ಮತ್ತಿತರರು ಉಪಸ್ಥಿತರಿದ್ದರು.
ಶರಣ್ಯ ಬೆಳುವಾಯಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ನಡೆದ ವೈದ್ಯಕೀಯ ಶಿಬಿರದಲ್ಲಿ 60 ಕ್ಕು ಹೆಚ್ಚು ಮಂದಿ ವೈದ್ಯಕೀಯ ಸಲಹೆ ಮತ್ತು ಔಷಧಿ ಪಡೆದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top