ಜ.೧೨ರಂದು ರೆಡ್‌ಕ್ರಾಸ್‌ನಿಂದ ರಾಷ್ಟ್ರೀಯ ಯುವ ದಿನಾಚರಣೆ

118.4K Views 10 Jan 2026

ಮಂಗಳೂರು : ಭಾರತೀಯ ರೆಡ್‌ಕ್ರಾಸ್ ಸೊಸೈಟಿ ಮತ್ತು ಯೂತ್ ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕದ ವತಿಯಿಂದ ಸ್ವಾಮಿ ವಿವೇಕಾನಂದರ ೧೬೪ನೇ ಜಯಂತಿ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆ ಜ.೧೨ರಂದು ಬೆಳಗ್ಗೆ ೧೦ಕ್ಕೆ ರೆಡ್‌ಕ್ರಾಸ್ ಶತಮಾನೋತ್ಸವ ಕಟ್ಟಡದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ
ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ವೇದವ್ಯಾಸ ಕಾಮತ್.ಡಿ., ಮಂಗಳಾ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಪ್ರೊ.ಸುಬ್ರಹ್ಮಣ್ಯ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಯುವ ಸಾಧಕರಾದ ವಿಶ್ವಕಪ್ ವಿಜೇತ ಭಾರತೀಯ ಮಹಿಳಾ ಕಬಡ್ಡಿ ತಂಡದ ಆಟಗಾರ್ತಿ ಧನಲಕ್ಷ್ಮಿ ಪೂಜಾರಿ, ಭರತನಾಟ್ಯದಲ್ಲಿ ಗೋಲ್ಡನ್ ಬುಕ್ ವಿಶ್ವ ದಾಖಲೆಯ ವಿಧುಷಿ ದೀಕ್ಷಾ.ಎಸ್. ಮತ್ತು ರಾಷ್ಟ್ರಪತಿ ರೋವರ್ಸ್ ಅವಾರ್ಡ್ ವಿಜೇತ ಪ್ರೀತೇಶ್ ಇವರುಗಳನ್ನು ಸನ್ಮಾನಿಸಲಾಗುವುದೆಂದು ರೆಡ್‌ಕ್ರಾಸ್ ಜಿಲ್ಲಾ ಸಮಿತಿಯ ಕಾರ್ಯದರ್ಶಿ ಕಿಶೋರ್‌ಚಂದ್ರ ಹೆಗ್ಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top