ಜ. 11ರಂದು ವಾರ್ಷಿಕ ಕ್ರೀಡೋತ್ಸವ

100.8K Views 11 Jan 2026

ಪುಣೆ: ಬಂಟರ ಸಂಘ ಪುಣೆ ವತಿಯಿಂದ ಸಮಾಜಬಾಂಧವರಿಗಾಗಿ ವಾರ್ಷಿಕ ಕ್ರೀಡೋತ್ಸವವು ಜ. 11ರಂದು ಬೆಳಿಗ್ಗೆ 8ರಿಂದ ಮುಕುಂದ್ ನಗರದ ಮಹಾರಾಷ್ಟ್ರೀಯ ಮಂಡಲ ಕಟಾರಿಯಾ ಕಾಲೇಜ್ ಗ್ರೌಂಡ್‍ನಲ್ಲಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳೊಂದಿಗೆ ಜರಗಲಿದೆ.
ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ ಗೌರವ ಉಪಸ್ಥಿತಿಯಲ್ಲಿ ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 8ರಿಂದ ಉದ್ಘಾಟನಾ ಸಮಾರಂಭ ಜರಗಲಿದೆ. ಮುಖ್ಯ ಅತಿಥಿಯಾಗಿ ರಾಷ್ಟ್ರೀಯ ಮಟ್ಟದ ಕ್ರೀಡಾಪಟು, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ ರೋಹಿತ್ ಶೆಟ್ಟಿ ಕಟೀಲು, ಗೌರವ ಅತಿಥಿಯಾಗಿ ಮುಂಬಯಿಯ ಮಾಲ್ವಾನ್ ತಡ್ಕ ಗ್ರೂಫ್ ಆಫ್ ರೆಸ್ಟೋರೆಂಟ್‍ನ ಸಿಎಂಡಿ ಆದರ್ಶ್ ಶೆಟ್ಟಿ ಭಾಗವಹಿಸಲಿದ್ದಾರೆ.


ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಬಂಟರ ಸಂಘದ ಶಕುಂತಲಾ ಜಗನ್ನಾಥ್ ಶೆಟ್ಟಿ ಕಲ್ಪವೃಕ್ಷ ಸಮಾಜ ಕಲ್ಯಾಣ ಕ್ರೀಡಾದಾತ ಯೋಜನೆಯ ಪ್ರಾಯೋಜಕ, ಶಬರಿ ಇಂಡಸ್ಟ್ರಿಯಲ್ ಕ್ಯಾಟರಿಂಗ್ ಪ್ರೈ.ಲಿ. ಅಹಿಲ್ಯಾ ನಗರ್ ಸಿಎಂಡಿ ಕೆ.ಕೆ. ಶೆಟ್ಟಿ ಗೌರವ ಅತಿಥಿಯಾಗಿ ಪುಣೆ ಬಂಟ್ಸ್ ಅಸೋಸಿಯೇಶನ್ ಅಧ್ಯಕ್ಷ ರೋಹಿತ್ ಶೆಟ್ಟಿ ನಗ್ರಿಗುತ್ತು ಭಾಗವಹಿಸಲಿದ್ದಾರೆ.
ಬಂಟರ ಸಂಘದ ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಅವರ್ಸೆ ಇಸಾರಮಕ್ಕಿ ನೇತೃತ್ವದಲ್ಲಿ ಬಂಟರ ಸಂಘದ ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ, ಯುವ ವಿಭಾಗ, ಉತ್ತರ, ದಕ್ಷಿಣ, ಪೂರ್ವ, ಪಶ್ಚಿಮ ಪ್ರಾದೇಶಿಕ ಸಮಿತಿಗಳು ಮತ್ತು ಸರ್ವೆ ಸಮಿತಿ ಪದಾಧಿಕಾರಿಗಳ ಸಹಕಾರದೊಂದಿಗೆ ನಡೆಯಲಿರುವ ಕ್ರೀಡೋತ್ಸವದಲ್ಲಿ ಸಮಾಜ ಬಾಂಧವರ ವಯೋಮಿತಿಗೆ ಅನುಗುಣವಾಗಿ ವೈವಿಧ್ಯಮಯ ಕ್ರೀಡಾ ಸ್ಪರ್ಧೆಗಳು ಜರಗಲಿವೆ. ಮಕ್ಕಳಿಗಾಗಿ ವಿವಿಧ ರೀತಿಯ ಓಟ, ಪುರುಷ, ಮಹಿಳೆಯರಿಗಾಗಿ ರನ್ನಿಂಗ್ ರೇಸ್, ಶಾಟ್‍ಪುಟ್ ಇನ್ನಿತರ ಕ್ರೀಡೆಗಳು ನಡೆಯಲಿವೆ. ವಿಶೇಷ ಆಕರ್ಷಣೆಯಾಗಿ ಪುರುಷರಿಗಾಗಿ ವಾಲಿಬಾಲ್, ಮಹಿಳೆಯರಿಗಾಗಿ ತ್ರೋಬಾಲ್, ಪುರುಷರು, ಮಹಿಳೆಯರಿಗಾಗಿ ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿವೆ. ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರನ್ನು ಗೌರವಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಪುಣೆ ಬಂಟರ ಸಂಘ ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಅವರ್ಸೆ ಇಸಾರಮಕ್ಕಿ (9822011736) ಅವರನ್ನು ಸಂಪರ್ಕಿಸಬಹುದು. ಬಂಟ ಕ್ರೀಡಾ ಸ್ಪರ್ಧಿಗಳು ಹಾಗೂ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕ್ರೀಡೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಸಂತೋಷ್ ಶೆಟ್ಟಿ ಇನ್ನ ಕುರ್ಕಿಲ್ ಬೆಟ್ಟು ಬಾಳಿಕೆ, ಅಧ್ಯಕ್ಷ ಅಜಿತ್ ಹೆಗ್ಡೆ ಕೆಂಜಾರುಗುತ್ತು, ಉಪಾಧ್ಯಕ್ಷರಾದ ವಿಶ್ವನಾಥ್ ಶೆಟ್ಟಿ, ರಾಮಕೃಷ್ಣ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸುಧೀರ್ ಶೆಟ್ಟಿ ಕಣಂಜಾರು, ಕೋಶಾಧಿಕಾರಿ ಪ್ರಶಾಂತ್ ಶೆಟ್ಟಿ ಹೆರ್ಡೆಬೀಡು, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಮ್ಮಿ ಎ. ಹೆಗ್ಡೆ, ಕ್ರೀಡಾ ಕಾರ್ಯಾಧ್ಯಕ್ಷ ವಿವೇಕಾನಂದ ಶೆಟ್ಟಿ ಅವರ್ಸೆ ಇಸಾರಮಕ್ಕಿ, ಮಹಿಳಾ ಕ್ರೀಡಾ ಕಾರ್ಯಾಧ್ಯಕ್ಷೆ ವಿನಯಾ ಯು. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಭಿನಂದನ್ ಶೆಟ್ಟಿ, ದಕ್ಷಿಣ, ಉತ್ತರ, ಪೂರ್ವ, ಪಶ್ಚಿಮ ಪ್ರಾದೇಶಿಕ ಸಮಿತಿಗಳ ಕಾರ್ಯಾಧ್ಯಕ್ಷರಾದ ಸುಧಾಕರ್ ಶೆಟ್ಟಿ, ನಾರಾಯಣ ಹೆಗ್ಡೆ, ಸಂದೇಶ್ ಶೆಟ್ಟಿ, ಪ್ರಕಾಶ್ ಶೆಟ್ಟಿ, ವಿನೋದಾ ಶೆಟ್ಟಿ, ಪ್ರೇಮಾ ಶೆಟ್ಟಿ, ಶಾಲಿನಿ ಶೆಟ್ಟಿ, ನಯನಾ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

Scroll to Top