ರಕ್ತದಾನ ಅತ್ಯಂತ ಪುಣ್ಯದ ಕಾರ್ಯ-ಡಾ. ದುರ್ಗಾ ಪ್ರಸಾದ್

118.7K Views 12 Jan 2026

ಮಂಗಳೂರು: ರಕ್ತದಾನ ಅತ್ಯಂತ ಪುಣ್ಯದ ಕಾರ್ಯವಾಗಿದ್ದು , ತುರ್ತು ಸಂದರ್ಭ ಜೀವ ಉಳಿಸಲು ನೆರವಾಗುವ ರಕ್ತದಾನದ ಬಗ್ಗೆ ಯುವ ಜನರಲ್ಲಿ ಹೆಚ್ಚಿನ ಅರಿವು ಮೂಡಿಸುವುದು ಅವಶ್ಯ ಎಂದು ಲೇಡಿಗೋಶನ್ ಅಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ದುರ್ಗಾ ಪ್ರಸಾದ್ ಹೇಳಿದರು.
ಸರ್ಕಾರಿ ಲೇಡಿಗೋಶನ್ ಆಸ್ಪತ್ರೆ, ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿ ದ.ಕ.ಜಿಲ್ಲಾ ಘಟಕ ಮತ್ತು ಕಸ್ತೂರ್ಬಾ ವೈದ್ಯಕೀಯ ಮಹಾ ವಿದ್ಯಾಲಯದ ವತಿಯಿಂದ ಲೇಡಿಗೋಶನ್ ಅಸ್ಪತೆಯಲ್ಲಿ ಸೋಮವಾರ ನಡೆದ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಶಿಬಿರ ಉದ್ಘಾಟಿಸಿದ ನಿವೃತ್ತ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮ ಮಾತನಾಡಿ ‘ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹೆರಿಗೆ ಸಂದರ್ಭ ಅವಶ್ಯ ಇರುವವರಿಗೆ ರೆಡ್‌ಕ್ರಾಸ್ ಬ್ಲಡ್ ಬ್ಯಾಂಕ್ ವತಿಯಿಂದ ಸಂಪೂರ್ಣ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ಲೇಡಿಗೋಶನ್ ಆಸ್ಪತ್ರೆಯ ಸಿಬ್ಬಂದಿ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡುತ್ತಿರುವುದು ಶ್ಲಾಘನೀಯ’ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ. ರೆಡ್‌ಕ್ರಾಸ್ ಜಿಲ್ಲಾ ಘಟಕದ ನಿರ್ದೇಶಕ ಗುರುದತ್ ಕಾಮತ್ , ಲೇಡಿಗೋಶನ್ ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ.ಜಗದೀಶ್, ಕೆಎಂಸಿ ಅಸ್ಪತ್ರೆಯ ಡಾ.ಅನುಪಮ ಸುರೇಶ್ ಮುಖ್ಯ ಅತಿಥಿಗಳಾಗಿದ್ದರು.
ಶುಶ್ರೂಷಕ ಅಧೀಕ್ಷಕಿ ತ್ರೇಸಿಯಮ್ಮ , ಸಹಾಯಕ ಆಡಳಿತಾಧಿಕಾರಿ ಅನಿತಾ ಸತ್ಯನ್, ಕಚೇರಿ ಅಧೀಕ್ಷಕ ಶಂಕರ್, ಮೇಲ್ವಿಚಾರಕಿ ಮಲ್ಲಿಕಾ ಉಪಸ್ಥಿತರಿದ್ದರು. ಶುಶ್ರೂಷಕ ಅಧಿಕಾರಿಗಳಾದ ಡಿನ್ಸಿಮೊನ್ ಸ್ವಾಗತಿಸಿ, ಹರಿಣಾಕ್ಷಿ ವಂದಿಸಿದರು, ಅಂಬಿಕಾ ಕಾರ್ಯಕ್ರಮ ನಿರೂಪಿಸಿದರು.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top