ತುಳು ಸಿನಿಮಾ ಪ್ರಿಯರಿಗೊಂದು ಸಿಹಿ ಸುದ್ದಿ: ಫೆ. 6ರಂದು ನಾನ್‌ವೆಜ್‌ ರಿಲೀಸ್‌ – ಕೇವಲ 99 ರೂ.ಗೆ ನೋಡಿ ಮಲ್ಪಿಪ್ಲೆಕ್ಸ್‌ನಲ್ಲಿ!

103.2K Views 21 Jan 2026

ಮಂಗಳೂರು: ಜಯಕಿರಣ ಫಿಲಂಸ್ ಲಾಂಛನದಲ್ಲಿ, ಪ್ರಕಾಶ್ ಪಾಂಡೇಶ್ವರ್ ನಿರ್ಮಾಣದಲ್ಲಿ ಹಾಗೂ ಕೆ. ಸೂರಜ್ ಶೆಟ್ಟಿ ನಿರ್ದೇಶನದಲ್ಲಿ ಅದ್ಭುತವಾಗಿ ಸಿದ್ಧಗೊಂಡಿರುವ “ನಾನ್‌ ವೆಜ್’ ತುಳು ಸಿನಿಮಾ ಫೆಬ್ರವರಿ 6 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದರಲ್ಲೊಂದು ಅತ್ಯಂತ ಸಂತೋಷದ ಸಂಗತಿ ಎಂದರೆ, ಈ ಸಿನಿಮಾವನ್ನು ಎಲ್ಲ ಮಲ್ಟಿಪ್ಲೆಕ್ಸ್‌ನಲ್ಲೂ ಕೇವಲ 99 ರೂ.ಗೆ ನೋಡಬಹುದಾಗಿದೆ.


ದುಬಾರಿ ಟಿಕೆಟ್‌ ಕೊಟ್ಟು ಸಿನಿಮಾ ನೋಡಲು ಸಾಧ್ಯವಾಗದವರು ಇಂಥದ್ದೊಂದು ಸುಂದರ ಹಾಗೂ ಅತ್ಯುತ್ತಮ ಸಿನಿಮಾವನ್ನು ನೋಡದೆ ಇರಬಾರದು ಎಂದು ಚಿತ್ರದ ನಿರ್ಮಾಪಕರು ಕೇವಲ 99 ರೂ. ಟಿಕೆಟ್‌ ನಿಗದಿಪಡಿಸಿದ್ದು, ಇದು ತುಳುಚಿತ್ರರಂಗದಲ್ಲಿ ಒಂದು ಹೊಸ ಸಂಚಲನ ಉಂಟು ಮಾಡಿದೆ. ಸಿಂಗಲ್‌ ಥಿಯೇಟರ್‌ಗಿಂತಲೂ ಕಡಿಮೆ ದರದಲ್ಲಿ ಈ ಸಿನಿಮಾವನ್ನು ತುಳು ಪ್ರೇಮಿಗಳು ಮಲ್ಟಿಫ್ಲೆಕ್ಸ್ ಗಳಲ್ಲಿ ನೋಡುವಂತಹ ಅವಕಾಶವನ್ನು ನಿರ್ಮಾಪಕರು ಕಲ್ಪಿಸಿಕೊಟ್ಟಿದ್ದಾರೆ.


ಕರಾವಳಿಯ ಪ್ರತಿಭೆಗಳಿಂದಲೇ ಸಿದ್ಧವಾಗಿರುವ “ನಾನ್‌ವೆಜ್‌” ಒಂದು ಅತ್ಯುತ್ತಮ ಹಾಗೂ ಭಿನ್ನ ಕಥಾವಸ್ತುವನ್ನು ಹೊಂದಿದೆ. ‘ಸು ಫ್ರಂ ಸೋ” ಸಿನಿಮಾದ ಹೆಚ್ಚಿನ ಕಲಾವಿದರು “ನಾನ್‌ವೆಜ್‌” ಸಿನಿಮಾದಲ್ಲೂ ಇದ್ದಾರೆ. ಪ್ರಮುಖ ಪಾತ್ರದಲ್ಲಿ ಪ್ರಕಾಶ್ ತೂಮಿನಾಡು, ಬಂದರೊ ಬಂದರು ಬಾವಾ ಬಂದರು ಖ್ಯಾತಿಯ ಪುಷ್ಪರಾಜ್ ಬೊಳ್ಳೂರು, ದೀಪಕ್‌ ರೈ ಪಾಣಾಜೆ, ಮೈಮ್‌ ರಾಮದಾಸ್‌, ವಿಸ್ಮಯ ವಿನಾಯಕ್, ರೂಪಾ ವರ್ಕಾಡಿ ಕೂಡ ಇದರಲ್ಲಿದ್ದಾರೆ. ನಾಯಕಿಯಾಗಿ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಖ್ಯಾತಿಯ ಸಂಜನಾ ಬುರ್ಲಿ ತಮ್ಮ ಅದ್ಭುತ ನಟನಾ ಕೌಶಲವನ್ನು ಪ್ರದರ್ಶಿಸಿ ದ್ದಾರೆ. ಜತೆಗೆ ಕುಸೇಲ್ದರಸೆ ನವೀನ್‌ ಡಿ. ಪಡೀಲ್‌ ಪ್ರಮುಖ ಪಾತ್ರದಲ್ಲಿದ್ದಾರೆ. ಈಗಾಗಲೇ ಕೆಲವು ತುಳು, ಕನ್ನಡ ಸಿನಿಮಾಗಳಲ್ಲಿ ನಟಿಸಿ ಭರವಸೆಯ ನಾಯಕ ನಟ ಎಂದೇ ಗುರುತಿಸಿಕೊಂಡಿರುವ ಅಥರ್ವ ಪ್ರಕಾಶ್‌ ಕೂಡ ನಾನ್‌ವೆಜ್‌ನ ಪ್ರಮುಖ ಪಾತ್ರದಲ್ಲಿದ್ದು, ಈ ಸಿನಿಮಾ ಭರ್ಜರಿ ಹಿಟ್‌ ಆಗುವ ನಿರೀಕ್ಷೆ ಇದೆ. ಹಾಸ್ಯಕ್ಕೂ ಕೊರತೆಯಿಲ್ಲ, ಮನೋರಂಜನೆಯೂ ಕಡಿಮೆ ಇಲ್ಲ, ಸಂದೇಶ – ಕಥೆಯೂ ಅದ್ಭುತ ಎಂಬುದು ಚಿತ್ರತಂಡದ ಮಾತು.
ನಾನ್‌ವೆಜ್‌ನ ವಿಷಯವೇ ಎಲ್ಲರಿಗೂ ಖುಷಿ ಕೊಡಲಿದೆ. ಪ್ರೀತಿಯ ಹಿಂದೆ ಹೋಗುತ್ತಿರುವ ಮುಗ್ಧ ಯುವಕನೊಬ್ಬನ ಸುತ್ತ ಹೆಣೆದಿರುವ ಕಥೆಯನ್ನು ಈ ಸಿನಿಮಾ ಹೊಂದಿದೆ. ಆದ ಕಾರಣ ಇದು ಯುವ ಸಮುದಾಯವನ್ನು ಸೆಳೆಯುವ ಸಾಧ್ಯತೆ ನಿಚ್ಚಳವಾಗಿದೆ. ಮಕ್ಕಳೊಂದಿಗೆ ಹೆತ್ತವರು ಜತೆಯಾಗಿ ಕುಳಿತು ನೋಡಬೇಕಾದ ಸಿನಿಮಾವಾಗಿದ್ದು, ಇಡೀ ಸಿನಿಮಾದ ಕಥೆ ಹಾಗೂ ಸಂದೇಶವನ್ನು ಹಾಸ್ಯದಲ್ಲೇ ತೆಗೆದುಕೊಂಡು ಹೋಗಿರುವುದು ಒಂದು ದೊಡ್ಡ ಪ್ಲಸ್‌ ಪಾಯಿಂಟ್‌.

Read More News

Scroll to Top