ಬಂಟ್ಸ್ ಅಸೋಸಿಯೇಷನ್ ಪುಣೆ (ರಿ.) ಇದರ ವತಿಯಿಂದ 14ನೇ ವಾರ್ಷಿಕ ಸಮಾವೇಶ

109.9K Views 28 Jan 2026

ಬಂಟ್ಸ್ ಅಸೋಸಿಯೇಷನ್ ಪುಣೆ (ರಿ.) 14ನೇ ವಾರ್ಷಿಕ ಸಮಾವೇಶವನ್ನು ಫೆಬ್ರವರಿ 6, 2026 (ಶುಕ್ರವಾರ)ರಂದು ಮಧ್ಯಾಹ್ನ 2.30 ಗಂಟೆಯಿಂದ ಪುಣೆಯ ಬಾನೇರ್‍ನಲ್ಲಿರುವ ‘ಬಂಟರ ಭವನ’ದಲ್ಲಿ ಆಯೋಜಿಸಲಾಗಿದೆ.
ಮರ್ಸಿಡಿಸ್ ಶೋರೂಮ್ ಸಮೀಪ, ಪುಣೆ-ಬೆಂಗಳೂರು ಹೆದ್ದಾರಿಯ ಬಾನೇರ್ ಪ್ರದೇಶದಲ್ಲಿರುವ ಬಂಟರ ಭವನದಲ್ಲಿ ನಡೆಯಲಿರುವ ಈ ಸಮಾವೇಶಕ್ಕೆ ಬಂಟ ಸಮುದಾಯದ ಸದಸ್ಯರು ಹಾಗೂ ಸಾರ್ವಜನಿಕರು ಕುಟುಂಬ ಸಮೇತ ಭಾಗವಹಿಸುವಂತೆ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 2.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ಗಂಟೆಗೆ ಅಧಿಕೃತ ವಾರ್ಷಿಕ ಸಮಾರಂಭಕ್ಕೆ ಚಾಲನೆ ದೊರೆಯಲಿದೆ. ರಾತ್ರಿ 9 ಗಂಟೆಗೆ ಭೋಜನ ವ್ಯವಸ್ಥೆ ಮಾಡಲಾಗಿದೆ.
ಸಮಾವೇಶದ ವಿಶೇಷ ಆಕರ್ಷಣೆಯಾಗಿ ಶ್ರೀ ಶಕ್ತಿ ಸಾಂಸ್ಕೃತಿಕ ತಂಡದ ಆಶ್ರಯದಲ್ಲಿ ‘ಸಾಮರ್ಥ ಕಲಾವೈಭವ’ ಎ0ಬ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಭಕ್ತಿ, ಶಕ್ತಿ ಹಾಗೂ ಸಂಸ್ಕೃತಿಯ ಸೊಗಡನ್ನು ಒಳಗೊಂಡ ಈ ಕಾರ್ಯಕ್ರಮವು ಪ್ರೇಕ್ಷಕರಿಗೆ ಮನಮುಗ್ಧಗೊಳಿಸುವ ಅನುಭವ ನೀಡಲಿದೆ ಎಂದು ಸಂಘದವರು ತಿಳಿಸಿದ್ದಾರೆ.
ಕಾರ್ಯಕ್ರಮಕ್ಕೆ ಬಂಟ್ಸ್ ಅಸೋಸಿಯೇಷನ್ ಪುಣೆ ಅಧ್ಯಕ್ಷರಾದ ರೋಹಿತ್ ಡಿ. ಶೆಟ್ಟಿ ನಗ್ರಿಗುತ್ತು ಅವರು ಅಧ್ಯಕ್ಷತೆ ವಹಿಸಲಿದ್ದು, ಬಂಟ್ಸ್ ಸಂಘ ಬೆಂಗಳೂರು ಅಧ್ಯಕ್ಷರಾದ ಸಿ.ಎ. ಅಶೋಕ್ ಶೆಟ್ಟಿ ಎ0. ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಇದೇ ವೇಳೆ ಟೆಕ್ಕೋಥರ್ಮಾ ಗ್ರೂಪ್ ಆಫ್ ಇಂಡಸ್ಟ್ರೀಸ್, ಮುಂಬೈ ನಿರ್ದೇಶಕರಾದ ನಗ್ರಿಗುತ್ತು ವಿವೇಕ್ ಶೆಟ್ಟಿ ಹಾಗೂ ಬಂಟ್ಸ್ ಸಂಘ ಪುಣೆ ಅಧ್ಯಕ್ಷರಾದ ಅಜಿತ್ ಹೆಗ್ಡೆ ಕೆಂಜಾರುಗುತ್ತು ಅವರು ಗೌರವಾನ್ವಿತ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
ಸಂಘದ ಪದಾಧಿಕಾರಿಗಳಾಗಿ ಉಪಾಧ್ಯಕ್ಷರಾಗಿ ಡಾ. ಸುಧಾಕರ್ ಶೆಟ್ಟಿ ಹಾಗೂ ಸತೀಶ್ ರೈ ಕಲ್ಲಂಗಲಗುತ್ತು, ಗೌರವ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ, ಗೌರವ ಖಜಾಂಚಿಯಾಗಿ ಮನೋಹರ್ ಶೆಟ್ಟಿ (ಸಿ.ಎ.), ಪಿಆರ್‍ಒ ಆಗಿ ಪ್ರದೀಪ್ ಶೆಟ್ಟಿ ಕಾರ್ಯನಿರ್ವಹಿಸುತ್ತಿದ್ದಾರೆ.
ಮಹಿಳಾ ಘಟಕದ ಅಧ್ಯಕ್ಷೆಯಾಗಿ ಶ್ರೀಮತಿ ರೇಷ್ಮಾ ಆರ್. ಶೆಟ್ಟಿ ಹಾಗೂ ಕಾರ್ಯದರ್ಶಿಯಾಗಿ ಶ್ರೀಮತಿ ಶರ್ಮಿಳಾ ಟಿ. ರೈ ಇದ್ದಾರೆ. ಸಾಂಸ್ಕೃತಿಕ ಸಮಿತಿ ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ ಹಾಗೂ ಯುವ ಘಟಕ ಅಧ್ಯಕ್ಷರಾಗಿ ಅದೀಪ್ ಶೆಟ್ಟಿ ನೇತೃತ್ವ ವಹಿಸಿದ್ದಾರೆ.
ಈ 14ನೇ ವಾರ್ಷಿಕ ಸಮಾವೇಶವು ಸಂಘಟನೆಯ ಚಟುವಟಿಕೆಗಳಿಗೆ ಹೊಸ ದಿಕ್ಕು ನೀಡುವುದರೊಂದಿಗೆ, ಸಾಂಸ್ಕೃತಿಕ ಏಕತೆಯ ವೇದಿಕೆಯಾಗಲಿದೆ ಎಂದು ಬಂಟ್ಸ್ ಅಸೋಸಿಯೇಷನ್ ಪುಣೆ ಪ್ರಕಟಣೆಯಲ್ಲಿ ತಿಳಿಸಿದೆ.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top