ಡಿವಿಜಿ ಆದರ್ಶದಲ್ಲಿ ಬೆಳೆದ ಪತ್ರಕರ್ತರ ಸಂಘ-ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು

111.8K Views 23 Mar 2026

ಮಂಗಳೂರು: ಪ್ರಸಿದ್ಧ ಕವಿ ಡಿ.ವಿ.ಗುಂಡಪ್ಪ (ಡಿವಿಜಿ) ಅವರ ಮಂಕುತಿಮ್ಮನ ಕಗ್ಗದಲ್ಲಿ ಎಲ್ಲ ಧರ್ಮಗಳ ಸಾರ ಅಡಗಿದೆ. ಪತ್ರಕರ್ತರಾಗಿದ್ದ ಡಿವಿಜಿ ಅವರು 1932 ರಲ್ಲಿ ಸ್ಥಾಪಿಸಿದ ಮೈಸೂರು ರಾಜ್ಯ ಪತ್ರಕರ್ತರ ಸಂಘ ಬಳಿಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವಾಗಿ ಇಂದು ಹೆಮ್ಮರವಾಗಿ ಬೆಳೆದು ನಿಂತಿದೆ. ಸಂಸ್ಥಾಪಕ ಡಿವಿಜಿ ಅವರ ಆದರ್ಶ ಹಾಗೂ ಚಿಂತನೆಗಳಲ್ಲಿ ಬೆಳೆದು ಬಂದಿರುವ ಪತ್ರಕರ್ತರ ಸಂಘ ಹಂತಹಂತವಾಗಿ ಬೆಳದು ಈಗ 1೦ ಸಾವಿರ ಸದಸ್ಯರನ್ನು ಒಳಗೊಂಡಿರುವ ದೇಶದ ಬೃಹತ್ ಸಂಘಟನೆಯಾಗಿದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಗರದ ಪ್ರೆಸ್ ಕ್ಲಬ್ ನಲ್ಲಿ ನಡೆದ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ” ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಘಟಕಗಳ ಆಶ್ರಯಯದಲ್ಲಿ ಡಿ.ವಿ.ಜಿ. ಸಂಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ, ಜಿಲ್ಲಾ ಸಂಘದ ಉಪಾಧ್ಯಕ್ಷರಾದ ವಿಲ್ಫ್ರೆಡ್ ಡಿಸೋಜಾ, ರಾಜೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಸುರೇಶ್. ಡಿ.ಪಳ್ಳಿ, ಸಿದ್ದಿಕ್ ನೀರಾಜೆ , ಸಮಿತಿ ಸದಸ್ಯರಾದ ದಿವಾಕರ ಪದ್ಮುಂಜ, ಭುವನೇಶ್ವರ.ಜಿ. ಹರೀಶ್ ಆದೂರು, ತಾಲೂಕು ಘಟಕಗಳ ಅಧ್ಯಕ್ಷರಾದ ತುಕಾರಾಮ, ನವೀನ್ ಸಾಲ್ಯಾನ್, ಸಮಿತಿಯ ಮಾಜಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ, ಮಾಜಿ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಉಪಸ್ಥಿತರಿದ್ದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್. ಬಿ.ಎನ್. ಸ್ವಾಗತಿಸಿ,ಪ್ರಧಾನ ಕಾರ್ಯದರ್ಶಿ ರಾಜೇಶ್. ಕೆ.ಪೂಜಾರಿ ವಂದಿಸಿದರು.

Read More News

Scroll to Top