ಮಂಗಳೂರು: ಹಿರಿಯ ಲೇಖಕಿ, ಪತ್ರಕರ್ತೆ ಕೋಡಿಬೆಟ್ಟು ರಾಜಲಕ್ಷ್ಮಿಅವರು ಬರೆದ ಅಹರ್ನಿಶಿ ಪ್ರಕಾಶನ ಹೊರತಂದಿರುವ ‘ಲಲಿತ ಮಂಟಪ’ ಕೃತಿ ಬಿಡುಗಡೆ ಹಾಗೂ ಅದರ ವಿನೂತನ ರಂಗಪ್ರಯೋಗ ಕಾರ್ಯಕ್ರಮ ಮಾ.೨೫ರಂದು ಸಂಜೆ ೫ಕ್ಕೆ ನಗರದ ಹಂಪನಕಟ್ಟೆಯ ಸಪ್ನ ಬುಕ್ ಹೌಸ್‌ನಲ್ಲಿ ನಡೆಯಲಿದೆ.
ಜಾನಪದ ವಿಶ್ವವಿದ್ಯಾಲಯ ವಿಶ್ರಾಂತ ಕುಲಪತಿ ಡಾ.ಕೆ. ಚಿನ್ನಪ್ಪ ಗೌಡ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಮಂಗಳೂರು ಪ್ರೆಸ್‌ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಂದ ನೂತನ ಕೃತಿ ಆಧರಿಸಿದ ವಿನೂತನ ರಂಗಪ್ರಯೋಗ ‘ಗೆಜ್ಜೆ ಬರೆದ ಅಕ್ಷರ’ ಪ್ರಸ್ತುತಿಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.





















































































































































































