ದ.ಕ.ಜಿಲ್ಲಾ ರೆಡ್‌ಕ್ರಾಸ್ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಪುನರಾಯ್ಕೆ

98.4K Views 27 Mar 2026

ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ೨೦೨೬-೨೯ನೇ ಸಾಲಿನ ಚೇರ್ಮನ್ ಆಗಿ ಸಿಎ ಶಾಂತಾರಾಮ ಶೆಟ್ಟಿ ಆಯ್ಕೆಯಾಗಿದ್ದಾರೆ.
ವೈಸ್ ಚೇರ್ಮನ್ ಆಗಿ ಡಾ. ಬಿ.ಸಚ್ಚಿದಾನಂದ ರೈ, ಖಜಾಂಜಿಯಾಗಿ ಗುರುದತ್ ನಾಯಕ್ ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದರ್ಶನ್.ಎಚ್.ವಿ. ಅವರು ಆಡಳಿತ ಮಂಡಳಿ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.
ನೂತನವಾಗಿ ಚುನಾಯಿತರಾದ ಸಿಎ ಶಾಂತಾರಾಮ ಶೆಟ್ಟಿ, ಡಾ. ಬಿ.ಸಚ್ಚಿದಾನಂದ ರೈ, ಗುರುದತ್ ನಾಯಕ್, ಡಾ.ಸತೀಶ್ ರಾವ್, ಯತೀಶ್ ಬೈಕಂಪಾಡಿ, ಪುಷ್ಪರಾಜ್ ಜೈನ್,
ಡಾ.ಸುಮನ.ಬಿ., ಪಿ.ಬಿ.ಹರೀಶ್ ರೈ ,ಸಚೇತ್ ಸುವರ್ಣ ಮತ್ತು ರಾಘವೇಂದ್ರ ರಾವ್ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಚೇರ್ಮನ್ ಹಾಗೂ ವಿವಿಧ ಉಪ
ಸಮಿತಿಗಳಿಗೆ ನಿರ್ದೇಶಕರನ್ನು ಆಯ್ಕೆ ಮಾಡಲಾಯಿತು.
ಸಿಎ ಶಾಂತಾರಾಮ ಶೆಟ್ಟಿ ಅವರು ಸತತ ೪ನೇ ಅವಧಿಗೆ ರೆಡ್‌ಕ್ರಾಸ್ ದ.ಕ.ಜಿಲ್ಲಾ ಘಟಕದ ಚೇರ್ಮನ್ ಆಗಿ ಆಯ್ಕೆಯಾಗಿದ್ದು, ಪ್ರಸ್ತುತ ಅವರು ನವ ದೆಹಲಿಯ ರೆಡ್‌ಕ್ರಾಸ್ ಸಂಸ್ಥೆಯ ರಾಷ್ಟ್ರೀಯ ನಿರ್ವಹಣಾ ಮಂಡಳಿ ಸದಸ್ಯರಾಗಿದ್ದಾರೆ.

Read More News

ಮೇರಿಹಿಲ್ ಪಾಲೆಮಾರ್ ಕನ್ವೆನ್ಷನ್ ಸೆಂಟರ್ ನಲ್ಲಿ ಇಂದು (ಮೇ. 23 ರಂದು) ಮಾಜಿ ಸಚಿವ ಜೆ. ಕೃಷ್ಣ ಪಾಲೆಮಾರ್ ಮಾಲಕತ್ವದ ಲ್ಯಾಂಡ್ ಲಿಂಕ್ಸ್ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ನಿರ್ಮಿಸಿದ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ ಭವ್ಯ ಸಭಾ ಭವನಗಳನ್ನು ಲೋಕಾರ್ಪಣೆ ಮಾಡಿದ ಆಂಧ್ರ ಪ್ರದೇಶದ ರಾಜ್ಯಪಾಲ ಜಸ್ಟಿಸ್ ಎಸ್. ಅಬ್ದುಲ್ ನಜೀರ್. ಪಾಲೆಮಾರ್ ಅವರನ್ನು ಕೋಟಿಗೊಬ್ಬರು ಎಂದು ಗುಣಗಾನ ಮಾಡಿದ ಜಸ್ಟಿಸ್ ಅಬ್ದುಲ್ ನಜೀರ್.

ಮಾಜಿ ಸಚಿವ ಕೃಷ್ಣ ಜೆ. ಪಾಲೆಮಾರ್ ಅವರಿಂದ ಕರಾವಳಿ ಜನತೆಗೆ ವಿಶಿಷ್ಟ ಕೊಡುಗೆ: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ

Scroll to Top