ವೈದ್ಯಕೀಯ ಶಿಕ್ಷಣ ಕಾರ್ಯಾಗಾರ

109.2K Views 10 May 2026

ಮಂಗಳೂರು: ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್‌ ಮತ್ತು ಕೆಎಂಸಿ ಮಂಗಳೂರು ಸಹಯೋಗದಲ್ಲಿ ನಗರದ ಅತ್ತಾವರ ಕೆಎಂಸಿಯಲ್ಲಿ ಆರ್ಥೋಪೆಡಿಕ್ಸ್‌ನಲ್ಲಿ 3ಡಿ ಮುದ್ರಣದ ಕುರಿತು ವೈದ್ಯಕೀಯ ಶಿಕ್ಷಣ ಕಾರ್ಯಾಗಾರ ನಡೆಯಿತು. ಕರ್ನಾಟಕ ಆರ್ಥೋಪೆಡಿಕ್ ಅಸೋಸಿಯೇಷನ್‌ನ ಅಧ್ಯಕ್ಷ ಡಾ. ಬಿ. ಸಚ್ಚಿದಾನಂದ ರೈ, ಕೆಎಂಸಿ ಮಂಗಳೂರಿನ ಅಸೋಸಿಯೇಟ್ ಡೀನ್ ಡಾ. ಅಶ್ಫಾಕ್ ಮಹಮ್ಮದ್ ಮತ್ತು ಸಿಒಎಸ್ ಅಧ್ಯಕ್ಷ ಡಾ. ಸುದೀಪ್ ಶೆಟ್ಟಿ ಕಾರ್ಯಾಗಾರ ಉದ್ಘಾಟಿಸಿದರು
ಕಾರ್ಯಾಗಾರದ ಸಂಘಟನಾ ಅಧ್ಯಕ್ಷ ಡಾ. ಆತ್ಮಾನಂದ ಶೆಟ್ಟಿ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಡಾ. ಚೇತನ್ ಶೆಟ್ಟಿ ವಂದಿಸಿದರು.


ನೂರಕ್ಕೂ ಅಧಿಕ‌ಮೂಳೆ ಶಸ್ತ್ರಚಿಕಿತ್ಸಕರು ಮತ್ತು ಸ್ನಾತಕೋತ್ತರ ವಿದ್ಯಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು

Read More News

Scroll to Top