ಬಂಟರ ಯಾನೆ ನಾಡವರ ಮಾತೃ ಸಂಘ : 2026 -29 ರ ಸಾಲಿನ ಪದಾಧಿಕಾರಿಗಳ ಅವಿರೋಧ ಆಯ್ಕೆ

106.6K Views 12 May 2026

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ 2026 -29 ಸಾಲಿನ ಅಧ್ಯಕ್ಷರಾಗಿ ಮಾಲಾಡಿ ಅಜಿತ್ ಕುಮಾರ್ ರೈ ಕೊಡಿಯಾಲ್ ಗುತ್ತು, ಉಪಾಧ್ಯಕ್ಷರಾಗಿ ಕಾವು ಹೇಮನಾಥ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ಎಮ್ ಕರುಣಾಕರ ಶೆಟ್ಟಿ, ಕೋಶಾಧಿಕಾರಿಯಾಗಿ ಸಿಎ ರಾಮ್ ಮೋಹನ್ ರೈ ಹಾಗೂ ಜೊತೆ ಕಾರ್ಯದರ್ಶಿಯಾಗಿ ಪುಂಚಮೆ ಪದ್ಮನಾಭ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಧ್ಯಕ್ಷರು ಸೇರಿ 83 ಸದಸ್ಯರ ಕಾರ್ಯಕಾರಿ ಸಮಿತಿಯನ್ನು ಚುನಾವಣಾ ಆಯೋಗ ಅಧಿಕೃತವಾಗಿ ಘೋಷಿಸಿದೆ.
ಮುಖ್ಯ ಚುನಾವಣಾಧಿಕಾರಿಯಾಗಿದ್ದ ವಕೀಲರಾದ ಉಮೇಶ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ ಅವರು ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳ ಅವಿರೋಧ ಆಯ್ಕೆಯನ್ನು ಘೋಷಿಸಿದರು. ಉಪ ಚುನಾವಣಾಧಿಕಾರಿಯಾದ ವಕೀಲ ನವೀನ್ ಕುಮಾರ್ ಶೆಟ್ಟಿ ಹಾಗೂ ಚುನಾವಣಾಧಿಕಾರಿ ಪಿ ಸದಾಶಿವ ಶೆಟ್ಟಿಯವರು ಉಪಸ್ಥಿತರಿದ್ದರು.

Read More News

Scroll to Top