ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಾಸಣಾ ಶಿಬಿರ

111.3K Views 1d ago

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಸಹಯೋಗದಲ್ಲಿ ಸೋಮವಾರ ಪತ್ರಕರ್ತರಿಗೆ ಹಾಗೂ ಸಾರ್ವಜನಿಕರಿಗೆ ಮೂಳೆ ಖನಿಜಾಂಶ ಸಾಂದ್ರತೆ ಉಚಿತ ತಪಾಸಣಾ ಶಿಬಿರ ನಗರದ ಪತ್ರಿಕಾ ಭವನದಲ್ಲಿ ನಡೆಯಿತು.
ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ನಿಯೋಜಿತ ಅಧ್ಯಕ್ಷ ರವೀಂದ್ರ ಬಿ.ಎನ್. ಶಿಬಿರ ಉದ್ಘಾಟಿಸಿದರು. ಆಯುರ್ವೇದ ತಜ್ಞೆ ಡಾ.ಜ್ಯೋತಿ ಕೆ. ಮಾತನಾಡಿ ” ಮೂಳೆ ಖನಿಜ ಸಾಂದ್ರತೆ ಕುರಿತು ಜಾಗೃತಿ ಮೂಡಿಸುವುದು ಅಗತ್ಯ. ನಿಯಮಿತ ತಪಾಸಣೆಯಿಂದ ಯಾವುದೇ ಅರೋಗ್ಯ ಸಮಸ್ಯೆಯನ್ನು ಆರಂಭಿಕ ಹಂತದಲ್ಲಿ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡಲು ಸಾಧ್ಯ’ ಎಂದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಪುಷ್ಪರಾಜ್ ಬಿ.ಎನ್,
ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ ನಾಯಕ್ ಇಂದಾಜೆ,ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್‌ನ ಕಾರ್ಯದರ್ಶಿ ವಿಕಾಸ್ ಕೋಟ್ಯಾನ್, ಬೆಂಗಳೂರಿನ ಮೆಡಿಲ್ಯಾಬ್ ಇಂಡಿಯಾ ಫಾರ್ಮಾ ಸಂಸ್ಥೆಯ ಪ್ರತಿನಿಧಿ ಅರುಣ್ ಉಪಸ್ಥಿತರಿದ್ದರು. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮಹಮ್ಮದ್ ಆರಿಫ್ ಪಡುಬಿದ್ರಿ ಕಾರ್ಯಕ್ರಮ ನಿರೂಪಿಸಿದರು.

Read More News

Scroll to Top