ಮುಲ್ಲಕಾಡಿನ ಸರಕಾರಿ ಪ್ರಾಥಮಿಕ, ಪ್ರೌಢ ಶಾಲೆ ಯಲ್ಲಿ ಯಕ್ಷ ಧ್ರುವ-ಯಕ್ಷ ಶಿಕ್ಷಣ

97.6K Views 24 Jun 2026

“ಯಕ್ಷಗಾನ ಕಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಮಾತು ಸ್ಪಷ್ಟವಾಗುತ್ತದೆ; ಏಕಾಗ್ರತೆ ಹೆಚ್ಚಾಗುತ್ತದೆ. ಏಳೆಂಟು ಸಾವಿರ ವಿದ್ಯಾರ್ಥಿಗಳು ಈ ಕಲೆಯನ್ನು ಕಲಿತು ತಮ್ಮ ಬದುಕಿನಲ್ಲಿ ಔನ್ನತ್ಯವನ್ನು ಪಡೆದಿದ್ದಾರೆ” ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಕಾರ್ಯದರ್ಶಿಗಳಾದ ಕೃಷ್ಣ ಶೆಟ್ಟಿ ತಾರಮಾರ್ ಹೇಳಿದರು. ಇವರು ಮುಲ್ಲಕಾಡಿನ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಯಕ್ಷಧ್ರುವ -ಯಕ್ಷಶಿಕ್ಷಣ ಉದ್ಘಾಟಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಸಂಧ್ಯಾರವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದ ನಂತರ ಯಕ್ಷಗುರುಗಳಾದ ರಾಕೇಶ್ ರೈ ಅಡ್ಕ ಅವರು ಯಕ್ಷಗಾನದ ಹೆಜ್ಜೆ ಕಲಿಸಿದರು.
ಕಾರ್ಯಕ್ರದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಘಟಕದ ಅಧ್ಯಕ್ಷರಾದ ತಾರಾನಾಥ ಬೋಳಾರ, ಸಂಘಟನಾ ಕಾರ್ಯದರ್ಶಿ ಪ್ರದೀಪ್ ಆಳ್ವ, ಖಜಾಂಚಿ ಗೋಪಿನಾಥ ಶೆಟ್ಟಿ, ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಎ. ಎಸ್. ವೀಣಾ, ಎಸ್.ಡಿ.ಎಂ.ಸಿ. ಉಪಾಧ್ಯಕ್ಷರಾದ ರೇಣುಕಾ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಜಿ. ಉಸ್ಮಾನ್ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎ. ಎಸ್ ವೀಣಾ ವಂದಿಸಿದರು. ಶಿಕ್ಷಕ ನಾಗರಾಜ ಖಾರ್ವಿ ಕಾರ್ಯಕ್ರಮ ನಿರೂಪಿಸಿದರು.
ಫೋಟೋ -ಸತೀಶ್ ಕಾಪಿಕಾಡ್

Read More News

Scroll to Top