ಜುಲೈ 5ರಂದು ಕಂಕನಾಡಿ ಎಂಪೋರಿಯಂ ಕಾಂಪ್ಲೆಕ್ಸ್ ನಲ್ಲಿ ಲಯನ್ ಅನಿಲ್ ದಾಸ್ ಸಾರಥ್ಯದ ಅಂತಾರಾಷ್ಟ್ರೀಯ ಖ್ಯಾತಿಯ ಪ್ರತಿಷ್ಟಿತ ಮತ್ತು ಅಪಾರ ಜನ ಮೆಚ್ಚುಗೆ ಪಡೆದಿರುವ ಜಿಲ್ಲೆಯ ಹೆಸರಾಂತ ಸೇವಾ ಸಂಸ್ಥೆ ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಕೇರ್ ಇದರ ನವೀಕೃತ ಪ್ರಧಾನ ಕಚೇರಿ ಉದ್ಘಾಟನೆ

119.2K Views 2w ago

ಮಂಗಳೂರು: ರಾಜ್ಯದಾದ್ಯoತ ಸಹಸ್ರಾರು ಮಂದಿ ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಮಂಗಳೂರಿನ ಹೆಸರಾಂತ ನಿಸ್ವಾರ್ಥ ಸಮಾಜ ಸೇವಾ ಮನೋಭಾವದ ಉದ್ಯಮಿ ಲಯನ್ ಅನಿಲ್ ದಾಸ್ ಸಾರಥ್ಯದ ಅಂತಾರಾಷ್ಟ್ರೀಯ ಖ್ಯಾತಿಯ ಪ್ರತಿಷ್ಟಿತ ಮತ್ತು ಅಪಾರ ಜನ ಮೆಚ್ಚುಗೆ ಪಡೆದಿರುವ ಸೇವಾ ಸಂಸ್ಥೆ ದಾಸ್ ಪ್ರಮೋಷನ್ಸ್ ಹೋಂ ನರ್ಸಿಂಗ್ ಕೇರ್ ಇದರ ನವೀಕೃತ ಪ್ರಧಾನ ಕಚೇರಿಯ ಉದ್ಘಾಟನೆಯು ಜು. 5ರಂದು ಬೆಳಿಗ್ಗೆ 11-30ಕ್ಕೆ ಕಂಕನಾಡಿಯ ಎಂಪೋರಿಯಂ ಕಾಂಪ್ಲೆಕ್ಸ್‌ನಲ್ಲಿ ನಡೆಯಲಿದೆ.


ಶ್ರೀ ಕ್ಷೇತ್ರ ಕಟೀಲಿನ ಕಮಲಾದೇವಿ ಪ್ರಸಾದ್ ಅಸ್ರಣ್ಣರು ದೀಪ ಪ್ರಜ್ವಲನೆ ಮಾಡಲಿದ್ದು,ಎಂಪಿ ಕ್ಯಾ. ಬ್ರಿಜೇಶ್ ಚೌಟ ಅವರು ನಾಮಫಲಕ ಅನಾವರಣ ಮಾಡಲಿದ್ದಾರೆ. ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ನವೀಕೃತ ಕೇಂದ್ರ ಕಚೇರಿಯ ಉದ್ಘಾಟನೆ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ವೈ. ಭರತ್ ಶೆಟ್ಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಡೈಜಿವರ್ಲ್ಡ್ ಸಂಸ್ಥಾಪಕ ವಾಲ್ಟರ್ ನಂದಳಿಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಕು. ಧನಲಕ್ಷ್ಮೀ ಅವರಿಗೆ ಸನ್ಮಾನ ಕಾರ್ಯಕ್ರಮವಿದ್ದು, ಹಿತೈಷಿಗಳು ಹಾಗೂ ಸಂಸ್ಥೆಯ ಅಭಿಮಾನಿಗಳು ಸಮಾರಂಭದಲ್ಲಿ ಭಾಗವಹಿಸುವಂತೆ ದಾಸ್ ಪ್ರಮೋಷನ್ಸ್ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕರಾದ ಲ. ಅನಿಲ್‌ದಾಸ್ ಹಾಗೂ ಶ್ರೀಮತಿ ಆಶಾಲತಾ ದಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top