ಇಂದು ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

100.7K Views 2w ago

ಮಂಗಳೂರು: “ಸಹಕಾರಿ ಪಿತಾಮಹ” ದಿ. ಮೊಳಹಳ್ಳಿ ಶಿವರಾವ್‌ ಸ್ಮರಣಾರ್ಥವಾಗಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯ ಮೊಳಹಳ್ಳಿ ಶಿವರಾವ್ ಸಭಾಭವನದಲ್ಲಿ ಜುಲೈ -4ರಂದು ಅಪರಾಹ್ನ 3.00 ಗಂಟೆಗೆ ನಡೆಯಲಿದೆ.
2025-2026ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಹತ್ತನೇ ತರಗತಿ ಹಾಗೂ ಪದವಿಪೂರ್ವ ಪರೀಕ್ಷೆಗಳಲ್ಲಿ ಅತ್ಯಧಿಕ ಅಂಕಗಳಿಸಿ ಸಾಧನೆಗೈದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಮತ್ತು ಬ್ಯಾಂಕಿನ ಸಿಬ್ಬಂದಿಗಳ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿವೇತನ ವಿತರಣೆ ಈ ಸಮಾರಂಭದಲ್ಲಿ  ನಡೆಯಲಿದೆ.
ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ವಿಕಾಸ್ ಎಜ್ಯುಕೇಶನ್ ಟ್ರಸ್ಟ್ ಸಂಸ್ಥಾಪಕರಾದ ಶ್ರೀ ಕೃಷ್ಣ ಜೆ.ಪಾಲೇಮಾರ್ ಇವರು ಗೌರವ ಪುರಸ್ಕಾರ ಹಾಗೂ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ, ಉತ್ತಮ ಸಾಧನೆಗೈದ ವಿದ್ಯಾರ್ಥಿ-ವಿದ್ಯಾರ್ಥಿನಿಯರನ್ನು ಸನ್ಮಾನಿಸಲಿರುವರು. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್‌ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಡಾ| ಎಂ.ಎನ್. ರಾಜೇಂದ್ರ ಕುಮಾರ್‌ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು.
ಪತ್ರಿಕಾ ಮಾಧ್ಯಮದ ಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ವಿನಂತಿ

Read More News

ಸರಕಾರಿ ಆಸ್ಪತ್ರೆಗಳಲ್ಲಿ ರೇಬಿಸ್ ತಡೆಗಟ್ಟಲು ನೀಡುವ ERIG ಇಂಜೆಕ್ಷನ್ ಕಳಪೆ ಗುಣಮಟ್ಟದ ಔಷಧವಲ್ಲ -ಡಿಎಂಒ ಡಾ. ಶಿವಪ್ರಕಾಶ್ ಸ್ಪಷ್ಟನೆ. ಅದು ಓಕೆ, ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಬೆಲೆ ಬಾಳುವ ರಿಸ್ಕ್ ರಹಿತ ಇಮ್ಮುನೋಗ್ಲೋಬುಲಿನ್ ಇಂಜೆಕ್ಷನ್ ಗಳ ಬಳಕೆಗೆ mpmlasnewstv ಒತ್ತಾಯ

Scroll to Top