ವನಮಹೋತ್ಸವ ಆಚರಣೆ

114.4K Views 3w ago

ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ , ಜೆಪ್ಪು
ಜೆಪ್ಪು :ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಅಂಗವಾಗಿ ಪಿ.ಟಿ.ಎ ಕಾರ್ಯಕಾರಿ ಸಮಿತಿ ಸದಸ್ಯರ ಸಹಯೋಗದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.


ಪಿ .ಟಿ.ಎ ಕಾರ್ಯಕಾರಿ ಸಮಿತಿ ಸದಸ್ಯರು ಶಾಲಾ ಆವರಣದಲ್ಲಿ ಹಣ್ಣಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ಸಾರಿದರು. ಕಾರ್ಯಕ್ರಮದಲ್ಲಿ ಅವರು ಉತ್ಸಾಹದಿಂದ ಭಾಗವಹಿಸಿ, ವಿದ್ಯಾರ್ಥಿಗಳಿಗೂ ಪರಿಸರವನ್ನು ಸಂರಕ್ಷಿಸುವ ಜವಾಬ್ದಾರಿಯ ಬಗ್ಗೆ ಅರಿವು ಮೂಡಿಸಿದರು.


ವಿದ್ಯಾರ್ಥಿಗಳೂ ಸಹ ವಿವಿಧ ಬಗೆಯ ಹೂವಿನ ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದರು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಕೃತಿ ಪ್ರೇಮ, ಪರಿಸರ ಸಂರಕ್ಷಣೆ ಮತ್ತು ಹಸಿರು ಪರಿಸರ ನಿರ್ಮಾಣದ ಬಗ್ಗೆ ಜಾಗೃತಿ ಮೂಡಿಸಿತು.
ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಪಿ.ಟಿ.ಎ ಕಾರ್ಯಕಾರಿ ಸಮಿತಿ ಸದಸ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಶಾಲೆಯ ವತಿಯಿಂದ ಹೃತ್ಪೂರ್ವಕ ಧನ್ಯವಾದ ಸಲ್ಲಿಸಲಾಯಿತು

Read More News

Scroll to Top