ಆಗಸ್ಟ್ 3ರಂದು ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಬಿಡುಗಡೆ

102.1K Views 1w ago

ಮಂಗಳೂರು : ಸಹಕಾರವನ್ನು ಜೀವನದ ಧ್ಯೇಯವನ್ನಾಗಿ, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ. ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರ ರಂಗದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ‘” ಮೊಳಹಳ್ಳಿ ಶಿವರಾವ್” ಅಗ್ರಗಣ್ಯರು.

ಡಾ. ಎಂ. ಎನ್. ರಾಜೇಂದ್ರ ಕುಮಾರ್


ಕೀರ್ತಿಶೇಷ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯು ಸದಾ ಸ್ಮರಣೀಯ.ಇಂತಹ ಅಪೂರ್ವ ವ್ಯಕ್ತಿತ್ವದ ದ್ಯೋತಕವಾಗಿ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರು, ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಆಗಸ್ಟ್ -3ರಂದು ಪೂರ್ವಾಹ್ನ 11.30ಗಂಟೆಗೆ ಎಸ್ ಸಿಡಿಸಿಸಿ ಬ್ಯಾಂಕ್ ನಲ್ಲಿ ಬಿಡುಗಡೆ ಗೊಳಿಸಲಿರುವರು.

ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ


ಎಸ್ ಸಿಡಿಸಿಸಿ ಬ್ಯಾಂಕ್ ಪ್ರಧಾನ ಕಛೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖಕರಾಗಿದ್ದಾರೆ.

Read More News

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಗೆ ಯಾರಾಗಲಿದ್ದಾರೆ ನೂತನ ಅಧ್ಯಕ್ಷ. ಚುನಾವಣೆ ಪ್ರಕ್ರಿಯೆಯಲ್ಲಿ ಕಾರ್ಯಕರ್ತರ ಬೆಂಬಲ ಯಾರಿಗೆ? ಕಾಂಗ್ರೆಸ್ ಹೈಕಮಾಂಡ್ ಮೊತ್ತ ಮೊದಲ ಬಾರಿಗೆ ಅಲ್ಪ ಸಂಖ್ಯಾತ ಸಮುದಾಯದ ಸಮರ್ಥ ನಾಯಕನನ್ನು ಆಯ್ಕೆ ಮಾಡುವ ಸಾಧ್ಯತೆ ಬಗ್ಗೆ Mp MLA’s News exclusive Report

Scroll to Top