ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರಿಂದ ಖ್ಯಾತ ಹಿರಿಯ ಕ್ರೀಡಾ ಲೇಖಕ ಎಸ್.ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ಸಹಕಾರಿ ಕ್ಷೇತ್ರದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಕುರಿತಾಗಿ ಬರೆದ ಸಮಗ್ರ ಚಿತ್ರಣ ‘ತ್ಯಾಗಮಯಿ ಮೊಳಹಳ್ಳಿ’ ಕೃತಿ ಆಗಸ್ಟ್ 3ರಂದು ಮಂಗಳೂರಿನ ಕೊಡಿಯಾಲ್ ಬೈಲ್ ನಲ್ಲಿರುವ ಎಸ್ ಸಿ ಡಿಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿ ಸಭಾಂಗಣದಲ್ಲಿ ಬಿಡುಗಡೆಗೊಂಡಿತು. ಮಹಾನ್ ಸಾಧಕ ಮೊಳಹಳ್ಳಿ ಕುರಿತಾದ ಈ ಕೃತಿ ಸಹಕಾರಿ ಕ್ಷೇತ್ರಕ್ಕೆ, ನಮ್ಮೆಲ್ಲರಿಗೆ ಮಾರ್ಗದರ್ಶಿಯಾಗಲಿ :ಡಾ. ಎಂ.ಎನ್. ರಾಜೇಂದ್ರ ಕುಮಾರ್

119K Views 2w ago

ಮಂಗಳೂರು: ಸಹಕಾರವನ್ನು ಜೀವನದ ಧ್ಯೇಯವನ್ನಾಗಿ,, ಜನಸೇವೆಯನ್ನು ಜೀವನದ ಪರಮ ಗುರಿಯನ್ನಾಗಿ, ತ್ಯಾಗವನ್ನು ಬದುಕಿನ ಮಾರ್ಗವನ್ನಾಗಿ ಸ್ವೀಕರಿಸಿ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಜನರ ಆರ್ಥಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ಏಳಿಗೆಗಾಗಿ ತಮ್ಮ ಬದುಕನ್ನೇ ಮುಡಿಪಾಗಿಟ್ಟು, ಸಹಕಾರದ ಮೂಲಕ ಸಮಾಜದ ಸರ್ವತೋಮುಖ ಅಭಿವೃದ್ಧಿಯ ಕನಸು ಕಂಡ ಮಹಾನ್ ಚೇತನ, ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾವ್ ಅವರ ಬದುಕು ಹಾಗೂ ಸಹಕಾರ ಕ್ಷೇತ್ರದಲ್ಲಿ ಸಲ್ಲಿಸಿದ ಸಾರ್ಥಕ ಸಮಾಜಮುಖಿ ಸೇವೆಯ ಕುರಿತಾದ ಎಸ್. ಜಗದೀಶ್ಚಂದ್ರ ಅಂಚನ್ ಸೂಟರ್ ಪೇಟೆ ಅವರು ಬರೆದಿರುವ ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯನ್ನು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾ‌ರ್ ಅವರು ಮಂಗಳೂರು ಕೊಡಿಯಾಲ್ ಬೈಲ್ ನಲ್ಲಿರುವ ಎಸ್ ಸಿಡಿ ಸಿಸಿ ಬ್ಯಾಂಕ್ ನ ಪ್ರಧಾನ ಕಚೇರಿಯ ಸಭಾಂಗಣದಲ್ಲಿ ಬಿಡುಗಡೆಗೊಳಿಸಿದರು.
ಬಳಿಕ ಮಾತಾಡಿದ ಅವರು, ನಮ್ಮ ಬ್ಯಾಂಕಿನ ಪ್ರಧಾನ ಕಚೇರಿಯ ಕಿರಿಯ ನಿರೀಕ್ಷಕರು ಹಾಗೂ ಪತ್ರಿಕೋದ್ಯಮದಲ್ಲಿ ಕ್ರೀಡಾ ಬರಹಗಾರರಾಗಿ ಸುಮಾರು 35 ವರ್ಷಗಳಿಂದ ಗುರುತಿಸಿಕೊಂಡಿರುವ ಜಗದೀಶ್ಚಂದ್ರ ಅಂಚನ್ ಅವರು ‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ಲೇಖಕರಾಗಿದ್ದಾರೆ. ಮೊಳಹಳ್ಳಿ ಅವರು ಎತ್ತಿನಗಾಡಿಯಲ್ಲಿ ಸಂಚರಿಸಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಬೆಳೆಸಲು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ.

ಕುಂದಾಪುರದ ಮೊಳಹಳ್ಳಿಯಲ್ಲಿ ಜನಿಸಿದರೂ ಪುತ್ತೂರಿನಲ್ಲಿ ನೆಲೆಸಿ ವಕೀಲ ವೃತ್ತಿಯಲ್ಲಿದ್ದರೂ ಸಹಕಾರಿ ಕ್ಷೇತ್ರದ ಅಭಿವ್ಯದ್ಧಿಗೆ ಕಾರಣರಾದವರು. ಇಂತಹ ಮಹಾನ್ ಸಾಧಕರ ಕುರಿತಾದ ಕೃತಿಯು ನಮ್ಮೆಲ್ಲರಿಗೆ ಮಾರ್ಗದರ್ಶಿಯಾಗಿರಲಿ” ಎಂದರು.
ಕಾರ್ಯಕ್ರಮದಲ್ಲಿ ಬ್ಯಾಂಕ್ ನ ಸಿಇಒ ಗೋಪಿನಾಥ್ ಭಟ್, ಬ್ಯಾಂಕ್ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ಬ್ಯಾಂಕ್ ನಿರ್ದೇಶಕ ಶಶಿಕುಮಾ‌ರ್ ರೈ ಬಾಳ್ಕೊಟ್ಟು ನಬಾರ್ಡ್ ಸಂಗೀತ, ರಮೇಶ್, ಸುಧೀರ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.


ತ್ಯಾಗಮಯಿ ಮೊಳಹಳ್ಳಿ ಕೃತಿಯ ಲೇಖಕರ ಕುರಿತು…
ಹಿರಿಯ ಕ್ರೀಡಾ ಲೇಖಕರಲ್ಲಿ ಒಬ್ಬಾಗಿರುವ
ಎಸ್. ಜಗದೀಶ್ಚಂದ್ರ ಅಂಚನ್, ಸೂಟರ್‌ಪೇಟೆ
ಅವರು ಸುಮಾರು 36 ವರ್ಷಗಳ ನಿರಂತರ ಪತ್ರಿಕೋದ್ಯಮದ ಅವಧಿಯಲ್ಲಿ ಅವರು 4,500ಕ್ಕೂ ಹೆಚ್ಚು ಕ್ರೀಡಾ ಲೇಖನಗಳನ್ನು ಬರೆದಿದ್ದಾರೆ. ಜೊತೆಗೆ,ಸಹಕಾರ ಕ್ಷೇತ್ರಕ್ಕೆ ಸಂಬಂಧಿಸಿದ ಇನ್ನೂರಕ್ಕೂ ಹೆಚ್ಚು ಲೇಖನಗಳನ್ನು ಬರೆದಿರುವ ಇವರು ನಾಟಕ, ಸಿನಿಮಾ ಮತ್ತು ಯಕ್ಷಗಾನದ ಕುರಿತು ವಿಮರ್ಶಾತ್ಮಕ ಲೇಖನಗಳ ಮೂಲಕ ತಮ್ಮ ಬಹುಮುಖ ಪ್ರತಿಭೆಯನ್ನು ಸಹ ಅನಾವರಣಗೊಳಿಸಿದ್ದಾರೆ. ಸಹಕಾರ ರಂಗದ ಪಿತಾಮಹ ಮೊಳಹಳ್ಳಿ ಶಿವರಾಯರ ಜೀವನ, ತತ್ವಗಳು ಮತ್ತು ಸಮಾಜಸೇವೆಯ ಬಗ್ಗೆ ಅವರಿಗೆ ವಿಶೇಷ ಗೌರವ ಹಾಗೂ ಅಭಿಮಾನವಿದೆ. ಕಳೆದ ಹತ್ತು ವರ್ಷಗಳಿಂದ ಪ್ರತಿ ವರ್ಷ ಆಗಸ್ಟ್ 4 ರಂದು ಶಿವರಾಯರ ಜನ್ಮದಿನದಂದು ವಿವಿಧ ಪತ್ರಿಕೆಗಳಲ್ಲಿ ಸ್ಮರಣಾರ್ಥ ಲೇಖನಗಳನ್ನು ಬರೆದಿದ್ದಾರೆ. ಈ ಅಧ್ಯಯನ, ಅಭಿಮಾನ ಮತ್ತು ಸಾಮಾಜಿಕ ಕಾಳಜಿಯೇ
‘ತ್ಯಾಗಮಯಿ ಮೊಳಹಳ್ಳಿ’ ಕೃತಿಯ ರಚನೆಗೆ ಅವರಿಗೆ ಪ್ರೇರಣೆಯಾಯಿತು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top