ರಕ್ತದಾನ ಶ್ರೇಷ್ಠ ದಾನ: ಡಾ ಭರತ್ ಶೆಟ್ಟಿಸುರತ್ಕಲ್ ಸ್ಫೋಟ್ಸ್೯, ಕಲ್ಚರಲ್ ಸೇವಾ ಟ್ರಸ್ಟ್ ನಿಂದ ರಕ್ತದಾನ ಶಿಬಿರ

112.5K Views 1w ago

ಸುರತ್ಕಲ್: ದಾನಗಳಲ್ಲಿ ಶ್ರೇಷ್ಠವಾದ ದಾನ ರಕ್ತದಾನ ಜಾತಿ, ಮತ, ಧರ್ಮಗಳನ್ನು ಮರೆತು ನಾವು ನೀಡುವ ರಕ್ತದಿಂದ ಎಷ್ಟೋ ಜೀವಗಳನ್ನು ಉಳಿಸಬಹುದಾಗಿದೆ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ! ಭರತ್ ವೈ ಶೆಟ್ಟಿ ನುಡಿದರು
ಅವರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಮತ್ತು ಬಿ.ಎ.ಎಸ್.ಎಪ್ ಇಂಡಿಯಾ ಲಿಮಿಟೆಡ್‌, ಶ್ರೀ ರಾಮ್ ಪೈನಾನ್ಸ್ ಮಂಗಳೂರು, ಸುರತ್ಕಲ್ ಪೋಲಿಸ್ ಠಾಣೆ ಇದರ ಜಂಟಿ ಆಶ್ರಯದಲ್ಲಿ ಕೆ,ಎಂ,ಸಿ ಅಸ್ಪತ್ರೆ ಮಂಗಳೂರು ಇವರ ಸಹಯೋಗದೊಂದಿಗೆ ಸುರತ್ಕಲ್ ವಿದ್ಯಾದಾಯಿನಿ ಪ್ರೌಢಶಾಲಾ ವಜ್ರಮಹೋತ್ಸವ ಸಭಾಂಗಣದಲ್ಲಿ ಜರುಗಿದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಮತ್ತು ಆರೋಗ್ಯ ತಪಾಸಣಾ ಶಿಬಿರ,ವಿದ್ಯಾರ್ಥಿ ವೇತನ ಹಾಗೂ ಅಭಿನಂದನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ನವರು ಅನೇಕ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿದ್ದು ಅದರ ಜೊತೆಗೆ ರಕ್ತದಾನದಂತಹ ಶಿಬಿರವನ್ನು ಇತರ ಸಂಸ್ಥೆಗಳ ಜೊತೆ ಅಯೋಜನೆ ಮಾಡಿರುವುದು ಶ್ಲಾಘನೀಯ ಮುಂದೆಯೂ ಇಂತಹ ಸೇವೆಗಳು ಮುಂದುವರಿಯಲಿ ಎಂದರು. ಮಂಗಳೂರು ಕೇಂದ್ರ ಉಪವಿಭಾಗದ ಸಹಾಯಕ ಆಯುಕ್ತರಾದ ರವೀಶ್ ನಾಯಕ್ ಮಾತನಾಡಿ ನಮಗೆ ಪ್ರತಿಯೊಬ್ಬರಿಗೂ ಬೇಕಾಗಿರುವುದು ಆರೋಗ್ಯ ಅದನ್ನು ನಾವು ಮೊದಲು ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದರು ಬಾಳ ಬಿ.ಎ.ಎಸ್.ಎಫ್ ಸಂಸ್ಥೆಯ ಎಚ್ ಅರ್ ವಿಭಾಗದ ಪ್ರಭಂದಕರಾದ ಸಂತೋಷ್ ಪೈ, ಶ್ರೀರಾಮ ಪೈನಾನ್ಸ್ ಲಿಮಿಟೆಡ್ ವಲಯ ಮುಖ್ಯಸ್ಥರಾದ ಶರಚ್ಚಂದ್ರ ಭಟ್ ಕೆ, ಗಡಿಪ್ರಧಾನರಾದ ಪಿ ಟಿ ರೈ ಯಾನೆ ಮಂಜು ಕಾವ,ಡಾ! ದಿವಾಕರ್ ರಾವ್ ಸುರತ್ಕಲ್, ಸುರತ್ಕಲ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಅಧ್ಯಕ್ಷ ಅಶೋಕ್ ಶೆಟ್ಟಿ, ಸುರತ್ಕಲ್ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿ ಎಚ್ ಶ್ರೀರಂಗ, ಯಕ್ಷಗಾನ ಕಲಾವಿದ ರವಿಕುಮಾರ್ ಸುರತ್ಕಲ್,ಶ್ರೀ ರಾಮ್ ಪೈನಾನ್ಸ್ ನ ಚೇತನ್ ಅರಸ್,ಉದ್ಯಮಿ ಮೋಹನ್ ಶೆಟ್ಟಿ ಬೊಳ್ಳಾರುಗುತ್ತು, ಮಂಗಳೂರು ಕೆ.ಎಂ.ಸಿ ಅಸ್ಪತ್ರೆ ವೈದ್ಯರಾದ ಡಾ! ಕಾರ್ತಿಕ್ ಕೆ.ಎಸ್,ಸುರತ್ಕಲ್ ಪೋಲೀಸ್ ಠಾಣೆಯ ಉಪಠಾಣಾಧಿಕಾರಿ ಶಶಿಧರ್ ಶೆಟ್ಟಿ, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಗೌರವಾಧ್ಯಕ್ಷರಾದ ವಿರಾಜಪೇಟೆ ಡಿ,ವೈ ಎಸ್ ಪಿ ಮಹೇಶ್ ಕುಮಾರ್ ,ಗೌರವಾಧ್ಯಕ್ಷರಾದ ಮಹಾಬಲ ಪೂಜಾರಿ ಕಡಂಬೋಡಿ, ಅಧ್ಯಕ್ಷರಾದ ಮನೋಹರ ಶೆಟ್ಟಿ ಸೂರಿಂಜೆ, ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಕೋಶಾಧಿಕಾರಿ ಜಗದೀಪ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಕಾರ್ಯದರ್ಶಿ ಕಿರಣ್ ಅಚಾರ್ಯ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು ಇದೇ ಸಂದರ್ಭದಲ್ಲಿ ಪೋಲೀಸ್ ಇಲಾಖೆಯಲ್ಲಿ ಪಿ ಎಸ್ ಐ ಹುದ್ದೆಯಿಂದ ನಿವೃತ್ತಿ ಹೊಂದಿದ ಮುಖ್ಯಮಂತ್ರಿ ಚಿನ್ನದ ಪದಕ ಪಡೆದಿರುವ ಕುಶಲ ಮಣಿಯಾಣಿ ಅವರನ್ನು ಸನ್ಮಾನಿಸಲಾಯಿತು ಶ್ರೀ ರಾಮ್ ಪೈನಾನ್ಸ್ ವತಿಯಿಂದ ಆರ್ಥಿಕವಾಗಿ ತೀರಾ ಹಿಂದುಳಿದ ಸುಮಾರು 100 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಯಿತು

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top