ಮಂಗಳೂರು: ಭಾರತೀಯ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕ ಮತ್ತು ಯೂತ್ ರೆಡ್‌ಕ್ರಾಸ್ ಘಟಕದ ವತಿಯಿಂದ ಆ.೧೩ರಂದು ಬೆಳಗ್ಗೆ ೧೧ಕ್ಕೆ ವಿಶ್ವ ಅಂಗಾಂಗ ದಾನ ದಿನಾಚರಣೆ ರೆಡ್‌ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿದೆ. ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜೀವ ಸಾರ್ಥಕತೆಯ ರಾಜ್ಯ ಸಂಯೋಜಕ ಡಾ.ರವಿಶಂಕರ್ ಶೆಟ್ಟಿ ಕೆ., ಭಾರತೀಯ ವೈದ್ಯಕೀಯ ಸಂಘದ ಮಂಗಳೂರು ಘಟಕದ ಅಧ್ಯಕ್ಷ ಡಾ.ಸದಾನಂದ ಪೂಜಾರಿ, ಎಎಂಸಿ ಮಂಗಳೂರು ಘಟಕದ ಅಧ್ಯಕ್ಷ ಡಾ.ಪ್ರಶಾಂತ್.ಬಿ. ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ರೆಡ್‌ಕ್ರಾಸ್ ಜಿಲ್ಲಾ ಘಟಕದ ಕಾರ್ಯದರ್ಶಿ ಡಾ.ಸತೀಶ್‌ಕುಮಾರ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.







































































































































































































