ಆಷಾಡದ ಔಷಧಿಯ ಕಷಾಯ ಶ್ರೇಷ್ಠ: ಚರಿಷ್ಮಾ

116.1K Views 1w ago

ಮೂಲ್ಕಿ: ಆಷಾಡ ಮಾಸದ ಅಮಾವಾಸ್ಯೆಯಂದು ತುಳುವರು ಸೇವಿಸುವ ಔಷಧೀಯ ಗುಣಗಳುಳ್ಳ ಕಷಾಯವು ಶ್ರೇಷ್ಠವಾಗಿದೆ. ತುಳುನಾಡಿನ ಪ್ರತೀ ಆಚರಣೆಗೂ ಒಂದು ವೈಜ್ಞಾನಿಕ ಮಹತ್ವ ಇದೆ ಎಂದು ಮೂಲ್ಕಿ ಯವವಾಹಿನಿ ಘಟಕ ಅಧ್ಯಕ್ಷೆ ಚರಿಷ್ಮಾ ಶ್ರೀನಿವಾಸ್ ಹೇಳಿದರು‌.
ಅವರು ಮೂಲ್ಕಿ ಬಸ್ ನಿಲ್ದಾಣದಲ್ಲಿ ನಡೆದ ಮೂಲ್ಕಿ ಯುವವಾಹಿನಿ ಘಟಕದ ಸಂಯೋಜನೆಯಲ್ಲಿ ಲಯನ್ಸ್ ಕ್ಲಬ್ ಮೂಲ್ಕಿ, ಲಿಯೋ ಕ್ಲಬ್ ಮೂಲ್ಕಿ ರೋಟರಿ ಕ್ಲಬ್ ಮೂಲ್ಕಿ, ನವದುರ್ಗಾ ಯುವಕ ವೃಂದ ಕೋಟೆಕೇರಿ, ಮುಲ್ಕಿ ಇದರ ಸಹಕಾರದಲ್ಲಿ ನಡೆದ ಆಟಿಯ (ಆಷಾಡ) ಕಷಾಯದ ಉಚಿತ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮೂಲ್ಕಿ ಲಯನ್ಸ್ ಕ್ಲಬ್ನ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮಾಜಿ ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ವಿನೋದ್ ಸಾಲ್ಯಾನ್, ರೋಟರಿ ಕ್ಲಬ್ ನ ಅಧ್ಯಕ್ಷೆ ಭಾನುಮತಿ ಶೆಟ್ಟಿ ಕಕ್ವಗುತ್ತು, ನವದುರ್ಗಾ ಯುವಕ ವೃಂದ ಕೋಟೆಕೇರಿಯ ಜಯ ಪೂಜಾರಿ, ಯುವವಾಹಿನಿಯ ಸತೀಶ್ ಕಿಲ್ಪಾಡಿ, ಮಾಧವ ಕಿಲ್ಪಾಡಿ, ವಿನಯಕುಮಾರ್ ಮಟ್ಟು, ಭಾಸ್ಕರ ಕೊಕ್ರಾಣಿ, ಲತೀಶ್ ಕುಮಾರ್, ಲಯನ್ಸ್ ನ ಕಿಶೋರ್ ಕುಮಾರ್ ಶೆಟ್ಟಿ, ಸದಾಶಿವ ಹೊಸದುರ್ಗಾ ಮತ್ತಿತರರು ಇದ್ದರು.

Read More News

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

ಕಸ್ತೂರಿ ರಂಗನ್ ವರದಿ ಆಧಾರಿತ ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶಗಳ 7 ನೇ ಕರಡು ಅಧಿಸೂಚನೆ ಬಗ್ಗೆ ಸದನದ ಗಮನ ಸೆಳೆದ ಶಾಸಕ ಗಂಟಿಹೊಳೆ. ಗ್ರಾಮೀಣ ಜನರ ಆತಂಕ ನಿವಾರಣೆ ಹಾಗೂ ಜೀವನೋಪಾಯಗಳಿಗೆ ಆಗಬಹುದಾದ ಸಂಭವನಿಯ ಅಪಾಯಗಳ ಬಗ್ಗೆ ಪ್ರಸ್ತಾಪಿಸಿದ ಬೈಂದೂರು ಶಾಸಕರು. ಜನರಿಗೆ ಸ್ಪಷ್ಟ ಮಾಹಿತಿ ಹಾಗೂ ಅಧಿಸೂಚನೆ ವಿರುದ್ಧ ಸ್ಪಷ್ಟ ವಾದ ಮಂಡನೆ ಸಲುವಾಗಿ ಒಂದು ಬಾರಿ ಅಧಿಸೂಚಿತ ಗ್ರಾಮಗಳನ್ನು ಭೌತಿಕ ಸರ್ವೇಗೆ ಒಳಪಡಿಸಲು ಆಗ್ರಹ. 7 ನೇ ಕರಡು ಅಧಿಸೂಚನೆ ಸರಕಾರದ ಹಂತದಲ್ಲಿ ಪರಿಶೀಲನೆಯಲ್ಲಿದೆ ಎಂದ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವರು.

Scroll to Top