ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಗೆ ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಭೇಟಿವಿದ್ಯಾರ್ಥಿಗಳೊಂದಿಗೆ ಸಂವಾದ

113.2K Views 14 Aug 2026

ಮಂಗಳೂರು,ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಪ್ರಾಥಮಿಕ ಶಾಲೆಗೆ ದಕ್ಷಿಣ ಕನ್ನಡ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಅನಿಲ್ ಕುಮಾರ್ ಎಸ್ ಭೂಮ ರಡ್ಡಿ ಭೇಟಿ ನೀಡಿದದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಪೊಸ್ಕೊ ಸೇರಿದಂತೆ ವಿವಿಧ ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು. ವಿದ್ಯಾರ್ಥಿ ಗಳು ಉತ್ತಮ ಕಲಿಕೆಯೊಂದಿಗೆ ಉತ್ತಮ ಪ್ರಜೆಗಳಾಗಿ ಜೀವನ ನಡೆಸಬೇಕು ಎಂದು ಕರೆ ನೀಡಿದರು. ವಿದ್ಯಾರ್ಥಿನಿ ಯೊಬ್ಬರು ಪೊಲೀಸ್ ಆಗಬೇಕಾದರೆ ಏನು ಮಾಡಬೇಕು ಎಂದು ಕೇಳಿದ ಪ್ರಶ್ನೆಗೆ ಚೆನ್ನಾಗಿ ಕಲಿಯಬೇಕು ಎಂದು ಉತ್ತರಿಸಿದರು. ವಿದ್ಯಾರ್ಥಿಗಳು ವೇಣೂರು ಪೊಲೀಸ್ ಠಾಣೆಗೆ ಭೇಟಿ ನೀಡುವಂತೆ ಅಹ್ವಾನ ನೀಡಿದರು.ಶಾಲೆಯಲ್ಲಿ ವಿದ್ಯಾರ್ಥಿಗಳ ಕಾರ್ಯ ಚಟುವಟಿಕೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆವರಣದಲ್ಲಿ ನಿರ್ಮಿಸಿರುವ ಫ್ರೂಟ್ಸ್ ಪಾರ್ಕ್ ನಲ್ಲಿ ಹಣ್ಣಿನ ಗಿಡ ನೆಟ್ಟರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಕನಕ ವರ್ಮ ಜೈನ್, ಉಪಾಧ್ಯಕ್ಷೆ ಶ್ವೇತಾ ಜಗದೀಶ್, ಸದಸ್ಯ ಸಂತೋಷ್, ಶಾಲಾ ಮುಖ್ಯ ಗುರು ಫ್ಲೆವಿಯಾ ಡಿ ಸೋಜಾ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More News

Scroll to Top