ಸಂತ ರೀಟಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

119.3K Views 15 Aug 2026

ಮಂಗಳೂರು: ಸಂತ ರೀಟಾ ಸಮೂಹ ಶಿಕ್ಷಣ ಸಂಸ್ಥೆಗಳಾದ ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆ, ಸಂತ ರೀಟಾ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಕಾಸ್ಸಿಯಾ ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ಉತ್ಸಾಹ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.
ಶಾಲಾ ಬ್ಯಾಂಡ್ ತಂಡ ಹಾಗೂ ಎನ್‌.ಸಿ.ಸಿ ಕೆಡೆಟ್‌ಗಳ ಗೌರವಪೂರ್ವಕ ಮೆರವಣಿಗೆಯೊಂದಿಗೆ ಗಣ್ಯರನ್ನು ಕಾರ್ಯಕ್ರಮದ ಸ್ಥಳಕ್ಕೆ ಕರೆತರಲಾಯಿತು. ಸಂತ ರೀಟಾ ಸಮೂಹ ಶಿಕ್ಷಣ ಸಂಸ್ಥೆಗಳ ಜಂಟಿ ಕಾರ್ಯದರ್ಶಿ ರೆ . ಫಾ. ರಿತೇಶ್ ರೊಡ್ರಿಗಸ್ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ರಾಷ್ಟ್ರಗೀತೆ ಹಾಡಲಾಯಿತು.


ಸಂತ ರೀಟಾ ಚರ್ಚಿನ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಅಶೋಕ್ ರೋಡ್ರಿಗಸ್, ಕಾರ್ಯದರ್ಶಿ ಶ್ರೀಮತಿ ಲೊಯೋಲಾ ಡಿಸೋಜಾ, 22 ಆಯೋಗಗಳ ಸಂಯೋಜಕರಾದ ಜೋಸ್ಸಿ ಥಿಯೋದರ್, ಕಾಸ್ಸಿಯಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಆಲಿಸ್ ಕೆ.ಜೆ ಹಾಗೂ ಸಂತ ರೀಟಾ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಡೋರಿನ್ ತಾವ್ರೊ ಉಪಸ್ಥಿತರಿದ್ದರು.


ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಮೆಟಿಲ್ಡಾ ಡಿಕೋಸ್ಟಾ ಅವರು ಅತಿಥಿಗಳು ಹಾಗೂ ಸಭಿಕರನ್ನು ಸ್ವಾಗತಿಸಿದರು. ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ರೆ. ಫಾ. ರಿತೇಶ್ ರೋಡ್ರಿಗಸ್ ಅವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ವಿವರಿಸಿ, ವಿದ್ಯಾರ್ಥಿಗಳು ದೇಶಭಕ್ತಿ, ಏಕತೆ ಹಾಗೂ ಜವಾಬ್ದಾರಿಯುತ ನಾಗರಿಕತ್ವದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ಕರೆ ನೀಡಿದರು.


ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಮನಮೋಹಕ ನೃತ್ಯ ಪ್ರದರ್ಶನ ಹಾಗೂ ದೇಶಭಕ್ತಿ ಗೀತೆಗಳನ್ನು ಒಳಗೊಂಡ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರದರ್ಶಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.
ಸಂತ ರೀಟಾ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಚೈತ್ರಾ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀಮತಿ ಸಾರಾ ಅವರು ವಂದನಾರ್ಪಣೆ ಸಲ್ಲಿಸಿದರು. ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಅಮೂಲ್ಯ ಜೀವನವನ್ನು ತ್ಯಾಗ ಮಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುತ್ತಾ, ದೇಶಭಕ್ತಿ ಹಾಗೂ ರಾಷ್ಟ್ರಪ್ರೇಮದ ಭಾವನೆಯೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಸಂಪನ್ನಗೊಂಡಿತು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top