ಶೀಘ್ರದಲ್ಲಿಯೇ ಪತ್ರಕರ್ತರಿಗೆ ನಿವೇಶನ-ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ.

108.2K Views 18 Aug 2026

ಮಂಗಳೂರು, ಶೀಘ್ರದಲ್ಲಿಯೇ ಪತ್ರಕರ್ತರಿಗೆ ನಿವೇಶನ ಒದಗಿಸಲು ಎಲ್ಲಾ ಪ್ರಯತ್ನ ಗಳು ಮುಂದುವರಿದಿದೆ ಎಂದು ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದ್ದಾರೆ.
ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಪತ್ರಕರ್ತರ ಗ್ರಹ ನಿರ್ಮಾಣ ಸಹಕಾರ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈಗಾಗಲೇ ಮಂಗಳೂರು ಹೊರವಲಯದಲ್ಲಿ ಕಂದಾಯ ಭೂಮಿಯನ್ನು ಮಂಜೂರು ಮಾಡುವಂತ ರಾಜ್ಯ ಸರಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ. ಅತೀ ಶೀಘ್ರವೇ ಮಂಜೂರಾತಿ ಸಿಗುವ ವಿಶ್ವಾಸ ಇದೆ. ಆದ್ಯತೆಯ ಮೇಲೆ ಸಂಘದ ಷೇರು ಹೊಂದಿದ ಸದಸ್ಯರಿಗೆ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು. ಖಾಸಗಿ ಅವರು ಕೂಡಾ ಪತ್ರಕರ್ತರಿಗೆ ನಿವೇಶನ ನೀಡಲು ಮುಂದಾಗಿದ್ದಾರೆ. ಈ ಬಗ್ಗೆಯೂ ಪರಿಶೀಲನೆ ನಡೆಸಿ ಆದ್ಯತೆಯ ಮೇಲೆ ಪತ್ರಕರ್ತರಿಗೆ ನಿವೇಶನ ಒದಗಿಸಲಾಗುವುದು ಎಂದು ಹೇಳಿದರು. ಕಳೆದ ಆರ್ಥಿಕ ವರ್ಷದಲ್ಲಿ ಸಹಕಾರ ಸಂಘ 36 ಸಾವಿರ ರೂಪಾಯಿ ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.


ವಾರ್ಷಿಕ ಮಹಾಸಭೆಯಲ್ಲಿ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಪಾಂಡುರಂಗ ಆಚಾರ್ಯ ಅವರನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷ ಭಾಸ್ಕರ್ ರೈ ಕಟ್ಟಾ ವರದಿ ವಾಚಿಸಿದರು.ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಾಗೂ ಸಂಘದ ನಿರ್ದೇಶಕ ಪುಷ್ಪರಾಜ್ ಬಿ ಎನ್ ವಂದಿಸಿದರು.
ಸಹಕಾರ ಸಂಘದ ನಿರ್ದೇಶಕರಾದ ಮೊಹಮ್ಮದ್ ಆರಿಫ್, ಸತ್ಯವತಿ. ಕೆ, ಇಬ್ರಾಹಿಂ ಅಡ್ಕಸ್ಥಳ ಜಿತೇ0ದ್ರ ಕುಂದೇಶ್ವರ, ವಿರ್ಲ್ಫ್ರೆಡ್ ಡಿ ಸೋಜಾ, ವಿಜಯ್ ಪಡು,ಸುರೇಶ್ ಪಳ್ಳಿ, ಹರೀಶ್ ಮೋಟುಕಾನ,ಕುಮಾರಿ ಶಿಲ್ಪಾ ಆತ್ಮಭೂಷಣ್, ಪತ್ರಿಕಾ ಭವನ ಟ್ರಸ್ಟ್ ಅಧ್ಯಕ್ಷ ಅನ್ನು ಮಂಗಳೂರು, ಮಂಗಳೂರು ಪ್ರೆಸ್ ಕ್ಲಬ್ ಸ್ಟಾಪಕಾಧ್ಯಕ್ಷ ಆನಂದ್ ಶೆಟ್ಟಿ, ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಪೂಜಾರಿ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More News

Scroll to Top