ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ

96.6K Views 22 Aug 2026

ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಮತ್ತು ನಮ್ಮ ಟಿವಿ ಚಾನೆಲ್ ನ ಆಡಳಿತ ನಿರ್ದೇಶಕ ಡಾ. ಶಿವಶರಣ್ ಶೆಟ್ಟಿ ಮತ್ತು ಅವರ ಸಹೋದರರಾದ ದೇವಿಚರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಯವರ ಮಾತೃಶ್ರೀ,ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ ಹಾಗೂ ಡಾ. ಎ. ಸದಾನಂದ ಶೆಟ್ಟಿಯವರ ಸಹೋದರಿ ಎಂ. ರತ್ನಕಾಂತಿ ಶೆಟ್ಟಿ ಅವರಿಗೆ ಗಣ್ಯರಿಂದ ಶ್ರದ್ದಾಂಜಲಿ. ಮಂಗಳೂರು :ಇತ್ತೀಚೆಗೆ ನಿಧನರಾದ ಕಾಲೇಜು ಶಿಕ್ಷಣ ಇಲಾಖೆಯ ನಿವೃತ್ತ ಪ್ರಾದೇಶಿಕ ನಿರ್ದೇಶಕಿ, ಪ್ರೇಮಕಾಂತಿ ಎಜುಕೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ, ಶಿಕ್ಷಣ ತಜ್ಞೆ ಎ.ರತ್ನಕಾಂತಿ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಕೆ ಕಾರ್ಯಕ್ರಮ ಶುಕ್ರವಾರ ನಗರದ ಕೊಡಿಯಾಲಬೈಲಿನ ಡಾ| ಟಿ.ಎಂ.ಎ. ಪೈ ಕನ್ವೆನ್ಶನ್ ಸೆಂಟರ್ ನಲ್ಲಿ ನಡೆಯಿತು.
ಮಾಜಿ ಸಚಿವ ರಮಾನಾಥ ರೈ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ,, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಕರಾವಳಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಗಣೇಶ್ ರಾವ್, ಎ.ಜೆ. ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಎ.ಜೆ. ಶೆಟ್ಟಿ, ಶ್ರೀದೇವಿ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ| ಎ.ಸದಾನಂದ ಶೆಟ್ಟಿ, ಸುರಭಿ ಹೋಟೆಲ್ ಮಾಲಕ ಸುಧೀರ್ ಶೆಟ್ಟಿ, ಸಂಗೀತ ನಿರ್ದೇಶಕ ವಿ. ಮನೋಹರ್, ಮಾಜಿ ಮೇಯರ್ ಗಳಾದ ಶಶಿಧರ ಹೆಗ್ಡೆ, ಭಾಸ್ಕರ್ ಕೆ., ಪ್ರೇಮಾನಂದ ಶೆಟ್ಟಿ,ಡಾ| ಎಂ.ಶಾಂತಾರಾಮ ಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಪುಷ್ಪನಮನ ಸಲ್ಲಿಸಿದರು.
ಪುತ್ರರಾದ ಡಾ| ಗುರುಕಿರಣ್ ಶೆಟ್ಟಿ,,ದೇವಿಚರಣ್ ಶೆಟ್ಟಿ, ಡಾ| ಶಿವಶರಣ್ ಶೆಟ್ಟಿ, ಹರಿಕಿಶನ್ ಶೆಟ್ಟಿ ಸೇರಿದಂತೆ ಮನೆಯವರು, ಕುಟುಂಬಸ್ಥರು ಭಾಗವಹಿಸಿದ್ದರು.

ಶಿಕ್ಷಣ ತಜ್ಞೆ ಎಂ. ರತ್ನಕಾಂತಿ ಶೆಟ್ಟಿ

Read More News

Scroll to Top