ಸೆ.4; ಕಲ್ಕೂರ ಪ್ರತಿಷ್ಠಾನದಿಂದ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ; ಕೃಷ್ಣ ವೇಷ ಸ್ಪರ್ಧೆ

910 Views 56m ago

ಮಂಗಳೂರು,ಆ.28; ಸೆ.4ರಂದು ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ ;ಕೃಷ್ಣ ವೇಷ ಸ್ಪರ್ಧೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದುಕಲ್ಕೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ.
ಈ ಬಾರಿ ಒಟ್ಟು 44 ವಿಭಾಗದಲ್ಲಿ ಶ್ರೀ ಕೃಷ್ಣ ವೇಷ ಸ್ಪರ್ಧೆ,ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ನಡೆಯಲಿದೆ.


ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸುವ ಪ್ರಯತ್ನವಾಗಿ ಮತ್ತು ಅವರಲ್ಲಿನ ಪ್ರತಿಭೆಯನ್ನು ಗುರುತಿಸಿ ಬೆಳೆಸುವ ಸದುದ್ದೇಶದಿಂದ ಕಳೆದ ನಾಲ್ಕು ದಶಕಗಳಿಂದ (44ವರ್ಷ) ಕದ್ರಿ ಶ್ರೀ ಮಂಜುನಾಥ ದೇವಳದ ಸಹಯೋಗದೊಂದಿಗೆ ಕಲ್ಕೂರ ಪ್ರತಿಷ್ಠಾನವು ನಡೆಸಿಕೊಂಡು ಬಂದಿರುವ ರಾಷ್ಟ್ರ ಮಟ್ಟದ ಮಕ್ಕಳ ಉತ್ಸವ-“ಶ್ರೀ ಕೃಷ್ಣ ವೇಷ ಸ್ಪರ್ಧೆ”ಯ ನ್ನು ಕದ್ರಿ ಶ್ರೀ ಮಂಜುನಾಥ ದೇವ ಸ್ಥಾನದ ಪ್ರಾಂಗಣದಲ್ಲಿ ಈ ಬಾರಿಯೂ ಏರ್ಪಡಿಸ ಲಾಗಿದೆ. ಸಪ್ಟೆಂಬರ್ 4, ಶುಕ್ರವಾರ ಕೃಷ್ಣಾಷ್ಟಮಿ ಯಂದು ಬೆಳಗ್ಗೆ 9.00ರಿಂದ ಶ್ರೀ ಕೃಷ್ಣ ವರ್ಣ ವೈಭವ, ಬೆಳಿಗ್ಗೆ 10.30ಕ್ಕೆ ಮಹಿಳೆಯರು ಸಾಮೂಹಿಕವಾಗಿ ಸಾಂಪ್ರದಾಯಿಕವಾಗಿ ಹಾಡನ್ನು ಹಾಡುತ್ತಾ ಕಡಗೋಲಿನಿಂದ ಮೊಸರು (ಮಜ್ಜಿಗೆ) ಕಡೆದು ಬೆಣ್ಣೆ ತೆಗೆಯುವುದು. ಮಧ್ಯಾಹ್ನ 12 ರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.ಒಂದು ಗಂಟೆಗೆ ಸರಿಯಾಗಿ ಶ್ರೀ ಕೃಷ್ಣ ಜನ್ಮ ಮಹೋತ್ಸವ ನಂದಗೋಕುಲ ವೇದಿಕೆಯಲ್ಲಿ ಗಣ್ಯಾತಿ ಗಣ್ಯರು ಮತ್ತು ಪುಟಾಣಿ ಕೃಷ್ಣರು ಮತ್ತು ಮಾತೆಯರ ಸಮ್ಮುಖದಲ್ಲಿ ದೀಪ ಪ್ರಜ್ವಲನ. ಮಹಿಳೆಯರು ತಮ್ಮದೇ ಆದ ಸಾಂಪ್ರದಾಯಿಕ ಶೈಲಿಯಲ್ಲಿ 6ತಿಂಗಳ ಕೆಳಗಿನ ಕಂದಮ್ಮಗಳನ್ನು ತೊಟ್ಟಿಲಿಗೆ ಹಾಕುತ್ತಾ ಅವರದೇ ಭಾಷೆಯಲ್ಲಿ ಜೋಗುಳ ಹಾಡುತ್ತಾ ಮಗುವನ್ನು ತೊಟ್ಟಿಲಲ್ಲಿ ತೂಗುವುದು. ಅವರ ಮನೆಮಂದಿ ಬಂಧುಬಳಗ ಇಷ್ಟ ಮಿತ್ರರೊಂದಿಗೆ, ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.
ರಾತ್ರಿ 12.00ರ ತನಕ ವಿವಿಧ ಸ್ಪರ್ಧೆಗಳನ್ನು ಒಟ್ಟು 44 ವಿಭಾಗಗಳಲ್ಲಿ, 12 ವೇದಿಕೆಗಳಲ್ಲಿ ಏಕ ಕಾಲದಲ್ಲಿ ಆಯೋಜಿಸ ಲಾಗಿದೆ. ಮಧ್ಯಾಹ್ನ 12 ರಿಂದ ರಾತ್ರಿ 12ರವರೆಗೆ ವಿವಿಧ ಸಾಹಿತ್ಯಕ-ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಈ ರಾಷ್ಟ್ರೀಯ ಮಕ್ಕಳ ಉತ್ಸವದಲ್ಲಿ ಜೋಡಿಸಲಾಗಿದೆ,ಸ್ಥಳದಲ್ಲಿ ಹೆಸರು ನೊಂದಾಯಿಸಲು ಅವಕಾಶವಿದೆ
ಹೆಚ್ಚಿನ ವಿವರಗಳಿಗೆ ಕಲ್ಕೂರ ಪ್ರತಿಷ್ಠಾನದ ಕಚೇರಿ 0824-2492239, 9448125949, 9845083736 ಕರೆ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.
ಸಂಘಟಕರಾದ ಕದ್ರಿ ನವನೀತ ಶೆಟ್ಟಿ, ಡಾ.ಪ್ರಭಾಕರ ಜೋಶಿ,ಸುಧಾಕರ ರಾವ್ ಪೇಜಾವರ,ದಯಾನಂದ ಕಟೀಲು, ವಿಜಯ ಲಕ್ಷ್ಮೀ ಶೆಟ್ಟಿ, ಮಂಜುಳಾ ಶೆಟ್ಟಿ ಮೊದಲಾ ದವರು ಉಪಸ್ಥಿತರಿದ್ದರು.

Read More News

ವಿದೇಶಿ ನೆಲ ಅಬುಧಾಬಿಯಲ್ಲಿ ಕನ್ನಡದ ಬಾವುಟ ಹಾರಿಸಿ, ಕನ್ನಡಿಗರೆಲ್ಲರನ್ನೂ ಒಗ್ಗೂಡಿಸಿ ಕನ್ನಡದ ಕಂಪು ಪಸರಿಸಿದ ಸಮಾಜ ಸೇವೆ, ಸಾಂಸ್ಕೃತಿಕ ರಾಯಭಾರಿಯಾಗಿ ಅಂತಾರಾಷ್ಟ್ರೀಯ ಮನ್ನಣೆಗೆ ಪಾತ್ರರಾದ ಭಾರತದ ಕುವರ. ಕರಾವಳಿ ಕರ್ನಾಟಕದ ಅಮೂಲ್ಯ ಬಂಟ ರತ್ನ, ತುಳುನಾಡಿನ ಬಹುಮುಖ ಪ್ರತಿಭೆ, ಜಾತ್ಯತೀತ ಸೇವಾ ಮನೋಭಾವದ ವಿಶ್ವ ಮಾನವ, ಅಜಾತ ಶತ್ರು, ಮಹಾನ್ ಸಾಧಕ, ಹೆಮ್ಮೆಯ ತುಳುವ, ಮಂಗಳೂರು ಸ್ಟಾರ್ ಸರ್ವೋತ್ತಮ ಶೆಟ್ಟಿಯವರ ಕುರಿತು Mp MLA’s News ಅಂತಾರಾಷ್ಟ್ರೀಯ ವಿಶೇಷ ಸಂದರ್ಶನ. INTERNATIONAL ACHIEVERS Special Interview By: Dr Ashok shetty B N.

Scroll to Top