ಮೂಡಾ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಅಭಿನಂದನೆ

112.9K Views 4d ago

ಮಂಗಳೂರು: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಯುವ ನಾಯಕ ಸಂತೋಷ್ ಕುಮಾರ್ ಶೆಟ್ಟಿಯವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯಲ್ಲಿ ಭೇಟಿಯಾಗಿ ಶುಭ ಹಾರೈಸಿ ಅಭಿನಂದನೆ ಸಲ್ಲಿಸಿದ್ದಾರೆ.
ಸಂತೋಷ್ ಶೆಟ್ಟಿ ಅವರು ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ವರ್ಷಗಳಿಂದ ಪಕ್ಷ ನಿಷ್ಠೆಯಲ್ಲಿ ಕೆಲಸ ಮಾಡಿಕೊಂಡು ಬಂದವರು. ಪಕ್ಷಕ್ಕಾಗಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಅವರಿಗೆ ರಾಜ್ಯ ಸರಕಾರ ಉನ್ನತ ಹುದ್ದೆಯನ್ನು ನೀಡಿದೆ. ಸಂತೋಷ್ ಶೆಟ್ಟಿ ಅವರು ಮೂಡಾ ಅಧ್ಯಕ್ಷರಾಗಿ ಅಭಿವೃದ್ದಿ ಕೆಲಸಗಳನ್ನು ಮಾಡಲಿ ಎಂದು ಐಕಳ ಹರೀಶ್ ಶೆಟ್ಟಿ ಶುಭ ಹಾರೈಸಿದರು.

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top