ಉದ್ಯಮಿ ಪಾದೆ ಅಜಿತ್ ರೈ ಅವರಿಗೆ ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ

110K Views 4d ago

ಮಂಗಳೂರು: ವಿಶ್ವ ಬಂಟ ಪ್ರತಿಷ್ಠಾನ ಇದರ 30ನೇ ವಾರ್ಷಿಕ ಮಹಾಸಭೆ ಪ್ರತಿಷ್ಠಾನದ ಅಧ್ಯಕ್ಷ ಕುಶಲ್.ಎಸ್.ಹೆಗ್ಡೆ ಅಧ್ಯಕ್ಷತೆಯಲ್ಲಿ ಸೆ.12ರಂದು ಮಧ್ಯಾಹ್ನ 12ಕ್ಕೆ ನಗರದ ಎ.ಜೆ. ಗ್ರ್ಯಾಂಡ್‌ನ ಸಭಾಂಗಣದಲ್ಲಿ ನಡೆಯಲಿದೆ. ಬಳಿಕ ನಡೆಯುವ ಸಮಾರಂಭದಲ್ಲಿ ಯುನೈಟೆಡ್ ರಬ್ಬರ್ ಇಂಡಸ್ಟ್ರೀಸ್ ನ ಅಧ್ಯಕ್ಷ ಪಾದೆ ಅಜಿತ್ ರೈ ಅವರಿಗೆ ವಿಶ್ವ ಬಂಟ ಪ್ರತಿಷ್ಠಾನದ ಎಮಿನೆಂಟ್ ಬಂಟ್ ಪರ್ಸನಾಲಿಟಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಯಕ್ಷಗಾನ ಕಲಾವಿದ ಸುರೇಶ್ ಶೆಟ್ಟಿ ಶಂಕರನಾರಾಯಣ ಅವರಿಗೆ ಡಾ.ಡಿ.ಕೆ. ಚೌಟ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ 47ನೇ ರ‍್ಯಾಂಕ್ ಪಡೆದ ಆದಿತ್ಯ ಪೆರ್ಗಡೆ ಅವರಿಗೆ ದಿ.ಸಿಎ.ವೈ.ಆರ್.ಶೆಟ್ಟಿ ದತ್ತಿನಿಧಿ ಪ್ರಶಸ್ತಿ, ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪುನೀತ್ ಶೆಟ್ಟಿ ಅವರಿಗೆ ಸಿಎ ಗೋಪಾಲ್ ಬಿ.ಶೆಟ್ಟಿ ದತ್ತಿನಿಧಿ ಪ್ರಶಸ್ತಿ ಹಾಗೂ ಕೃಷಿ ಕ್ಷೇತ್ರದ ಸಾಧಕಿ ಸಾಧಮ್ಮ ಶೆಟ್ಟಿ ಅವರಿಗೆ ದಿ.ಎಣ್ಮಕಜೆ ಕಲಾವತಿ ಶೆಟ್ಟಿ ದತ್ತಿನಿಧಿ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದೆಂದು ವಿಶ್ವ ಬಂಟ ಪ್ರತಿಷ್ಠಾನದ ಕಾರ್ಯದರ್ಶಿ ಡಾ.ಬಿ.ಸಚ್ಚಿದಾನಂದ ರೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಫೋಟೋ : ಅಜಿತ್ ರೈ

Read More News

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top