ಸೆಪ್ಟೆಂಬರ್ 18 ರಂದು “ಟಾಸ್” ಸಿನಿಮಾ ರಾಜ್ಯಾದ್ಯಂತ ತೆರೆಗೆ

24.9K Views 12h ago

ಮಂಗಳೂರು: ಅವಿಕಾ ಪ್ರೊಡಕ್ಷನ್ ಮತ್ತು ಬಿಆರ್ ಬಿ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗಿರುವ ಅರ್ಜುನ್ ದೇವ್ ನಿರ್ದೇಶನ, ನಟನೆಯ “ಟಾಸ್” ತುಳು ಸಿನಿಮಾ ಸೆಪ್ಟಂಬರ್ 18 ರಂದು ರಾಜ್ಯಾದ್ಯಂತ ತೆರೆಕಾಣಲಿದೆ ಚಿತ್ರದ ನಿರ್ದೇಶಕ ಅರ್ಜುನ್ ದೇವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯ ಪ್ರಶಸ್ತಿ ಪುರಸ್ಕೃತ ತೆಲಿಕೆದ ಬೊಳ್ಳಿ ಡಾ|| ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ದೇವ್ ನಿರ್ದೇಶನ ಮತ್ತು ಅಭಿನಯದ “ಟಾಸ್” ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆದಿದೆ.


ನಿರ್ಮಾಪಕರು: ಪಿ ಆ್ಯಂಡ್ ವೈ ವಲ್ಡ್ ಟೂರ್ಸ್ ಎಲ್ ಎಲ್ ಪಿ ಸಾಗರ್ ಪೂಜಾರಿ, ಕಥೆ–ಚಿತ್ರಕಥೆ–ಸಂಭಾಷಣೆ ಗೀತೆಗಳು, ಡಾ. ದೇವದಾಸ್ ಕಾಪಿಕಾಡ್, ನಿರ್ದೇಶಕರು ಅರ್ಜುನ್ ದೇವ್, ಸಹ ನಿರ್ದೇಶಕರು ಯಶಾಂತ್ ಕಲ್ಲಡ್ಕ, ರಾಕೇಶ್ ಬಿ.ಜೆ. ವಿಕ್ರಮ್ ದೇವಾಡಿಗ, ಸಹಾಯಕ ನಿರ್ದೇಶಕರು ಸೌರವ್ ರಾಮ್ ಸುಜಿತ್ ವಿನೋದ್ ಆಶಿಷ್ ರಾವ್ ಛಾಯಾಗ್ರಹಣ ಜೋಯೆಲ್ ಶಮನ್ ಡಿ’ಸೋಜಾ, ಸಹಾಯಕ ಛಾಯಾಗ್ರಾಹಕರು ಅಮನ್ ಪ್ರಖ್ಯಾತ್, ಕಲಾ ನಿರ್ದೇಶನ ರಾಜೇಶ್ ಕೊಳಕೆ ರಾಜೇಶ್ ಬಾಂಧ್ಯೋಡ್, ಸಂಕಲನ ಯಶ್ವಿನ್ ಕೆ. ಶೆಟ್ಟಿಗಾರ್, ಸಂಗೀತ ಮಣಿಕಾಂತ್ ಕದ್ರಿ, ಕಾರ್ಯಕಾರಿ ನಿರ್ಮಾಪಕರು ಸಂದೀಪ್ ಶೆಟ್ಟಿ, ವಸ್ತ್ರ ವಿನ್ಯಾಸ ಅನುಪ್ ಸಾಗರ್. ವಿತರಕರಾಗಿ ಸಚಿನ್ ಎಎಸ್ ಉಪ್ಪಿನಂಗಡಿ ಕೆಲಸ ಮಾಡಿದ್ದಾರೆ ಎಂದರು.
ತಾರಾಗಣದಲ್ಲಿ ಡಾ ||ದೇವದಾಸ್ ಕಾಪಿಕಾಡ್, ಅರ್ಜುನ್ ದೇವ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಪ್ರಕಾಶ್ ತುಮಿನಾಡು, ದೀಪಕ್ ರೈ ಪಾಣಾಜೆ, ಪುಷ್ಪರಾಜ್ ಬೊಳ್ಳಾರ್, ಸುತೇಜ್ ಶೆಟ್ಟಿ, ಸಂಗೀತಾ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರಾ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಿದ್ದಾರೆ.


ಟಾಸ್ ತುಳು ಹಾಗೂ ಕನ್ನಡ ಭಾಷೆಯಲ್ಲಿ ತಯಾರಾಗಿದೆ. ಎರಡನ್ನೂ ಬೇರೆ ಬೇರೆಯಾಗಿ ಚಿತ್ರೀಕರಣ ಮಾಡಲಾಗಿದೆ. ಈ ಸಿನಿಮಾಗಳಿಗೆ ನಟ ಗಣೇಶ್ ಮತ್ತು ಶಿಲ್ಪಾ ಗಣೇಶ್ ಸಾಥ್ ನೀಡಿದ್ದಾರೆ ಎಂದು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ತಿಳಿಸಿದರು.
ಟಾಸ್ ಸಿನಿಮಾ ಮಂಗಳೂರು, ಸುರತ್ಕಲ್, ಪಡುಬಿದ್ರೆ, ಉಡುಪಿ, ಮಣಿಪಾಲ, ಕುಂದಾಪುರ ಕಾರ್ಕಳ, ಬೆಳ್ತಂಗಡಿ, ಪುತ್ರೂರು, ಸುಳ್ಯ ಸಹಿತ ಬೇರೆ ಬೇರೆ ಕಡೆಗಳಲ್ಲಿ ಬಿಡುಗಡೆಗೊಳ್ಳಲಿದೆ. ಬೆಂಗಳೂರು, ಮೈಸೂರು ಮೊದಲಾದ ಕಡೆಗಳಲ್ಲೂ ಸಿನಿಮಾ ಬಿಡುಗಡೆಯಾಗಲಿದೆ.
ಇದೊಂದು ಪಕ್ಕಾ ಕಾಮಿಡಿ ಸಿನಿಮಾ, ಸೆಂಟಿಮೆಂಟ್, ಆ್ಯಕ್ಷನ್, ಥ್ರಿಲ್ಲರ್ ಹೀಗೆ ಎಲ್ಲಾ ಅಂಶಗಳನ್ನು ಒಳಗೊಂಡಿರುವ ಪಕ್ಕಾ ಫ್ಯಾಮಿಲಿ ಪ್ಯಾಕೇಜ್, ಎಲ್ಲಾ ಚಿಂತೆಗಳನ್ನು ಬಿಟ್ಟು ಎಂಜಾಯ್ ಮಾಡಬೇಕೆಂದು ರೆಡಿ ಮಾಡಿರುವ ಸಿನಿಮಾ ಇದು. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಏನೇನು ಬೇಕೋ ಎಲ್ಲವೂ “ಟಾಸ್” ಸಿನಿಮಾದಲ್ಲಿದೆ* ಎಂದು ನಿರ್ದೇಶಕ ಅರ್ಜುನ್ ದೇವ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನವೀನ್ ಡಿ ಪಡೀಲ್, ಭೋಜರಾಜ ವಾಮಂಜೂರು, ಸುತೇಜ್ ಶೆಟ್ಟಿ ಚೈತ್ರಾ ಶೆಟ್ಟಿ, ಜೋಯಲ್, ಸಂದೀಪ್ ಶೆಟ್ಟಿ ಶರ್ಮಿಳಾ ಕಾಪಿಕಾಡ್ ಮೊದಲಾದವರು ಉಪಸ್ಥಿತರಿದ್ದರು.

Read More News

ಇಂದು ಸಂಜೆ (ಸೆ.13 )ಬಿ.ಸಿ. ರೋಡ್ ನಲ್ಲಿ ನಡೆದ ಮಾಜಿ ಸಚಿವ ಬಿ. ರಮಾನಾಥ ರೈ ಅವರ ಹುಟ್ಟುಹಬ್ಬದ 75ರ ಸಂಭ್ರಮ ಮತ್ತು ಲಾಂಛನ ಬಿಡುಗಡೆ ಕಾರ್ಯಕ್ರಮ.ಜೊತೆಗೆ, ಪ್ರಜ್ಞಾಶ್ರಮದ ವಿದ್ಯಾರ್ಥಿಗಳಿಗೆ ರೋಶನ್ ರೈ ನೇತೃತ್ವದಲ್ಲಿ ಭೋಜನ ವ್ಯವಸ್ಥೆ. ಮಾನವೀಯ ಮೌಲ್ಯಗಳಿಗೆ ಜೀವ ತುಂಬಿದ ಬೇಬಿಯಣ್ಣನ ಬರ್ತ್ ಡೇ.

ದ.ಕ. ಕಾಂಗ್ರೆಸ್ ಗೆ ಪದ್ಮರಾಜ್ ಸಾರಥ್ಯ: ಬಿಲ್ಲವ ಅಸ್ತ್ರ, ಬಂಟ-ಕ್ರೈಸ್ತ-ಮುಸ್ಲಿಂ ಸಮುದಾಯದ ಪ್ರತಿಕ್ರಿಯೆ ಹೇಗಿದೆ ಮತ್ತು 8 ವಿಧಾನ ಸಭಾ ಕ್ಷೇತ್ರದ ಗೆಲುವಿನ ಟಾರ್ಗೆಟ್ ಸೇರಿದಂತೆ ವಿಶೇಷ ಸಂದರ್ಶನದಲ್ಲಿ ಪದ್ಮರಾಜ್ ಪೂಜಾರಿ ಅವರು ಹೇಳಿದ್ದೇನು? MP MLA’S NEWS SPECIAL EXCLUSIVE REPORT by DR ASHOK SHETTY BN.

Scroll to Top