ತುಳು ನಮ್ಮ ಮಾತೃಭಾಷೆ ಮಾತ್ರವಲ್ಲ; ಅದು ನಮ್ಮ ನೆಲದ ಇತಿಹಾಸ, ನಮ್ಮ ಸಂಸ್ಕೃತಿ, ನಮ್ಮ ಪರಂಪರೆ, ನಮ್ಮ ಭಾವನೆ ಮತ್ತು ನಮ್ಮ ಅಸ್ಮಿತೆಯ ಜೀವಂತ ಪ್ರತೀಕ

115.7K Views 1d ago

ಮಂಗಳೂರು: ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಸ್ಥಾನಮಾನ ದೊರಕುವ ಈ ಐತಿಹಾಸಿಕ ಸಂದರ್ಭದಲ್ಲಿ, ಈ ಮಹತ್ವದ ನಿರ್ಧಾರಕ್ಕೆ ಕಾರಣರಾದ ಕರ್ನಾಟಕದ ಪ್ರಸ್ತುತ ಸರ್ಕಾರಕ್ಕೆ ಹಾಗೂ ಮಾನ್ಯ ಮುಖ್ಯಮಂತ್ರಿಗಳು, ಸಚಿವ ಸಂಪುಟದ ಎಲ್ಲಾ ಸದಸ್ಯರಿಗೆ , ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ಬಂಟ ಸಮುದಾಯದ ಪರವಾಗಿ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆ ಸಲ್ಲಿಸಿದ್ದಾರೆ.

ಆದರೆ, ಈ ಕ್ಷಣವು ಕೇವಲ ಇಂದಿನ ಸಾಧನೆಯಲ್ಲ. ಇದು ಹಲವು ದಶಕಗಳ ಕನಸು, ಹೋರಾಟ ಮತ್ತು ನಿರಂತರ ಪ್ರಯತ್ನಗಳ ಫಲ.
ತುಳು ಭಾಷೆಯ ಉಳಿವು, ಬೆಳವಣಿಗೆ ಮತ್ತು ಅಧಿಕೃತ ಮಾನ್ಯತೆಗಾಗಿ ಬಹು ವರ್ಷಗಳ ಕಾಲ ಧ್ವನಿ ಎತ್ತಿದ ಹಿರಿಯರು, ಸಾಹಿತಿಗಳು, ಸಂಶೋಧಕರು, ಕಲಾವಿದರು, ಸಂಘ-ಸಂಸ್ಥೆಗಳು, ಹೋರಾಟಗಾರರು, ಜನಪ್ರತಿನಿಧಿಗಳು ಹಾಗೂ ಅಸಂಖ್ಯಾತ ತುಳು ಭಾಷಾ ಪ್ರೇಮಿಗಳಿಗೆ ಈ ಸಂದರ್ಭದಲ್ಲಿ ನಮ್ಮ ಹೃದಯಪೂರ್ವಕ ನಮನಗಳು.ತಮ್ಮ ಜೀವನದ ಅಮೂಲ್ಯ ಸಮಯವನ್ನು ತುಳು ಭಾಷೆಗಾಗಿ ಸಮರ್ಪಿಸಿದ, ಹಲವು ಬಾರಿ ಪ್ರತಿಕೂಲ ಪರಿಸ್ಥಿತಿಗಳ ನಡುವೆಯೂ ತಮ್ಮ ಹೋರಾಟವನ್ನು ನಿಲ್ಲಿಸದ ಎಲ್ಲರ ಪರಿಶ್ರಮವನ್ನು ಇಂದು ಕೃತಜ್ಞತೆಯಿಂದ ಸ್ಮರಿಸಬೇಕಾಗಿದೆ. ಎಂದವರು ತಿಳಿಸಿದ್ದಾರೆ
ಒಂದು ಭಾಷೆಗೆ ಮಾನ್ಯತೆ ದೊರಕುವುದು ಎಂದರೆ ಕೇವಲ ಒಂದು ಆಡಳಿತಾತ್ಮಕ ನಿರ್ಧಾರವಲ್ಲ. ಅದು ಒಂದು ಜನಸಮುದಾಯದ ಭಾಷೆ, ಸಂಸ್ಕೃತಿ ಮತ್ತು ಅಸ್ಮಿತೆಗೆ ದೊರಕುವ ಗೌರವ.
ಕನ್ನಡದ ನೆಲದಲ್ಲಿ ಕನ್ನಡದೊಂದಿಗೆ ತುಳು ಕೂಡ ಗೌರವದಿಂದ ಅರಳಲಿ; ತುಳು ಸಾಹಿತ್ಯ, ಕಲೆ, ಶಿಕ್ಷಣ ಮತ್ತು ಆಡಳಿತದ ಕ್ಷೇತ್ರಗಳಲ್ಲಿ ಇನ್ನಷ್ಟು ಸಮೃದ್ಧವಾಗಿ ಬೆಳೆಯಲಿ ಎಂಬುದು ನಮ್ಮ ಆಶಯ.
ಈ ಐತಿಹಾಸಿಕ ಹೆಜ್ಜೆಯನ್ನು ಇಟ್ಟ ಕರ್ನಾಟಕ ಸರ್ಕಾರಕ್ಕೆ ಮತ್ತೊಮ್ಮೆ ,ಬಂಟರ ಯಾನೆ ನಾಡವರ ಮಾತೃ ಸಂಘದ ಹೃತ್ಪೂರ್ವಕ ಧನ್ಯವಾದಗಳು.

ಇದು ಒಬ್ಬರ ಗೆಲುವಲ್ಲ — ಇದು ತಲೆಮಾರುಗಳ ಕನಸಿನ ಸಾಕಾರ.
ಇದು ಹೋರಾಡಿದವರ ಜಯ, ತುಳುವನ್ನು ಉಳಿಸಿದವರ ಜಯ, ತುಳುವನ್ನು ಪ್ರೀತಿಸಿದ ಪ್ರತಿಯೊಬ್ಬ ತುಳುವನ ಜಯ.

ಸರ್ವರಿಗೂ ಹೃದಯಪೂರ್ವಕ ಅಭಿನಂದನೆಗಳು ಮತ್ತು ಕೃತಜ್ಞತೆಗಳು. 🙏🏼

Read More News

MP MLA’S NEWS 🔴ಬ್ರೇಕಿಂಗ್ ನ್ಯೂಸ್ | ಎಕ್ಸ್‌ಕ್ಲೂಸಿವ್ ಸ್ಪಾಟ್ ರಿಪೋರ್ಟ್. ಪ್ರಜಾ ಸೌಧದ ಐತಿಹಾಸಿಕ ಪತ್ರಿಕಾಗೋಷ್ಠಿಯಲ್ಲಿ MP MLA’S NEWS ಭಾಗಿ: ₹30,000 ಕೋಟಿ ಗುತ್ತಿಗೆದಾರರ ಬಾಕಿ ಪ್ರಶ್ನೆಗೆ ಡಿಸಿಎಂ ಪರಮೇಶ್ವರ್ ಹಿಂದೇಟು, ಹೋಟೆಲ್ ಬಂದ್ ಪ್ರಶ್ನೆಗೆ ಖಾದರ್ ನಿರ್ಲಕ್ಷ್ಯ!

ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷೆಯೆಂದು ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್. *ಮಂಗಳೂರಿನಲ್ಲಿ ಮೊದಲ ಬಾರಿಗೆ ಸಚಿವ ಸಂಪುಟ ಸಭೆ: 32,611 ಕೋಟಿ ರೂ. ಯೋಜನೆಗಳಿಗೆ ಅನುಮೋದನೆ. *ಕರಾವಳಿ ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ 2026. *ಗ್ರಾಮೀಣ ಸಂಪರ್ಕ ರಸ್ತೆ, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಒಟ್ಟು 16,000 ಕೋಟಿ ಯೋಜನೆ. *ದಕ್ಷಿಣ ಕನ್ನಡಕ್ಕೆ ಮಂಗಳೂರು ಮರುನಾಮಕರಣ: ಜನಾಭಿಪ್ರಾಯ ಸಂಗ್ರಹ. *ಮುಂದಿನ ದಿನಗಳಲ್ಲಿ 10-12 ಕಡೆ ಸಚಿವ ಸಂಪುಟ ಸಭೆ

Scroll to Top