ಇಂದು ಅಂಜೆಲೋರ್ ಚರ್ಚ್ ವಾರ್ಷಿಕ ಹಬ್ಬ

91.8K Views 1w ago

ಮಂಗಳೂರು: ಮಂಗಳೂರಿನ ನಾಗುರಿಯ ಆಂಜೆಲೋರ್ ನ ಗಾರ್ಡಿಯನ್ ಏಂಜೆಲ್ ಚರ್ಚ್ ನ ವಾರ್ಷಿಕ ಹಬ್ಬ ಅಕ್ಟೋಬರ್ 2 ರಂದು ನಡೆಯಲಿದೆ.
ಬೆಳಗ್ಗೆ 10 ಗಂಟೆಗೆ ನಡೆಯುವ ಹಬ್ಬದ ಸಂಭ್ರಮದ ಬಲಿ ಪೂಜೆಯ ಮುಖ್ಯ ಕಾರ್ಮಿಕತ್ವವನ್ನು
ಮಂಗಳೂರು ಧರ್ಮ ಪ್ರಾಂತ್ಯದ ಸಿಟಿ ವಲಯದ ಪ್ರಧಾನ ಗುರು ಹಾಗೂ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ ರಿಚಾರ್ಡ್ ಅಲೋಶಿಯಸ್ ಕುವೆಲ್ಲೊ ಅವರು ವಹಿಸಿ ಸಂದೇಶ ನೀಡಲಿದ್ದಾರೆ. ಆಂಜೆಲೋರ್ ಚರ್ಚ್ ನ ಪ್ರಧಾನ ಧರ್ಮಗುರು ವಂದನೀಯ ಫಾ. ಫ್ರೆಡ್ರಿಕ್ ಮೊಂತೇರೊ ಮತ್ತು ಸಹಾಯಕ ಗುರು ವಂದನೀಯ ಫಾ. ಅವಿಲ್ ಸಾಂತ್ ಮಯೋರ್ ಹಾಗೂ ಇತರ ಗುರುಗಳು ಭಾಗವಹಿಸಲಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top