ರಮಾನಾಥ ರೈ ಅವರ ಆರೋಗ್ಯ ವಿಚಾರಿಸಿದ ಸಚಿವ ಯು.ಟಿ. ಖಾದರ್

105K Views 1w ago

ಬಂಟ್ವಾಳ: ಮಾಜಿ ಸಚಿವರಾದ ಬಿ. ರಮಾನಾಥ ರೈ ಅವರ ಕಳ್ಳಿಗೆ ನಿವಾಸಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು.ಟಿ. ಖಾದರ್ ಅವರು ಇಂದು ಭೇಟಿ ನೀಡಿದರು.


ಈ ಸಂದರ್ಭದಲ್ಲಿ ಸಚಿವ ಯು.ಟಿ. ಖಾದರ್ ಅವರು ರಮಾನಾಥ ರೈ ಅವರ ಆರೋಗ್ಯದ ಕುರಿತು ವಿಚಾರಿಸಿ, ಆರೋಗ್ಯ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದುಕೊಂಡರು. ಇದೇ ವೇಳೆ ರಮಾನಾಥ ರೈ ಅವರೊಂದಿಗೆ ಆತ್ಮೀಯವಾಗಿ ಮಾತುಕತೆ ನಡೆಸಿ, ಶೀಘ್ರ ಚೇತರಿಕೆಗೆ ಹಾರೈಸಿದರು.
ಭೇಟಿಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಫೋಟೋ: ಸತೀಶ್ ಕಾರ್ತಿಕ್ ಸ್ಟುಡಿಯೋ, ಬಿ. ಸಿ. ರೋಡ್

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top