ಕುತ್ಲುರು ಸರಕಾರಿ ಶಾಲೆಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು

117.4K Views 6d ago

ಮಂಗಳೂರು, ಬೆಳ್ತಂಗಡಿ ತಾಲೂಕಿನ ಕುತ್ಲುರು ಸರಕಾರಿ ಉನ್ನತಿಕರಿಸೀದ ಹಿರಿಯ ಪ್ರಾಥಮಿಕ ಶಾಲೆಗೆ ಅಂತರಾಷ್ಟ್ರೀಯ ಜೂಡೋ ತರಬೇತುದಾರ ಹಾಗೂ ಕರ್ನಾಟಕ ಸ್ಟೇಟ್ ಜೂಡೋ ಅಸೋಸಿಯೇಷನ್ ಅಧ್ಯಕ್ಷ ಯತೀಶ್ ಎನ್ ಬಂಗೇರಾ ಹಾಗೂ ಗ್ಲೋಬಲ್ ಸಿಂಪತಿ ಫೌಂಡೇಶನ್ ಅಧ್ಯಕ್ಷ ರೋನ್ಸ್ ಬಂಟ್ವಾಳ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳ ಪರಿಸರ ಪ್ರೇಮದ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲಾ ಆವರಣ ದಲ್ಲಿರುವ ಫ್ರೂಟ್ಸ್ ಪಾರ್ಕ್ ನಲ್ಲಿ ರಂಬೂಟಾನ್ ಗಿಡಗಳನ್ನು ನೆಟ್ಟು ಅಃಉಭಕೋರಿದರು.
ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಗ್ಲೋಬಲ್ ಸಿಂಪತಿ ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ಹಸ್ತಾಂತರಿಸಲಾಯಿತು.


ಸನ್ಮಾನ ಸ್ವೀಕರಿಸಿ ಮಾತನಾಡಿದ ಅಂತಾರಾಷ್ಟ್ರೀಯ ಜೂಡೋ ತರಬೇತುದಾರ ಯತೀಶ್ ಎನ್ ಬಂಗೇರಾ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿರುವ ಈ ಸರಕಾರಿ ಶಾಲೆ ಮಾದರಿಯಾಗಿದೆ. ಈ ಶಾಲೆಯ ಅಭಿವೃದ್ಧಿಗೆ ಎಲ್ಲಾ ರೀತಿಯ ಸಹಾಯ ನೀಡಲಾಗುವುದು. ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗದ ಸರಕಾರಿ ಶಾಲೆಯ ಮಕ್ಕಳಿಗೆ ಉಚಿತ ಜೂಡೋ ತರಬೇತಿ ನೀಡಲಾಗುವುದು. ಈ ಮೂಲಕ ಒಲಂಪಿಕ್ಸ್ ಸೇರಿದಂತೆ ಅಂತಾರಾಷ್ಟ್ರೀಯ ಕ್ರೀಡೆಗಳಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಅರ್ಹತೆ ಪಡೆಯುವ ರೀತಿಯಲ್ಲಿ ತರಬೇತಿ ಕೊಡಲಾಗುವುದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಶ್ರೀನಿವಾಸ್ ನಾಯಕ್ ಇಂದಾಜೆ, ಶಾಲಾಭಿವೃದ್ಫಿ ಸಮಿತಿ ಅಧ್ಯಕ್ಷ ಕನಕ ವರ್ಮ ಜೈನ್ ಶಾಲಾ ಮುಖ್ಯ ಗುರು ಫ್ಲೆವಿಯಾ ಡಿ ಸೋಜಾ, ಶಾಲಾ ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

ದುಬೈಯ ಹೆಸರಾಂತ ಉದ್ಯಮಿ ಪ್ರಸಾದ್ ಕುಮಾರ್ ಶೆಟ್ಟಿ ಪ್ರಸ್ತುತಪಡಿಸುವ ಬಹು ನಿರೀಕ್ಷೆಯ ತುಳು ಚಲನಚಿತ್ರ “ಡಾ. ಮೋಹನ್ ಎಂಬಿಬಿಎಸ್” ಡಿಸೆಂಬರ್ ನಲ್ಲಿ ತೆರೆಗೆ. ಇದು ಕಾರ್ಪೊರೇಟ್ ವೈದ್ಯಕೀಯ ಮಾಫಿಯಾದ ವಿರುದ್ಧ ಸಿಡಿದೆದ್ದ ನಿಷ್ಠಾವಂತ ವೈದ್ಯನೊಬ್ಬನ ಕಥೆ .ಪ್ರಶಸ್ತಿ ವಿಜೇತ ನಿರ್ದೇಶಕ ವೆಂಕಟ್ ಭಾರದ್ವಾಜ್ ನಿರ್ದೇಶನದ ಡಾ.ಸುಧಾಕರ್ ಶೆಟ್ಟಿ ಪುಣೆ- ಮೂಡಬಿದ್ರಿ ಪರಿಕಲ್ಪನೆಯ ಸಿನಿಮಾ.

Scroll to Top