ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅರ್ಜಿ ಆಹ್ವಾನ

100.8K Views 5d ago

ಬೆಂಗಳೂರು, ಅಕ್ಟೋಬರ್ 06:- ಕರ್ನಾಟಕ ಮಾಧ್ಯಮ ಅಕಾಡೆಮಿಯು ಮಹಿಳಾ ಆಯವ್ಯಯದಡಿ ಪತ್ರಿಕೋದ್ಯಮದಲ್ಲಿ ಆಸಕ್ತಿ ಇರುವ ಪತ್ರಿಕೋದ್ಯಮದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವೀಧರರಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಇಂಟರ್ನ್ಷಿಪ್ ಗಾಗಿ ಅವಕಾಶ ಕಲ್ಪಿಸಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಅಯೇಶಾ ಖಾನಂ ತಿಳಿಸಿದ್ದಾರೆ.
ಬರವಣಿಗೆಯಲ್ಲಿ ಪರಿಣತಿ ಮತ್ತು ಪತ್ರಿಕೋದ್ಯಮದಲ್ಲಿ ಆಸಕ್ತಿ ಹೊಂದಿರುವ 2022-23, 2023-24, 2024-2025 ಹಾಗೂ 2025-2026ನೇ ಶೈಕ್ಷಣಿಕ ವರ್ಷದಲ್ಲಿ ಪಡೆದ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಪತ್ರಿಕೋದ್ಯಮದಲ್ಲಿ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಒಟ್ಟು 20 ಅಭ್ಯರ್ಥಿಗಳಿಗೆ ಇಂಟರ್ನ್ಷಿಪ್ ಅವಕಾಶ ಒದಗಿಸಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ವಿವಿಧ ಮಾಧ್ಯಮ ಸಂಸ್ಥೆಗಳಲ್ಲಿ ಎರಡು ತಿಂಗಳ ಇಂಟರ್ನ್ಷಿಪ್ಗೆ ಅವಕಾಶ ಕಲ್ಪಿಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಕಾಡೆಮಿ ವತಿಯಿಂದ ಸ್ಟೈಪೆಂಡ್ ನೀಡಲಾಗುವುದು.
ಅಭ್ಯರ್ಥಿಗಳು ತಮ್ಮ ಸ್ವವಿವರ (Curriculum Vitae) ದೊಂದಿಗೆ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಪೂರಕ ದಾಖಲೆಗಳೊಂದಿಗೆ ಗೂಗಲ್ ಫಾರ್ಮ್ https://docs.google.com/forms/d/e/1FAIpQLSfYwla-tbEhbvzUmRvWdsOCn44knMZ7orPgzExhxJsmUxIxlQ/viewform
ರಲ್ಲಿ ಅರ್ಜಿ ಸಲ್ಲಿಸುವುದು. ಅಭ್ಯರ್ಥಿಗಳ ಆಯ್ಕೆಯ ಅಂತಿಮ ತೀರ್ಮಾನ ಅಕಾಡೆಮಿಯ ಸಮಿತಿಯದ್ದೇ ಅಗಿರುತ್ತದೆ.
ಅರ್ಜಿ ಸಲ್ಲಿಸಲು 2026 ರ ಅಕ್ಟೋಬರ್ 23 ಕೊನೆಯ ದಿನವಾಗಿದೆ. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸುವುದಿಲ್ಲ ಎಂದು ಅಯೇಶಾ ಖಾನಂ ಅವರು ಅಕಾಡೆಮಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top