ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

106K Views 4d ago

ಮೂಲ್ಕಿ: ನಿವೃತ್ತಿಯ ನಂತರ ವಿಶ್ರಾಂತ ಜೀವನ ನಡೆಸುವ ಬದಲು ಹತ್ತು ವರ್ಷಗಳ ಹಿಂದೆ ವಿಭಿನ್ನ ಶೈಲಿಯ ಹೊಸ ಅಂಗಣ ಕನ್ನಡ ಮಾಸಿಕ ಆರಂಭಿಸಿ ಸಾಹಿತ್ಯ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ದಶಮಾನೋತ್ಸವ ಸಂಭ್ರಮ ಆಚರಿಸುತ್ತಿರುವ ಡಾ. ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ ಪತ್ರಿಕೋದ್ಯಮ,ಸಾಹಿತ್ಯ ಸೇವೆ ಇತರರಿಗೆ ಅನುಕರಣೀಯ ಎಂದು ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್ ಹೇಳಿದರು.
ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇಗುಲದ ಅನ್ನಪೂರ್ಣೇಶ್ವರೀ ಸಭಾಂಗಣದಲ್ಲಿ ನಡೆದ ಡಾ. ಹರಿಶ್ಚಂದ್ರ ಪಿ. ಸಾಲ್ಯಾನ್ ಅವರ ‘ಹೊಸ ಅಂಗಣ’ ಪತ್ರಿಕೆಯ ದಶಮಾನೋತ್ಸವ ಸಂಭ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು, ಡಾ. ಸಾಲ್ಯಾನ್ ರಚಿಸಿದ ‘ತುಳುನಾಡ ಮದುಮೆ’ ಕೃತಿಯನ್ನು ಬಿಡುಗಡೆಗೊಳಿಸಿದರು. ಹತ್ತು ವರ್ಷಗಳಿಂದ ‘ಹೊಸ ಅಂಗಣ’ ನಿರಂತರವಾಗಿ ಪ್ರಕಟಗೊಳ್ಳುತ್ತಿರುವುದು ಶ್ಲಾಘನೀಯ. ಪತ್ರಿಕೆ ತನ್ನ ಮೂಲ ಸ್ವರೂಪಕ್ಕೆ ಧಕ್ಕೆ ಬಾರದಂತೆ ಮುಂದುವರೆಯಲಿ ಎಂದು ಶುಭ ಹಾರೈಸಿದರು. ಕಸಾಪ ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ವಿಶೇಷ ಸಂಚಿಕೆ ಬಿಡುಗಡೆಗೊಳಿಸಿದರು.


ರಾಜ್ಯ ಪ್ರಶಸ್ತಿ ಪ್ರದಾನ: ಹೊಸ ಅಂಗಣ’ ಪತ್ರಿಕೆ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಭಾನುಮತಿ ಶೆಟ್ಟಿ ಕಕ್ವಗುತ್ತು, ಸರೋಜಿನಿ ಸುವರ್ಣ, ಸುರೇಂದ್ರ ಜಿ. ಶೆಣೈ, ಎ. ಕೃಷ್ಣಾನಂದ ಶೆಟ್ಟಿ ಐಕಳ, ಜೈಕೃಷ್ಣ ಕೋಟ್ಯಾನ್, ಜೋನ್ ಕ್ವಾಡ್ರಸ್, ವಾಸು ಪೂಜಾರಿ ಚಿತ್ರಾಪು, ದಿನೇಶ್ ಕೆ. ಶೆಟ್ಟಿ ಮತ್ತು ಪುನೀತ್‌ಕೃಷ್ಣ ಅವರನ್ನು ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲಾಯಿತು. ವಿವಿಧ ಕ್ಷೇತ್ರಗಳ ಸಾಧಕರನ್ನು, ಪತ್ರಿಕೆಯ ಗೌರವ ಸಲಹೆಗಾರರನ್ನು ಸಮ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಾಜಿ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ವಸಂತ್ ಬೆರ್ನಾರ್ಡ್, ಕಸಾಪ ಮಾಜಿ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಬಿಲ್ಲವ ಮಹಾಮಂಡಲ ಅಧ್ಯಕ್ಷ ಸೂರ್ಯಕಾಂತ ಜೆ. ಸುವರ್ಣ, ‘ಯುಗಪುರುಷ’ ಸಂಪಾದಕ ಭುವನಾಭಿರಾಮ ಉಡುಪ, ನ್ಯಾಯವಾದಿ ಭಾಸ್ಕರ ಹೆಗ್ಡೆ, ಶಾಂಭವಿ ಜೇಸಿಐ ಟ್ರಸ್ಟ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹಬೀಬುಲ್ಲಾ, ವಿಜಯ ಎಚ್ ಸಾಲ್ಯಾನ್ , ಅಕ್ಷಯ ಎಚ್ ಸಾಲ್ಯಾನ್ , ತುಷಾರ್ ಎಚ್ ಸಾಲ್ಯಾನ್ , ಲಿವನ್ ಬೆಂಗಳೂರು, ಕಾಂತು ಸೇರ್ವೆಗಾರ ಧರ್ಮಚಾವಡಿ ಅಧ್ಯಕ್ಷ ವಾಸು ಪೂಜಾರಿ ಹಾಗೂ ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಸಂದರ್ಭೋಚಿತವಾಗಿ ಮಾತನಾಡಿದರು.
ಪತ್ರಿಕೆಯ ಸಂಪಾದಕ ಹರಿಶ್ಚಂದ್ರ ಟಿ.ಸಾಲ್ಯಾನ್ ಪತ್ರಿಕೆ ಹಾಗೂ ತನ್ನ ಕೃತಿಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಗೂ ಅತಿಥಿಗಳನ್ನು ಗೌರವಿಸಿದರು. ವಿಜಯಾ ಹರಿಶ್ಚಂದ್ರ ಸಾಲ್ಯಾನ್ ಸಹಕರಿಸಿದರು.
ಸಮಾರೋಪ ಸಮಾರಂಭ:
ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ನಿರಂತರ ಓದುವ ಹವ್ಯಾಸ ವ್ಯಕ್ತಿಯನ್ನು ಜ್ಞಾನವಂತರನ್ನಾಗಿಸುತ್ತದೆ. ಅದಕ್ಕನುಗುಣವಾಗಿ ನಾಡಿನ ಉತ್ತಮ ಲೇಖಕರ ಲೇಖನ, ವಾರ್ತೆಗಳೊಂದಿಗೆ ಈ ಮಾಸಪತ್ರಿಕೆಯು ಪ್ರಕಟಗೊಳ್ಳುತ್ತಿದೆ . ಇಂದಿನ ಜಂಜಾಟದ ಬದುಕಿನಲ್ಲಿ ಸಾಹಿತ್ಯ ಚಟುವಟಿಕೆಗಳು ಅತ್ಯಂತ ಅಗತ್ಯ ಎಂದು ಹೇಳಿದರು.
ಮೂಲ್ಕಿ ಬಂಟರ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಎಸ್‌ಎನ್‌ಜಿ ಆಂಗ್ಲ ಮಾಧ್ಯಮ ಶಾಲೆ ಸಂಚಾಲಕ ಹರೀಂದ್ರ ಸುವರ್ಣ, ಮೂಲ್ಕಿ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸತೀಶ್ ಅಂಚನ್, ಹೆಜಮಾಡಿ ಬಿಲ್ಲವ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ, ಕನ್ನಂಗಾರ್ ಶ್ರೀ ಬ್ರಹ್ಮಬೈದರ್ಕಳ ಗರಡಿ ಅಧ್ಯಕ್ಷ ಶೀನ ಪೂಜಾರಿ, ಉದ್ಯಮಿಗಳಾದ ನಿಡ್ಡೋಡಿ ಚಾವಡಿಮನೆ ಜಗನ್ನಾಥ ಶೆಟ್ಟಿ ಹಾಗೂ ಪ್ರಭಾಕರ ಪೂಜಾರಿ, ಬಪ್ಪನಾಡು ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸುನಿಲ್ ಆಳ್ವ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ತಮ್ಮ ಅನಿಸಿಕೆಗಳನ್ನು ವ್ಯಕ್ತ ಪಡಿಸಿದರು.
ಶ್ರೀ ನಾರಾಯಣ ಗುರು ಭಜನಾ ಮಂಡಳಿ ಮುಲ್ಕಿಯ ಚಂದ್ರಿಕಾ ಮತ್ತು ಶ್ರೀಮತಿ ಮಮತಾರವರ ಪ್ರಾರ್ಥನೆಯೊಂದಿಗೆ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿತ್ತು.
ದಿನೇಶ್ ಕೆ. ಶೆಟ್ಟಿ ಹಾಗೂ ವೈ.ಎನ್. ಸಾಲ್ಯಾನ್ ಸ್ವಾಗತಿಸಿದರು. ಚರಣ್ ಬಜಪೆ ಹಾಗೂ ದಿನೇಶ್ ಕೊಲ್ನಾಡು ಕಾರ್ಯಕ್ರಮ ನಿರ್ವಹಿಸಿದರು.

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top