ರಕ್ತದಾನದಿಂದ ಪರರ ಜೀವ ಉಳಿಸುವ ಸಂಕಲ್ಪ -ಶಾಸಕ ಡಿ.ವೇದವ್ಯಾಸ ಕಾಮತ್

42.6K Views 12h ago

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ೨೫ ವರ್ಷದ ಸಾರ್ಥಕ ಜನಸೇವೆಯ ಅಂಗವಾಗಿ ಸೇವಾ ಸಂಕಲ್ಪ ಅಭಿಯಾನದ ಪ್ರಯುಕ್ತ ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ಯುವ ಮೋರ್ಚಾ ವತಿಯಿಂದ ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಸಹಯೋಗದಲ್ಲಿ ಭಾನುವಾರ ನಗರದ ರೆಡ್‌ಕ್ರಾಸ್ ಶತಮಾನೋತ್ಸವ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.
ಶಿಬಿರ ಉದ್ಘಾಟಿಸಿದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ ” ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ನಿಸ್ವಾರ್ಥ ಜನಸೇವೆ ದೇಶದ ಜನತೆಗೆ ಪ್ರೇರಣೆಯಾಗಿದೆ. ಅವರ ಸೇವೆಯನ್ನು ಗೌರವಿಸುವ ನಿಟ್ಟಿನಲ್ಲಿ ಯುವ ಮೋರ್ಚಾ ಕಾರ್ಯಕರ್ತರು ರಕ್ತದಾನ ಮಾಡುವ ಮೂಲಕ ಇನ್ನೊಬ್ಬರ ಜೀವ ಉಳಿಸುವ ಸಂಕಲ್ಪ ತಳೆದಿದ್ದಾರೆ’ ಎಂದರು.
ಇAಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಮಾತನಾಡಿ ” ಲೇಡಿಗೋಶನ್ ಆಸ್ಪತ್ರೆಯಲ್ಲಿ ದಾಖಲಾದವರಿಗೆ ಅವಶ್ಯ ಇದ್ದರೆ ರೆಡ್‌ಕ್ರಾಸ್‌ನಿಂದ ಉಚಿತವಾಗಿ ರಕ್ತ ಪೂರೈಸಲಾಗುತ್ತಿದೆ. ರಕ್ತದ ಕೊರತೆ ನಿವಾರಿಸಲು ಸಂಘ, ಸಂಸ್ಥೆಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರ ಏರ್ಪಡಿಸಬೇಕು. ಯುವಕರು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದರು.
ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷ ರಮೇಶ್ ಕಂಡೆಟ್ಟು ಅಧ್ಯಕ್ಷತೆ ವಹಿಸಿದ್ದರು. ಎಂಎಲ್‌ಸಿ ಕಿಶೋರ್‌ಕುಮಾರ್ ಪುತ್ತೂರು, ಮಾಜಿ ಎಂಎಲ್‌ಸಿ ಕೆ.ಮೋನಪ್ಪ ಭಂಡಾರಿ, ಬಿಜೆಪಿ ಪ್ರಮುಖರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ನಿತಿನ್ ಕುಮಾರ್, ನಂದನ್ ಮಲ್ಯ, ರಮೇಶ್ ಹೆಗ್ಡೆ, ಲಲ್ಲೇಶ್ ಕುಮಾರ್,
ರಾಜ್‌ಗೋಪಾಲ್ ರೈ, ಪೂರ್ಣಿಮಾ, ಕಿಶೋರ್ ಕೊಟ್ಟಾರಿ, ರೆಡ್‌ಕ್ರಾಸ್ ಸೊಸೈಟಿಯ ನಿರ್ದೇಶಕರಾದ ಗುರುದತ್ ನಾಯಕ್, ರಾಘವೇಂದ್ರ ರಾವ್, ಪಿ.ಬಿ.ಹರೀಶ್ ರೈ, ಕಾರ್ಯದರ್ಶಿ ಡಾ.ಸತೀಶ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ಅಶ್ವಿತ್ ಕೊಟ್ಟಾರಿ ಸ್ವಾಗತಿಸಿ, ಮೌನೀಶ್ ಚೌಟ ವಂದಿಸಿದರು, ಋತ್ವಿಕ್ ಕದ್ರಿ ಕಾರ್ಯಕ್ರಮ ನಿರೂಪಿಸಿದರು.
ಶಾಸಕ ಡಿ.ವೇದವ್ಯಾಸ ಕಾಮತ್ ಸಹಿತ ೩೫೦ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು.

ಫೋಟೋ _ಬಿಜೆಪಿ
………..

Read More News

ಸರಕಾರಿ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿ ನಿವೃತ್ತಿ ಬಳಿಕ ಸಂಪಾದಕರಾಗಿ ಹೊಸ ಅಂಗಣ ಪತ್ರಿಕೆಯನ್ನು ನಿರಂತರವಾಗಿ ಹೊರ ತಂದು ದಶಮಾನೋತ್ಸವದ ಸಂಭ್ರಮ ಕಂಡ ಡಾ.ಪಿ.ಹರಿಶ್ಚಂದ್ರ ಸಾಲ್ಯಾನ್ ಅವರ ಸಾಧನೆ ಜನ ಶ್ಲಾಘನೀಯವಾದದ್ದು. ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದಲ್ಲಿ ಅವರ ಕೃಷಿ ಪ್ರಶಂಸನೀಯ ವಾದದ್ದು- ‘ಹೊಸ ಅಂಗಣ’ ದಶಮಾನೋತ್ಸವದಲ್ಲಿ ಶಾಸಕ ಉಮಾನಾಥ ಕೋಟ್ಯಾನ್ ಶ್ಲಾಘನೆ.

Scroll to Top