2026- 27ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಂಗಳೂರಿನ ನೆಹರು ಮೈದಾನದಲ್ಲಿ ನವೆಂಬರ್ 1ರಂದು ನಡೆಯಿತು. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಸಂಘಟನಾ ಕ್ಷೇತ್ರದಲ್ಲಿ *ಸುವರ್ಣ ಮಹೋತ್ಸವ *ಸಂಭ್ರಮದಲ್ಲಿ ಇರುವ ಬಂಟರ ಸಂಘ ಜಪ್ಪು ಆಯ್ಕೆಯಾಗಿದ್ದು, ಬಂಟರ ಸಂಘ ಜಪ್ಪು ಅಧ್ಯಕ್ಷರಾದ ವಸಂತ ಶೆಟ್ಟಿರವರು ಪ್ರಶಸ್ತಿ ಸ್ವೀಕರಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ ಖಾದರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಸಂಸದರಾದ ಬ್ರಿಜೇಶ್ ಚೌಟರವರು ಹಾಗೂ ಶಾಸಕರಾದ ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ .ಡಿ .ಗಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಸಂತೋಷ್ ಕುಮಾರ್ ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಎಂ.ಪಿ ಶ್ರೀನಾಥ್ ,ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ವಿಶ್ವಾಸ್ ಕುಮಾರ್ ದಾಸ್ ಹಾಗೂ ವಿವಿಧ ನಿಗಮಗಳ ಅಧ್ಯಕ್ಷರು ವಿವಿಧ ಅಕಾಡೆಮಿಗಳ ಅಧ್ಯಕ್ಷರು . ಜಿಲ್ಲಾಧಿಕಾರಿಗಳಾದ ದರ್ಶನ್ , ಆಯುಕ್ತರಾದ ರಾಹುಲ್ ರತ್ನಪಾಂಡೆ, ಪೊಲೀಸ್ ಅಧೀಕ್ಷಕರಾದ ಡಾ. ಅರುಣ್ ,ಪೊಲೀಸ್ ಆಯುಕ್ತರದ ಸುಧೀರ್ ಕುಮಾರ್ ರೆಡ್ಡಿ,, ಉಪಸ್ಥಿತರಿದ್ದರು .



















































































































































































