ಕುಲಶೇಖರ ಜ್ಯೋತಿನಗರದ ಶ್ರೀ ಧರ್ಮಶಾಸ್ತ ಮಂದಿರ ಟ್ರಸ್ಟ್ ಕಳೆದ 18 ವರ್ಷಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಕ್ರೀಡೆ, ಅರೋಗ್ಯ, ಶಿಕ್ಷಣ, ಕಲೆ ಹಾಗೂ ಸಾಮಾಜಿಕ ರಂಗಗಳಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಸಾರ್ವಜನಿಕರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿರುತ್ತದೆ. ಹೀಗಾಗಿ ಸಮಾಜಕ್ಕಾಗಿ ಸೇವೆ ಸಲ್ಲಿಸಿದ ತೃಪ್ತಿ ಇದೆ ಎಂದು ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ನ್ಯಾಯವಾದಿ ಶ್ರೀ ರಾಮ್ ಪ್ರಸಾದ್. ಎಸ್. ಹೇಳಿದರು. ಅವರು ಶ್ರೀ ಧರ್ಮಶಾಸ್ತ ಮಂದಿರ ಟ್ರಸ್ಟ್ ವತಿಯಿಂದ ಹಮ್ಮಿಕೊಂಡ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಹಾಗೂ ಸಾಂಸ್ಕೃತಿಕ ಸಿಂಚನ 2026 ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದ ಅಂಗವಾಗಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿ ಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಮಹಿಳೆಯರಿಗಾಗಿ ರಂಗೋಲಿ ಸ್ಪರ್ಧೆ, ಹೂ ಕಟ್ಟುವ ಸ್ಪರ್ಧೆ, ವಿದ್ಯಾರ್ಥಿಗಳಿಗಾಗಿ ಅಯ್ಯಪ್ಪ ಸ್ವಾಮಿ ಚಿತ್ರ ಬಿಡಿಸುವ ಸ್ಪರ್ಧೆ, ಭಕ್ತಿಗೀತೆ ಸ್ಪರ್ಧೆ ಏರ್ಪಡಿಸಲಾಗಿತ್ತು. ಸಾಮೂಹಿಕ ಶ್ರೀ ಸತ್ಯ ನಾರಾಯಣ ಪೂಜೆ ಬಾಲo ಭಟ್ ಮನೆತನದ ಶ್ರೀ ಗಿರಿಧರ್ ಭಟ್ ಪೌರೋಹಿತ್ಯದಲ್ಲಿ ಜರಗಿದ್ದು ಸಾವಿರಾರು ಭಕ್ತಾದಿಗಳು ಭಾಗವಹಿಸಿದ್ದರು. ಸಾಯಂಕಾಲ ಜರಗಿದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಗಳಾಗಿ, ಮಾಜಿ ಮೇಯರ್ ಶ್ರೀ ಭಾಸ್ಕರ್. ಕೆ, ಯುವಮೋರ್ಚಾ ದಕ್ಷಿಣ ಮಂಡಲದ ಅಧ್ಯಕ್ಷ ರಾದ ಶ್ರೀ ಅಶ್ವಿತ್ ಕೊಟ್ಟಾರಿ, ಎಸ್ ಡಿ ಎಂ ಆಯುರ್ವೇದ ಕಾಲೇಜು ಉಡುಪಿಯ ಎಂ. ಡಿ. ಡಾ. ಶೈಲೇಶ್. ವೈ. ಆಚಾರ್ಯ, ವೀರರಾಣಿ ಅಬ್ಬಕ್ಕ ಅಧ್ಯಯನ ಪೀಠ, ಮಂಗಳೂರು ವಿಶ್ವ ವಿದ್ಯಾನಿಲಯದ ಸದಸ್ಯೆ ಶ್ರೀಮತಿ ಧನಲಕ್ಷ್ಮಿ ಗಟ್ಟಿ ರವರು ಭಾಗವಹಿದ್ದರು. ಸಭಾ ಕಾರ್ಯಕ್ರಮದಲ್ಲಿ, ಸ್ಪರ್ಧೆಗಳಲ್ಲಿ ವಿಜೇತರದವರಿಗೆ ಬಹುಮಾನ ವಿತರಿಸಲಾಯಿತು. ಹಿರಿಯರಿಗೆ ಹಾಗೂ ಪ್ರತಿಭಾವಂತ ಮಕ್ಕಳಿಗೆ ಸನ್ಮಾನ ಮಾಡಲಾಯಿತು. ವೇದಿಕೆಯಲ್ಲಿ ಟ್ರಸ್ಟ್ ಕಾರ್ಯದರ್ಶಿ ಶ್ರೀ ಮಹಾಲಿಂಗೇಶ್ವರ ಭಟ್, ಕೋಶಾಧಿಕಾರಿ ಶ್ರೀಮತಿ ಹರಿಣಿ ಪ್ರೇಮ್, ಟ್ರಸ್ಟಿಗಳಾದ ಶ್ರೀ ದಯಾನಂದ ಕತ್ತಲ್ ಸಾರ್, ಶ್ರೀ ಕೂಸಪ್ಪ, ಶ್ರೀ ರಘುರಾಮ ಅಮೀನ್, ಸೇವಾ ಸಮಿತಿ ಅಧ್ಯಕ್ಷ ಶ್ರೀ ಹರೀಶ್, ಮಾತೃ ಮಂಡಳಿ ಅಧ್ಯಕ್ಷೆ ಶ್ರೀಮತಿ ಕಮಲಾಕ್ಷಿ ಮೋಹನ್ ಉಪಸ್ಥಿತರಿದ್ದರು.























































































































































































