ಮುಖ್ಯ ಮಂತ್ರಿ ಸಿದ್ಧರಾಮಯ್ಯರಿಂದ ದ.ಕ . ಪತ್ರಕರ್ತರ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರ ಬಿಡುಗಡೆ

117.2K Views 10 Feb 2024

ದಾವಣಗೆರೆ,ಫೆ.3;ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ,ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ,ದ.ಕ ಜಿಲ್ಲಾ ಪಂಚಾಯತ್,ಸುಳ್ಯ ತಾಲೂಕು ಪಂಚಾಯತ್ ,ದ.ಕ ಜಿಲ್ಲಾ ಪೊಲೀಸ್ ಇಲಾಖೆ. ಹರಿಹರ,ಕೊಲ್ಲಮೊಗರು ಗ್ರಾಮ ಪಂಚಾಯತ್ ಮತ್ತು ಸ್ಥಳೀಯಾಡಳಿತ ಮತ್ತು ಸ್ಥಳೀಯ ಸಂಘ ಸಂಸ್ಥೆಗಳ ಸಹಯೋ ಗದೊಂದಿಗೆ  ಕೊಲ್ಲಮೊಗರುವಿನ ಬಂಗ್ಲೆ ಗುಡ್ಡೆ ಸರಕಾರಿ ಶಾಲಾ ವಠಾರದಲ್ಲಿ ಫೆ.10ರಂದು  ನಡೆಯಲಿರುವ ಪತ್ರಕರ್ತರ 5ನೆ ಗ್ರಾಮ ವಾಸ್ತವ್ಯದ ಮಾಹಿತಿ ಪತ್ರವನ್ನು ಕರ್ನಾಟಕ ರಾಜ್ಯದ ಮುಖ್ಯ ಮಂತ್ರಿ ಸಿದ್ದರಾಮಯ್ಯ ದಾವಣಗೆರೆಯ ಕರ್ನಾಟಕ ಕಾರ್ಯ ನಿರತ ಪತ್ರ ಕರ್ತರ ಸಂಘದ ಸಮಾವೇಶದಲ್ಲಿ ಶನಿವಾರ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ದಾವಣಗೆರೆ ಉಸ್ತುವಾರಿ ಸಚಿವ ಮಲ್ಲಿಕಾರ್ಜುನಯ್ಯ, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅದ್ಯಕ್ಷ ಶಿವಾನಂದ್ ತಗಡೂರು, ಮಾಜಿ ಸಚಿವ ಶಾಮನೂರು ಶಿವ ಶಂಕರಪ್ಪ, ದಕ್ಷಿಣ ಕನ್ನಡ ಜಿಲ್ಲೆ ಕಾರ್ಯ ನಿರತ ಪತ್ರಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಮೊದಲಾದ ವರು  ಉಪಸ್ಥಿತರಿದ್ದರು.

Read More News

Scroll to Top